AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ಬಳಿ ಕಪ್ಪು ಸಮುದ್ರದ ಬಂದರಿನಲ್ಲಿ ದಾಳಿ; ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಉಕ್ರೇನ್‌ನ ಚೊರ್ನೊಮೊರ್ಸ್ಕ್ ಬಂದರಿನಲ್ಲಿ ನಿಲ್ಲಿಸಲಾಗಿರುವ ಎಂ.ವಿ. ಅಮೀರ್ 1 ಸರಕು ಸಾಗಣೆ ಹಡಗಿನಲ್ಲಿ 13 ಭಾರತೀಯ ನಾವಿಕರು ಸೇರಿದಂತೆ 15 ಸಿಬ್ಬಂದಿ ಸಿಲುಕಿಕೊಂಡಿದ್ದಾರೆ. ಕಪ್ಪು ಸಮುದ್ರದ ಬಂದರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ನೌಕಾಯಾನದ ಸುರಕ್ಷತೆಗೆ ಭಾರಿ ಬೆದರಿಕೆಯನ್ನು ಒಡ್ಡಿದೆ. ಈ ಪ್ರದೇಶದಲ್ಲಿ ತೀವ್ರ ಸಂಘರ್ಷ ಮುಂದುವರಿದಿರುವ ಬೆನ್ನಲ್ಲೇ ಈ ಹಡಗು ಚೊರ್ನೊಮೊರ್ಸ್ಕ್‌ನಲ್ಲಿಯೇ ಉಳಿದುಕೊಂಡಿದ್ದು, ಸಿಬ್ಬಂದಿ ಅಪಾಯಕಾರಿ ವಾತಾವರಣದಲ್ಲಿ ಸಿಲುಕಿದ್ದಾರೆ.

ಉಕ್ರೇನ್ ಬಳಿ ಕಪ್ಪು ಸಮುದ್ರದ ಬಂದರಿನಲ್ಲಿ ದಾಳಿ; ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
Black Sea Attack In UkraineImage Credit source: x
ಸುಷ್ಮಾ ಚಕ್ರೆ
|

Updated on: Jul 29, 2026 | 9:10 PM

Share

ಕೈವ್, ಜುಲೈ 29: ಉಕ್ರೇನ್‌ನ ಚೊರ್ನೊಮೊರ್ಸ್ಕ್ ಬಂದರಿನ ಬಳಿ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ಮುಂದುವರಿದಿರುವ ಬೆನ್ನಲ್ಲೇ, ಅಲ್ಲಿನ ಸರಕು ಸಾಗಣೆ ಹಡಗೊಂದರಲ್ಲಿ ಸಿಲುಕಿರುವ 15 ಸಿಬ್ಬಂದಿಯ ಪೈಕಿ 13 ಭಾರತೀಯ ನಾವಿಕರು ಸೇರಿದ್ದಾರೆ ಎಂದು ‘ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ’ (FSUI) ತಿಳಿಸಿದೆ. ಕಪ್ಪು ಸಮುದ್ರದ ಬಂದರಿನ ಬಳಿ ರಷ್ಯಾ ಮತ್ತು ಉಕ್ರೇನ್ (Russia-Ukraine War) ನಡುವೆ ಭೀಕರ ಕಾಳಗ ಮುಂದುವರಿದಿದೆ. ಅಲ್ಲಿ ಸಿಲುಕಿರುವ ನಾವಿಕರು ಅತ್ಯಂತ ಭಯಾನಕ ಪರಿಸ್ಥಿತಿಯಲ್ಲಿದ್ದಾರೆ. ಯಾವ ಕ್ಷಣದಲ್ಲಾದರೂ ನೇರ ದಾಳಿ ನಡೆಯಬಹುದು ಎಂಬ ಭಯದಲ್ಲಿ ಜೀವಿಸುತ್ತಿದ್ದಾರೆ ಎಂದು ನಾವಿಕರ ಸಂಘಟನೆ ಎಚ್ಚರಿಸಿದೆ.

“ಹಡಗಿನ ತೀರಾ ಹತ್ತಿರದಲ್ಲೇ ಪದೇ ಪದೇ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಲಾಗುತ್ತಿದೆ. ಸಿಬ್ಬಂದಿಯು ಯಾವುದೇ ಕ್ಷಣದಲ್ಲಿ ನೇರ ದಾಳಿಗೆ ತುತ್ತಾಗಬಹುದು ಎಂಬ ಭೀತಿಯಲ್ಲಿದ್ದಾರೆ” ಎಂದು ಸಂಸ್ಥೆ ಹೇಳಿದ್ದು, ಭಾರತ ಸರ್ಕಾರ, ಹಡಗಿನ ಮಾಲೀಕರು, ಹಡಗಿನ ಧ್ವಜದ ದೇಶ ಹಾಗೂ ಇತರ ಅಧಿಕಾರಿಗಳು ತಕ್ಷಣವೇ ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿ, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದೆ.

ಇದನ್ನೂ ಓದಿ: ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು, 21 ಜನರಿಗೆ ಗಾಯ

ನಾವಿಕರ ಸಂಘಟನೆಯು ಹಡಗಿನಿಂದಲೇ ಚಿತ್ರೀಕರಿಸಲಾಗಿದೆ ಎನ್ನಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಹಡಗಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪ್ರಮಾಣದ ದಟ್ಟ ಹೊಗೆ ಏಳುತ್ತಿರುವುದು ಕಂಡುಬಂದಿದೆ. ಇದು ಬಂದರಿನಲ್ಲಿರುವ ತೀವ್ರ ಭದ್ರತಾ ಅಭದ್ರತೆಯನ್ನು ಎತ್ತಿಹಿಡಿದಿದೆ.

ಅಲ್ಲಿ ಸಿಲುಕಿರುವ 13 ಭಾರತೀಯ ನಾವಿಕರು ಸಂಕಷ್ಟದಲ್ಲಿರುವ ವರದಿಗಳ ಕುರಿತು ಭಾರತದ ವಿದೇಶಾಂಗ ಸಚಿವಾಲಯವಾಗಲಿ ಅಥವಾ ಸಂಬಂಧಪಟ್ಟ ಹಡಗು ಕಂಪನಿಯಾಗಲಿ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?