ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿ- ರೋಹಿತ್ ಪ್ರದರ್ಶನ ಹೇಗಿದೆ?
09 January 2025
Pic credit: Google
ಪೃಥ್ವಿ ಶಂಕರ
ಫೆಬ್ರವರಿಯಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಸಿದ್ಧತೆ ಆರಂಭಿಸಿದೆ. ಆದರೆ ಅದಕ್ಕೂ ಮುನ್ನ ಈ ಟೂರ್ನಿಯಲ್ಲಿ ಕೊಹ್ಲಿ ಮತ್ತು ರೋಹಿತ್ ಅವರ ಪ್ರದರ್ಶನ ಹೇಗಿದೆ ಎಂಬುದನ್ನು ತಿಳಿದಕೊಳ್ಳೋಣ.
Pic credit: Google
ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿದ್ದರೆ, ರೋಹಿತ್ ಶರ್ಮಾ 10 ಪಂದ್ಯಗಳನ್ನು ಆಡಿದ್ದಾರೆ.
Pic credit: Google
ವಿರಾಟ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಇದುವರೆಗೆ ಒಟ್ಟು 13 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 529 ರನ್ ಕಲೆಹಾಕಿದ್ದಾರೆ. ಈ ಟೂರ್ನಿಯಲ್ಲಿ ಅವರ ಗರಿಷ್ಠ ಸ್ಕೋರ್ ಅಜೇಯ 96 ರನ್ ಆಗಿದೆ.
Pic credit: Google
ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಇದುವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು, 481 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರ ಗರಿಷ್ಠ ಸ್ಕೋರ್ ಅಜೇಯ 123 ರನ್ ಆಗಿದೆ.
Pic credit: Google
ವಿರಾಟ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿರುವ 12 ಇನ್ನಿಂಗ್ಸ್‌ಗಳಲ್ಲಿ ಒಟ್ಟು 5 ಅರ್ಧಶತಕ ದಾಖಲಿಸಿದ್ದು ಅವರ ಹೆಸರಿನಲ್ಲಿ ಒಂದು ಶತಕವೂ ಇಲ್ಲ.
Pic credit: Google
ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದು ಶತಕ ಮತ್ತು 4 ಅರ್ಧಶತಕಗಳನ್ನು ಬಾರಿಸಿದ್ದಾರೆ.
Pic credit: Google
ವಿರಾಟ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ 88.16 ಸರಾಸರಿ ಮತ್ತು 92.32 ಸ್ಟ್ರೈಕ್ ರೇಟ್ ಹೊಂದಿದ್ದಾರೆ.
Pic credit: Google
ಇತ್ತಲ್ಲ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿಯಲ್ಲಿ 53.44 ಸರಾಸರಿ ಮತ್ತು 82.50. ಸ್ಟ್ರೈಕ್ ರೇಟ್ ಹೊಂದಿದ್ದಾರೆ.
Pic credit: Google
ವಿರಾಟ್ ಕೊಹ್ಲಿ ಇದುವರೆಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 53 ಬೌಂಡರಿಗಳು ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
Pic credit: Google
ರೋಹಿತ್ ಶರ್ಮಾ ಇದುವರೆಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 51 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.