AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಎಲ್​ಸಾಲ್ವಡಾರ್ ಫುಟ್ಬಾಲ್​​​ ಕ್ರೀಡಾಂಗಣದಲ್ಲಿ ಭೀಕರ ಘಟನೆ: ​ಕಾಲ್ತುಳಿತಕ್ಕೊಳಗಾಗಿ 12 ಜನ ಸಾವು

ಅಲಿಯಾಂಜಾ ಮತ್ತು ಎಫ್‌ಎಎಸ್ ತಂಡಗಳ ನಡುವಿನ ಪಂದ್ಯವನ್ನು ವೀಕ್ಷಿಸಲು ಅಮೆರಿಕದ ಎಲ್​ಸಾಲ್ವಡಾರ್ ರಾಜಧಾನಿ ಸ್ಯಾನ್​ ಸಾಲ್ವಡಾರ್​ನಲ್ಲಿ​​​ರುವ ಕಸ್ಕಟ್ಲಾನ್ ಕ್ರೀಡಾಂಗಣಕ್ಕೆ ಪ್ರವೇಶಿಸಲು ಅಭಿಮಾನಿಗಳು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೆರಿಕದ ಎಲ್​ಸಾಲ್ವಡಾರ್ ಫುಟ್ಬಾಲ್​​​ ಕ್ರೀಡಾಂಗಣದಲ್ಲಿ ಭೀಕರ ಘಟನೆ: ​ಕಾಲ್ತುಳಿತಕ್ಕೊಳಗಾಗಿ 12 ಜನ ಸಾವು
ಎಲ್​ಸಾಲ್ವಡಾರ್ ಫುಟ್ಬಾಲ್​​​ ಕ್ರೀಡಾಂಗಣ
ಆಯೇಷಾ ಬಾನು
|

Updated on: May 21, 2023 | 2:33 PM

Share

ಸ್ಯಾನ್ ಸಾಲ್ವಡೋರ್: ಅಮೆರಿಕದ ಎಲ್​ಸಾಲ್ವಡಾರ್​​​ ಕ್ರೀಡಾಂಗಣದಲ್ಲಿ(El Salvador Football Stadium) ನಡೆಯುತ್ತಿದ್ದ ಸ್ಥಳೀಯ ಫುಟ್ಬಾಲ್ ಪಂದ್ಯಾವಳಿ ವೀಕ್ಷಿಸಲು ಬಂದಿದ್ದ ಅಭಿಮಾನಿಗಳ ನಡುವೆ ನೂಕುನುಗ್ಗಲಾಗಿದೆ. ಈ ವೇಳೆ ಕಾಲ್ತುಳಿತ ಉಂಟಾಗಿ 12 ಜನ ಮೃತಪಟ್ಟ ಘಟನೆ ನಡೆದಿದೆ. ಅಲಿಯಾಂಜಾ ಮತ್ತು ಎಫ್‌ಎಎಸ್ ತಂಡಗಳ ನಡುವಿನ ಪಂದ್ಯವನ್ನು ವೀಕ್ಷಿಸಲು ಅಮೆರಿಕದ ಎಲ್​ಸಾಲ್ವಡಾರ್ ರಾಜಧಾನಿ ಸ್ಯಾನ್​ ಸಾಲ್ವಡಾರ್​ನಲ್ಲಿ​​​ರುವ ಕಸ್ಕಟ್ಲಾನ್ ಕ್ರೀಡಾಂಗಣಕ್ಕೆ ಬಂದಿದ್ದ ಅಭಿಮಾನಿಗಳು ಒಳಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದು ಅನೇಕರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ತುರ್ತು ಸಿಬ್ಬಂದಿ ಕ್ರೀಡಾಂಗಣದಿಂದ ಜನರನ್ನು ಸ್ಥಳಾಂತರಿಸಿದ್ದು ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. ಕ್ರೀಡಾಂಗಣದಲ್ಲಿ ನೂರಾರು ಪೊಲೀಸ್ ಅಧಿಕಾರಿಗಳು ಮತ್ತು ಆಂಬ್ಯುಲೆನ್ಸ್ ನಿಂತಿವೆ. Stampede At El Salvador Football Stadium (1)

ಎಲ್​ಸಾಲ್ವಡಾರ್ ಫುಟ್ಬಾಲ್​​​ ಕ್ರೀಡಾಂಗಣಇದನ್ನೂ ಓದಿ: ಸುಡಾನ್‌ನಲ್ಲಿ ಗುಂಡಿನ ದಾಳಿಗೆ ಪ್ರಾಣ ಕಳೆದುಕೊಂಡ ಭಾರತೀಯ; 1 ತಿಂಗಳ ಬಳಿಕ ಕುಟುಂಬಕ್ಕೆ ಪಾರ್ಥಿವ ಶರೀರ ರವಾನೆ

ದೇಶದ ಆಸ್ಪತ್ರೆಗಳಲ್ಲಿ ಎಲ್ಲಾ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಫ್ರಾನ್ಸಿಸ್ಕೊ ​​ಅಲಾಬಿ ಮಾಹಿತಿ ನೀಡಿದ್ದಾರೆ. ನಾಗರಿಕ ರಕ್ಷಣಾ ಸೇವೆಯ ಮೊದಲ ಪ್ರತಿಸ್ಪಂದಕರು ಸ್ಥಳದಲ್ಲಿದ್ದಾರೆ ಎಂದು ಆಂತರಿಕ ಸಚಿವ ಜುವಾನ್ ಕಾರ್ಲೋಸ್ ಬಿಡೆಗೈನ್ ಹೇಳಿದ್ದಾರೆ. ಆಸ್ಪತ್ರೆಗಳಲ್ಲಿ 500 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತುರ್ತು ಸೇವೆಗಳ ಗುಂಪಿನ ಕಮಾಂಡೋಸ್ ಡಿ ಸಾಲ್ವಮೆಂಟೊದ ವಕ್ತಾರ ಕಾರ್ಲೋಸ್ ಫ್ಯೂಯೆಂಟೆಸ್ ತಿಳಿಸಿದ್ದಾರೆ.

ವಿದೇಶದ ಇತರೆ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ