
ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ಗಳು ಪತನವಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಪೆರಾಕ್ನ ಲುಮುಟ್ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್ಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ಫ್ರೀ ಮಲೇಷ್ಯಾ ಟುಡೇ ವರದಿ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ. ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೃತದೇಹಗಳನ್ನು ಹೆಲಿಕಾಪ್ಟರ್ಗಳಿಂದ ಹೊರ ತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:36 am, Tue, 23 April 24