ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ
Pakistan News: ಕಳೆದ ವಾರ 2 ತಂಡಗಳ ನಡುವೆ ಫುಟ್ಬಾಲ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದಾಗ ಏರ್‌ಪೋರ್ಟ್ ರಸ್ತೆಯಲ್ಲಿ ಸ್ಫೋಟ ಸಂಭವಿಸಿತ್ತು.
ಬಲೂಚಿಸ್ತಾನ್: ಪಾಕಿಸ್ತಾನದ ಕ್ವೆಟ್ಟಾದಲ್ಲಿ (Pakistan Quetta) ಗ್ರೆನೇಡ್ ಸ್ಫೋಟಗೊಂಡ ಕಾರಣದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ, 11 ಮಂದಿ ಗಾಯಗೊಂಡಿದ್ದಾರೆ. ಬಲೂಚಿಸ್ತಾನದ ಕ್ವೆಟ್ಟಾದ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕಳೆದ ವಾರ ನಡೆದ ಇದೇ ರೀತಿಯ ಘಟನೆಯಲ್ಲಿ ಕ್ವೆಟ್ಟಾದ ಟರ್ಬಟ್ ಕ್ರೀಡಾಂಗಣದ ಹೊರಗೆ ನಡೆದ ಸ್ಫೋಟದಲ್ಲಿ ಪೊಲೀಸ್ ಸೇರಿದಂತೆ ಮೂವರು ಗಾಯಗೊಂಡಿದ್ದರು.
ಕಳೆದ ವಾರ 2 ಸ್ಥಳೀಯ ತಂಡಗಳ ನಡುವೆ ಫುಟ್ಬಾಲ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದಾಗ ಏರ್‌ಪೋರ್ಟ್ ರಸ್ತೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ನ್ಯೂಸ್ ಇಂಟರ್‌ನ್ಯಾಶನಲ್ ತಿಳಿಸಿತ್ತು. ಈ ಸ್ಫೋಟದ ನಂತರ ಗುಂಡಿನ ದಾಳಿ ನಡೆಸಲಾಗಿತ್ತು. ಇದರಿಂದ ಫುಟ್ಬಾಲ್ ಕ್ರೀಡಾಂಗಣದಲ್ಲಿ ಕೆಲ ಕಾಲ ಭೀತಿ ಉಂಟಾಗಿತ್ತು.
ಖೈಬರ್ ಪಖ್ತುಂಖ್ವಾದಲ್ಲಿ ಪೊಲೀಸರ ಮೇಲೆ ಹೆಚ್ಚುತ್ತಿರುವ ದಾಳಿಯ ಘಟನೆಗಳನ್ನು ಗಮನಿಸಿದ ಪಾಕಿಸ್ತಾನಿ ಅಧಿಕಾರಿಗಳು ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಭದ್ರತೆಯನ್ನು ಬಲಪಡಿಸಿದ್ದಾರೆ. ಭದ್ರತಾ ಲೋಪಗಳಿಗೆ ಕಾರಣವಾದ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.
ಇದನ್ನೂ ಓದಿ: ಶುಭಕೃತ ನಾಮ ಸಂವತ್ಸರದಲ್ಲಿ ಶುಭ ಆಗೋದಿಲ್ಲ: ಪ್ರಕೃತಿ ಅಲ್ಲೋಲ ಕಲ್ಲೋಲವಾಗುತ್ತೆ ಎಂದು ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ
ಕರ್ತವ್ಯದಲ್ಲಿರುವ ಪೊಲೀಸರು ಜಾಗರೂಕರಾಗಿರಬೇಕು ಮತ್ತು ಕರ್ತವ್ಯದ ಸಮಯದಲ್ಲಿ ಹೆಲ್ಮೆಟ್ ಮತ್ತು ಬುಲೆಟ್ ಪ್ರೂಫ್ ಜಾಕೆಟ್ ಎರಡನ್ನೂ ಧರಿಸಲು ಆದೇಶಿಸಲಾಗಿದೆ. ಕರ್ತವ್ಯದ ಸಮಯದಲ್ಲಿ ಪೊಲೀಸರಿಗೆ ಮೊಬೈಲ್ ಫೋನ್ ಬಳಸದಂತೆ ಎಚ್ಚರಿಕೆ ನೀಡಲಾಗಿದೆ.
ಕಳೆದ ಮೂರ್ನಾಲ್ಕು ತಿಂಗಳ ಅವಧಿಯಲ್ಲಿ ನಡೆದ ಇಂತಹ ದಾಳಿಯಲ್ಲಿ ನಾಲ್ವರು ಪೊಲೀಸರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಒಂದು ವಾರದ ಹಿಂದೆ ತಿರಾಹ್‌ನ ಚೆಕ್‌ಪೋಸ್ಟ್‌ನ ಮೇಲೆ ಹ್ಯಾಂಡ್ ಗ್ರೆನೇಡ್‌ನಿಂದ ದಾಳಿ ನಡೆಸಲಾಗಿತ್ತು.
ಇದನ್ನೂ ಓದಿ: ಪಾಕಿಸ್ತಾನದ ಫುಟ್ಬಾಲ್ ಕ್ರೀಡಾಂಗಣದ ಬಳಿ ಬಾಂಬ್ ಸ್ಫೋಟ! ಪಂದ್ಯ ನಡೆಯುತ್ತಿರುವಾಗಲೇ ಸಂಭವಿಸಿದ ದುರ್ಘಟನೆ
ಇದಕ್ಕೂ ಮೊದಲು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮರ್ದಾನ್ ಜಿಲ್ಲೆಯ ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಪೋಲೀಸ್ ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಸೇರಿದಂತೆ ಇತರ ನಾಲ್ವರು ಗಾಯಗೊಂಡಿದ್ದರು.