ಸೌದಿ ಅರೇಬಿಯಾದ ಅರಾಮ್ಕೋ ಹೆಲಿಕಾಪ್ಟರ್ ಪತನ; 14 ಜನ ಸಾವು
ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ಪ್ರಸಿದ್ಧ ತೈಲ ದೈತ್ಯ ಸಂಸ್ಥೆ ಸೌದಿ ಅರಾಮ್ಕೋ (Saudi Aramco)ಗೆ ಸೇರಿದ ಹೆಲಿಕಾಪ್ಟರ್ ಇಂದು ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ 14 ಜನರು ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್ ತನೂರಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ರಾಸ್ ತನೂರಾ ಪಶ್ಚಿಮ ಏಷ್ಯಾ ವಲಯದಲ್ಲೇ ಅತಿ ದೊಡ್ಡ ತೈಲ ಶುದ್ಧೀಕರಣ ಘಟಕವನ್ನು ಹೊಂದಿರುವ ಪ್ರಮುಖ ಕೇಂದ್ರವಾಗಿದೆ. ಇಂದು ಮುಂಜಾನೆ ಸ್ಥಳೀಯ ಸಮಯ ಸುಮಾರು 6 ಗಂಟೆಗೆ ಈ ಅಪಘಾತ ಸಂಭವಿಸಿದೆ.

ನವದೆಹಲಿ, ಜೂನ್ 28: ಸೌದಿ ಅರೇಬಿಯಾದ ರಾಸ್ ತನೂರಾ (Ras Tanura) ಪ್ರದೇಶದಲ್ಲಿ ಇಂದು (ಭಾನುವಾರ) ಸೌದಿ ಅರಾಮ್ಕೋ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿದ್ದು, 14 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆ ದೇಶದ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಂದು ಮುಂಜಾನೆ ಹೆಲಿಕಾಪ್ಟರ್ (Helicopter) ಪತನಗೊಂಡಿದೆ. ಅಧಿಕಾರಿಗಳು ಮೃತಪಟ್ಟವರ ಬಗ್ಗೆ ಅಥವಾ ಈ ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಹೆಲಿಕಾಪ್ಟರ್ ಸೌದಿ ಅರೇಬಿಯಾದ ಇಂಧನ ದೈತ್ಯ ಸಂಸ್ಥೆಯಾದ ‘ಸೌದಿ ಅರಾಮ್ಕೋ’ಗೆ ಸೇರಿದ್ದಾಗಿದೆ. ಮೃತಪಟ್ಟ ಎಲ್ಲಾ 14 ಜನರೂ ಸೌದಿ ಅರೇಬಿಯಾದ ನಾಗರಿಕರಾಗಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾ 14 ಜನರೂ ಸೌದಿ ಅರೇಬಿಯಾದ ನಾಗರಿಕರಾಗಿದ್ದಾರೆ ಎಂದು ಸೌದಿ ಪ್ರೆಸ್ ಏಜೆನ್ಸಿ ಧೃಡಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸೌದಿ ಇಂಧನ ಸಚಿವಾಲಯವು ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದು, ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆ ಆರಂಭಿಸಲಾಗಿದೆ.
ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಮೇಲೆ ಅಮೆರಿಕದ ಹೆಲಿಕಾಪ್ಟರ್ ಪತನ; ಇರಾನ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆಂದ ಟ್ರಂಪ್
ವಿಮಾನ ಪತನಕ್ಕೆ ಕಾರಣ ಏನೆಂಬುದರ ಕುರಿತು ಅಧಿಕಾರಿಗಳು ಇನ್ನೂ ಯಾವುದೇ ಹೆಚ್ಚಿನ ಮಾಹಿತಿಗಳನ್ನು ಹಂಚಿಕೊಂಡಿಲ್ಲ. ಅಪಘಾತಕ್ಕೆ ಕಾರಣ ಏನೆಂಬುದನ್ನು ಪತ್ತೆಹಚ್ಚಲು ತನಿಖೆಯನ್ನು ಪ್ರಾರಂಭಿಸಲಾಗಿದೆ. ನಿಖರವಾದ ಕಾರಣವನ್ನು ನಿರ್ಧರಿಸಲು ಇದು ಸೂಕ್ತ ಸಮಯವಲ್ಲ. ತನಿಖೆ ಮುಂದುವರೆದಂತೆ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೌದಿಯ ಇಂಧನ ಸಚಿವಾಲಯವು ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದೆ ಮತ್ತು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದೆ.
ಪಶ್ಚಿಮ ಏಷ್ಯಾ ವಲಯದಲ್ಲೇ ಅತಿ ದೊಡ್ಡ ತೈಲ ಶುದ್ಧೀಕರಣ ಘಟಕವನ್ನು ಹೊಂದಿರುವ ಮತ್ತು ಸೌದಿ ಅರಾಮ್ಕೋದ ಅತ್ಯಂತ ಪ್ರಮುಖ ಕಾರ್ಯಾಚರಣೆ ಕೇಂದ್ರಗಳಲ್ಲಿ ಒಂದಾಗಿರುವ ರಾಸ್ ತನೂರಾದಲ್ಲಿ ಈ ಅಪಘಾತ ಸಂಭವಿಸಿದೆ. ಈ ನಗರವು ವಿಶ್ವದ ಅತಿ ದೊಡ್ಡ ಕಚ್ಚಾ ತೈಲ ರಫ್ತು ಟರ್ಮಿನಲ್‌ಗಳಲ್ಲಿ ಒಂದನ್ನು ಹೊಂದಿರುವುದಕ್ಕೂ ಹೆಸರುವಾಸಿಯಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




