China Knife Attack: ಚೀನಾದ ಆಸ್ಪತ್ರೆಯಲ್ಲಿ ಕಂಡ ಕಂಡವರ ಮೇಲೆ ಚಾಕುವಿನಿಂದ ಹಲ್ಲೆ, 10 ಮಂದಿ ಸಾವು
ಚೀನಾದ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ದಾಳಿ ನಡೆಸಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 21ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಸೆರೆಹಿಡಿಯಲಾದ ಶಂಕಿತನು ನಿಜವಾಗಿಯೂ ದಾಳಿಕೋರನೇ ಎಂಬುದು ಸ್ಪಷ್ಟವಾಗಿಲ್ಲ.

ಚೀನಾದ ನೈಋತ್ಯ ಪ್ರಾಂತ್ಯದ ಯುನ್ನಾನ್‌ನಲ್ಲಿರುವ ಆಸ್ಪತ್ರೆಯೊಂದರಲ್ಲಿ ವ್ಯಕ್ತಿ ಚಾಕುವಿನಿಂದ ಕಂಡ ಕಂಡವರ ಮೇಲೆ ದಾಳಿ ನಡೆಸಿದ್ದು, ಪರಿಣಾಮವಾಗಿ 10 ಮಂದಿ ಸಾವನ್ನಪ್ಪಿದ್ದು, 21ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಝೆನ್ಕ್ಸಿಯಾಂಗ್ ಕೌಂಟಿಯ ಸ್ಥಳೀಯ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದ್ದು, ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಧಿಕಾರಿಗಳು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಸೆರೆಹಿಡಿಯಲಾದ ಶಂಕಿತನು ನಿಜವಾಗಿಯೂ ದಾಳಿಕೋರನೇ ಎಂಬುದು ಸ್ಪಷ್ಟವಾಗಿಲ್ಲ.ಈ ಘಟನೆ ಮಧ್ಯಾಹ್ನ 1.20 ರ ಸುಮಾರಿಗೆ ಸಂಭವಿಸಿದೆ. ಇದರಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಆದಾಗ್ಯೂ, ದಾಳಿಕೋರ ಅಥವಾ ಆತನ ದಾಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ನೀಡಲಾಗಿಲ್ಲ.
ಚೀನಾದಲ್ಲಿ ಈ ರೀತಿಯ ಪ್ರಕರಣಗಳು ನಡೆಯುವುದು ತುಂಬಾ ವಿರಳ, ಅಲ್ಲಿನ ನಾಗರಿಕರು ಬಂದೂಕು ಹೊಂದುವಂತಿಲ್ಲ. ಕಳೆದ ಆಗಸ್ಟ್‌ನಲ್ಲಿ ಯುನ್ನಾನ್‌ನಲ್ಲಿ, ಮಾನಸಿಕ ಅಸ್ವಸ್ಥತೆಯ ಇತಿಹಾಸ ಹೊಂದಿರುವ ವ್ಯಕ್ತಿಯೊಬ್ಬರು ಚಾಕುವಿನಿಂದ ಜನರ ಮೇಲೆ ದಾಳಿ ಮಾಡಿದ ನಂತರ ಇಬ್ಬರು ಸಾವನ್ನಪ್ಪಿದರು ಮತ್ತು ಏಳು ಮಂದಿ ಗಾಯಗೊಂಡಿದ್ದರು.
ಮತ್ತಷ್ಟು ಓದಿ: ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು
ಒಂದು ತಿಂಗಳ ಹಿಂದೆ, ದಕ್ಷಿಣ ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಶಿಶುವಿಹಾರದಲ್ಲಿ ಆರು ಮಂದಿ ಮೃತಪಟ್ಟಿದ್ದರು ಮತ್ತು ಒಬ್ಬರು ಗಾಯಗೊಂಡಿದ್ದರು. ಮತ್ತು ಆಗಸ್ಟ್ 2022 ರಲ್ಲಿ, ಆಗ್ನೇಯ ಚೀನಾದ ಜಿಯಾಂಗ್ಕ್ಸಿ ಪ್ರಾಂತ್ಯದ ಶಿಶುವಿಹಾರದಲ್ಲಿ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದರು ಮತ್ತು ಆರು ಮಂದಿ ಗಾಯಗೊಂಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:41 pm, Tue, 7 May 24




