ವಾಷಿಂಗ್ಟನ್ ಡಿಸಿ: ವಾಷಿಂಗ್ಟನ್ ಡಿಸಿಯಲ್ಲಿ (Washington DC) ಜುನೇಟೀನ್ತ್ ಸಂಗೀತ ಕಚೇರಿ ನಡೆಯುತ್ತಿದ್ದ ಸ್ಥಳದ ಬಳಿ ಪೊಲೀಸ್ ಅಧಿಕಾರಿ ಸೇರಿದಂತೆ ಹಲವಾರು ಜನರ ಮೇಲೆ ಗುಂಡು (Firing) ಹಾರಿಸಲಾಗಿದೆ. ಈ ಘಟನೆಯಲ್ಲಿ 15 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಹಲವು ಪೊಲೀಸರಿಗೆ ಗಾಯಗಳಾಗಿವೆ. ವಾಷಿಂಗ್ಟನ್ ಡಿಸಿಯ ಯು ಸ್ಟ್ರೀಟ್ ನಾರ್ತ್‌ವೆಸ್ಟ್‌ನಲ್ಲಿ ಶ್ವೇತಭವನದಿಂದ ಕೇವಲ 2 ಮೈಲು ದೂರದಲ್ಲಿ ಸಂಗೀತ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಅಲ್ಲಿ ಗುಂಡಿನ ದಾಳಿ ನಡೆದಿದ್ದು, ಅನೇಕ ಜನರ ಮೇಲೆ ಶೂಟ್ ಮಾಡಲಾಯಿತು.
ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಓರ್ವ ಅಪ್ರಾಪ್ತ ಸಾವನ್ನಪ್ಪಿರುವ ಶಂಕೆ ಇದ್ದು, ಮೂವರಿಗೆ ಗಾಯಗಳಾಗಿವೆ ಎಂದು ವಾಷಿಂಗ್ಟನ್ ಡಿಸಿ ಪೊಲೀಸ್ ಇಲಾಖೆ ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಾಷಿಂಗ್ಟನ್ ಡಿಸಿ ಪೊಲೀಸರು, ಈ ದಾಳಿಯಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಇಬ್ಬರು ಇತರ ನಾಗರಿಕರು ಮತ್ತು ಓರ್ವ ಪೊಲೀಸ್ ಅಧಿಕಾರಿ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: Chicago Shootings: ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು, ಚಿಕಾಗೊದಲ್ಲಿ ಐವರು ಸಾವು, 16 ಮಂದಿಗೆ ಗಾಯ
ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆಯ ವಕ್ತಾರರ ಪ್ರಕಾರ, ಯು ಸ್ಟ್ರೀಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸೇರಿದಂತೆ ಹಲವಾರು ಜನರ ಮೇಲೆ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯ ದೃಶ್ಯದ ವೀಡಿಯೊದಲ್ಲಿ ಈ ವೇಳೆ ಪೊಲೀಸ್ ಅಧಿಕಾರಿಗಳು ಬೀದಿಯಲ್ಲಿ ಮಲಗಿರುವ ಅನೇಕ ಜನರಿಗೆ ಸಹಾಯ ಮಾಡುವುದನ್ನು ಕಾಣಬಹುದು.
Chief Contee and city officials provide an update regarding a shooting with multiple victims shot, including an MPD officer, that occurred this evening in the area of 14th and U Street, NW. https://t.co/j2w5yXqvPZ
— DC Police Department (@DCPoliceDept) June 20, 2022
ಶೂಟಿಂಗ್ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಗುಂಡು ಹಾರಿಸಿದ್ದಾರೆ ಎಂದು ಡಿಸಿ ಪೊಲೀಸ್ ಯೂನಿಯನ್ ಟ್ವೀಟ್‌ನಲ್ಲಿ ಖಚಿತಪಡಿಸಿದೆ. 14ನೇ ಮತ್ತು U St NW ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ನಮ್ಮ ಪೊಲೀಸ್ ಇಲಾಖೆಯವರಲ್ಲಿ ಒಬ್ಬರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ನಮಗೆ ಖಚಿತವಾಗಿದೆ. ಆ ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.
MPD ಮುಖ್ಯಸ್ಥ ರಾಬರ್ಟ್ ಜೆ. ಕಾಂಟಿ ಎಂಬ ವ್ಯಕ್ತಿ ಸಾವನ್ನಪ್ಪಿದರು. ಪೋಲೀಸ್ ಜೊತೆಗೆ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಪ್ರದೇಶದಲ್ಲಿ ಎರಡಕ್ಕೂ ಹೆಚ್ಚು ಅಕ್ರಮ ಬಂದೂಕುಗಳನ್ನು ಪೊಲೀಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಚೇತರಿಸಿಕೊಳ್ಳಲಿದ್ದು, ಗಾಯಗೊಂಡಿರುವ ಇನ್ನಿಬ್ಬರ ಸ್ಥಿತಿ ಸ್ಥಿರವಾಗಿದೆ. ದಾಳಿಗೆ ಕೈಬಂದೂಕು ಬಳಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ