AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ಲೆಂಡ್​​ನ ನೈಟ್​ ಕ್ಲಬ್​ನಲ್ಲಿ ಬೆಂಕಿ ಅವಘಡ; 13 ಜನ ಸಾವು, 40 ಮಂದಿಗೆ ಗಾಯ

ಈ ವಿಡಿಯೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ನೈಟ್ ಕ್ಲಬ್‌ನಿಂದ ಕಿರುಚುತ್ತಾ ಓಡಿಹೋಗುತ್ತಿರುವುದನ್ನು ನೋಡಬಹುದು. ಈ ವೇಳೆ ನೈಟ್ ಕ್ಲಬ್​ನಲ್ಲಿದ್ದವರ ಬಟ್ಟೆಗಳು ಸುಟ್ಟುಹೋಗಿವೆ.

ಥಾಯ್ಲೆಂಡ್​​ನ ನೈಟ್​ ಕ್ಲಬ್​ನಲ್ಲಿ ಬೆಂಕಿ ಅವಘಡ; 13 ಜನ ಸಾವು, 40 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರImage Credit source: India Today
TV9 Web
| Edited By: |

Updated on: Aug 05, 2022 | 8:58 AM

Share

ಬ್ಯಾಂಕಾಕ್: ಥಾಯ್ಲೆಂಡ್​​ನ (Thailand) ನೈಟ್‌ ಕ್ಲಬ್‌ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡು, 13 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 40 ಜನರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬ್ಯಾಂಕಾಕ್‌ನಿಂದ ದಕ್ಷಿಣಕ್ಕೆ 150 ಕಿ.ಮೀ. ದೂರದಲ್ಲಿರುವ ಚೋನ್‌ಬುರಿ ಪ್ರಾಂತ್ಯದ ಸತ್ತಾಹಿಪ್ ಜಿಲ್ಲೆಯ ಮೌಂಟೇನ್ ಬಿ ನೈಟ್‌ ಕ್ಲಬ್​ನಲ್ಲಿ ಇಂದು (ಶುಕ್ರವಾರ) ಬೆಳಗಿನ ಜಾವ ಬೆಂಕಿ (Fire Accident) ಕಾಣಿಸಿಕೊಂಡಿದೆ ಎಂದು ಸಾವಾಂಗ್ ರೋಜನಾಥಮ್ಮಸಾತನ್ ಪಾರುಗಾಣಿಕಾ ಫೌಂಡೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೆಸ್ಕ್ಯೂ ಸರ್ವಿಸ್ ಪೋಸ್ಟ್ ಮಾಡಿದ ವಿಡಿಯೋ ತುಣುಕೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ನೈಟ್ ಕ್ಲಬ್‌ನಿಂದ ಕಿರುಚುತ್ತಾ ಓಡಿಹೋಗುತ್ತಿರುವುದನ್ನು ನೋಡಬಹುದು. ಈ ವೇಳೆ ನೈಟ್ ಕ್ಲಬ್​ನಲ್ಲಿದ್ದವರ ಬಟ್ಟೆಗಳು ಸುಟ್ಟುಹೋಗಿವೆ.

ಇದನ್ನೂ ಓದಿ: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ

ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸುಮಾರು 3 ಗಂಟೆಗಳ ನಂತರ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ಹಿಂದೆ 2009ರಲ್ಲಿ ಬ್ಯಾಂಕಾಕ್‌ನ ಸ್ವಾಂಕಿ ಸ್ಯಾಂಟಿಕಾ ಕ್ಲಬ್‌ನಲ್ಲಿ ಹೊಸ ವರ್ಷದ ಮೊದಲ ದಿನದ ಪಾರ್ಟಿಯಲ್ಲಿ ಭಾರೀ ಸ್ಫೋಟ ಉಂಟಾಗಿತ್ತು. ಈ ಘಟನೆಯಲ್ಲಿ 67 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಬರ್ನ್ ಎಂಬ ರಾಕ್ ಬ್ಯಾಂಡ್ ವೇದಿಕೆಯಲ್ಲಿ ಕಾರ್ಯಕ್ರಮ ನೀಡುವಾಗ ಬೆಂಕಿ ಪ್ರಾರಂಭವಾಯಿತು. ಸ್ಯಾಂಟಿಕಾ ಕ್ಲಬ್ ಮಾಲೀಕರಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇತ್ತೀಚೆಗಷ್ಟೇ 2012ರಲ್ಲಿ ವಿದೇಶಿ ಪ್ರವಾಸಿಗರಿಗೆ ಆಯಸ್ಕಾಂತವಾದ ಫುಕೆಟ್ ದ್ವೀಪದ ಕ್ಲಬ್‌ನಲ್ಲಿ ವಿದ್ಯುತ್ ದೋಷದಿಂದ ಉಂಟಾದ ಬೆಂಕಿಯಲ್ಲಿ 4 ಜನರು ಸಾವನ್ನಪ್ಪಿದ್ದರು.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ