ಒಂದೇ ಒಂದು ಪಂದ್ಯವನ್ನು ಸೋಲದೆ ವಿಶ್ವಕಪ್ ಫೈನಲ್ ತಲುಪಿದ ತಂಡಗಳ ಪಟ್ಟಿಯಲ್ಲಿ ಭಾರತದ ಹೆಸರು.

17 November 2023

ವೆಸ್ಟ್ ಇಂಡೀಸ್ ತಂಡವು 1975 ರ ಏಕದಿನ ವಿಶ್ವಕಪ್‌ನಲ್ಲಿ ಸತತ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ ಪ್ರವೇಶಿಸಿ ಚಾಂಪಿಯನ್ ಆಗಿತ್ತು.

1979 ರಲ್ಲಿ ನಡೆದ ವಿಶ್ವಕಪ್​ನಲ್ಲಿಯೂ ವೆಸ್ಟ್ ಇಂಡೀಸ್ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು(ಒಂದು ಪಂದ್ಯವು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿತ್ತು) ಚಾಂಪಿಯನ್ ಆಗಿತ್ತು.

1996 ರ ಏಕದಿನ ವಿಶ್ವಕಪ್‌ನಲ್ಲಿ ಶ್ರೀಲಂಕಾ ಆಡಿದ 7 ಪಂದ್ಯಗಳನ್ನು ಗೆದ್ದಿತ್ತು. ಇದರಲ್ಲಿ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಗಳಲ್ಲಿ ವಾಕ್ ಓವರ್ ಪಡೆದುಕೊಂಡಿತ್ತು.

2003 ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್ ತಲುಪಿದ್ದಲ್ಲದೆ ಚಾಂಪಿಯನ್ ಕೂಡ ಆಗಿತ್ತು.

2007 ರ ಏಕದಿನ ವಿಶ್ವಕಪ್‌ನ ಫೈನಲ್ ಆಸ್ಟ್ರೇಲಿಯಾ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್ ತಲುಪಿತ್ತು.

ನ್ಯೂಜಿಲೆಂಡ್ ತಂಡ 2015ರ ಏಕದಿನ ವಿಶ್ವಕಪ್‌ನಲ್ಲಿ ಸತತ 8 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿತ್ತು.

2023ರ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಸೇರಿದಂತೆ ಟೀಂ ಇಂಡಿಯಾ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟಿದೆ.

NEXT: ಐಸಿಸಿ ಈವೆಂಟ್‌ ಫೈನಲ್‌ ಪಂದ್ಯಗಳಲ್ಲಿ ಭಾರತದ ಪ್ರದರ್ಶನ ಹೇಗಿದೆ ಗೊತ್ತಾ?