ತೆರಿಗೆ ಕಟ್ಟುವುದರಲ್ಲೂ ಕೊಹ್ಲಿಯೇ ಕಿಂಗ್..!

5 september 2024

Pic credit: Google

ಪೃಥ್ವಿ ಶಂಕರ

Pic credit: Google

ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು. ಈ ಇಬ್ಬರೂ ಆಟಗಾರರು ಪ್ರತಿ ವರ್ಷ ಕೋಟಿಗಳಲೇ ಆದಾಯ ಗಳಿಸುತ್ತಾರೆ.

Pic credit: Google

ಹೀಗಾಗಿಯೇ ವಿರಾಟ್ ಮತ್ತು ಧೋನಿ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವವರಲ್ಲಿ ಒಬ್ಬರಾಗಿದ್ದಾರೆ.

Pic credit: Google

ಕಳೆದ ಹಣಕಾಸು ವರ್ಷದಲ್ಲಿ ಈ ಇಬ್ಬರು ಆಟಗಾರರ ಪೈಕಿ ಯಾರು ಅತಿ ಹೆಚ್ಚು ಆದಾಯ ತೆರಿಗೆ ಪಾವತಿಸಿದ್ದಾರೆ ಎಂಬುದು ಈ ಬಹಿರಂಗವಾಗಿದೆ.

Pic credit: Google

ಫಾರ್ಚೂನ್ ಇಂಡಿಯಾ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಏಪ್ರಿಲ್ 2023 ರಿಂದ ಮಾರ್ಚ್ 2024 ರವರೆಗೆ 66 ಕೋಟಿ ರೂಪಾಯಿ ತೆರಿಗೆ ಪಾವತಿಸಿದ್ದಾರೆ.

Pic credit: Google

ಇದರೊಂದಿಗೆ ಕಳೆದ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ಆದಾಯ ತೆರಿಗೆ ಪಾವತಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

Pic credit: Google

ಕಳೆದ ಹಣಕಾಸು ವರ್ಷದಲ್ಲಿ 38 ಕೋಟಿ ರೂಪಾಯಿ ತೆರಿಗೆ ಪಾವತಿಸಿರುವ ಎಂಎಸ್ ಧೋನಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

Pic credit: Google

ಸಚಿನ್ ತೆಂಡೂಲ್ಕರ್ ಅವರು ಏಪ್ರಿಲ್ 2023 ರಿಂದ ಮಾರ್ಚ್ 2024 ರವರೆಗೆ 28 ​​ಕೋಟಿ ರೂಪಾಯಿ ತೆರಿಗೆ ಪಾವತಿಸಿದ್ದು, ಕಳೆದ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ಆದಾಯ ತೆರಿಗೆ ಪಾವತಿಸುವ ವಿಚಾರದಲ್ಲಿ ಅವರು ಮೂರನೇ ಸ್ಥಾನದಲ್ಲಿದ್ದಾರೆ.

Pic credit: Google

ಇವರನ್ನು ಹೊರತುಪಡಿಸಿ ಕಳೆದ ಹಣಕಾಸು ವರ್ಷದಲ್ಲಿ ಸೌರವ್ ಗಂಗೂಲಿ 23 ಕೋಟಿ, ಹಾರ್ದಿಕ್ ಪಾಂಡ್ಯ 13 ಕೋಟಿ ಮತ್ತು ರಿಷಬ್ ಪಂತ್ 10 ಕೋಟಿ ತೆರಿಗೆ ಪಾವತಿಸಿದ್ದಾರೆ.