ಚೀನಾದ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 16 ಮಂದಿ ಸಾವು

ಕಲ್ಲಿದ್ದಲು ಗಣಿ ಅಪಘಾತದಲ್ಲಿ 16 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಚೀನಾದ ಗುಝೌ ಪ್ರಾಂತ್ಯದ ಪನ್‌ಝೌ ನಗರದಲ್ಲಿ ಭಾನುವಾರ ನಡೆದಿದೆ ಎಂದು ಗಣಿ ಮಾಲೀಕ ಗುಯಿಝೌ ಪಂಜಿಯಾಂಗ್ ರಿಫೈನ್ಡ್ ಕೋಲ್ ಕೋ ಶಾಂಘೈ ಸ್ಟಾಕ್ ಎಕ್ಸ್‌ಚೇಂಜ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಚೀನಾದ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 16 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 25, 2023 | 3:26 PM

ಗುಝೌ, ಸೆ.25: ಕಲ್ಲಿದ್ದಲು ಗಣಿ  ಪ್ರದೇಶದ (Coal mine) ಅಪಘಾತದಲ್ಲಿ 16 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಚೀನಾದ (China) ಗುಝೌ ಪ್ರಾಂತ್ಯದ ಪನ್‌ಝೌ ನಗರದಲ್ಲಿ ಭಾನುವಾರ ನಡೆದಿದೆ ಎಂದು ಗಣಿ ಮಾಲೀಕ ಗುಯಿಝೌ ಪಂಜಿಯಾಂಗ್ ರಿಫೈನ್ಡ್ ಕೋಲ್ ಕೋ ಶಾಂಘೈ ಸ್ಟಾಕ್ ಎಕ್ಸ್‌ಚೇಂಜ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ. ಸರಕುಗಳ ಸಲಹಾ ಸಂಸ್ಥೆ ಮಿಸ್ಟೀಲ್ ಪ್ರಕಾರ, ಈ ಘಟನೆಯಿಂದ ಎಲ್ಲಾ ಕಲ್ಲಿದ್ದಲು ಗಣಿಗಳಲ್ಲಿ ಒಂದು ದಿನದ ಮಟ್ಟಿಗೆ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಗಣಿ ಮಾಲೀಕರಿಗೆ ಈ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಪ್ರದೇಶದಲ್ಲಿ ವರ್ಷಕ್ಕೆ ಸುಮಾರು 52.5 ಮಿಲಿಯನ್ ಮೆಟ್ರಿಕ್ ಟನ್‌ಗಳಷ್ಟು ಗಣಿ ಉತ್ಪಾದನೆಗಳನ್ನು ತೆಗೆಯುವ ಸಾಮರ್ಥ್ಯ ಇದೆ. ಇನ್ನು ಚೀನಾದ ಒಟ್ಟು ಕೋಕಿಂಗ್ ಕಲ್ಲಿದ್ದಲು ಉತ್ಪಾದನಾ ಸಾಮರ್ಥ್ಯಕ್ಕೆ ಹೋಲಿಸಿದರೆ, ಸುಮಾರು 5%ದಷ್ಟು ಕಲ್ಲಿದ್ದಲು ಉತ್ಪಾದನೆಯನ್ನು ಈ ಪ್ರದೇಶದಿಂದ ತೆಗೆಯುವ ಸಾಮರ್ಥ್ಯವನ್ನು ಹೊಂದಿದೆ.

ಪಂಜಿಯಾಂಗ್ ಕೋಲ್ ಎಂದೂ ಕರೆಯಲ್ಪಡುವ ಸರ್ಕಾರಿ ಸ್ವಾಮ್ಯದ ಕಂಪನಿಯು ತನ್ನ ಎಲ್ಲ ಗಣಿ ಉತ್ಪಾದನ ಪ್ರದೇಶಗಳಲ್ಲಿ ಸುರಕ್ಷತೆಗೆ ಆದ್ಯತೆ ನೀಡುವಂತೆ, ಜತೆಗೆ ಸುರಕ್ಷಿತ ನಿಮಯಗಳನ್ನು ಪಾಲಿಸುವಂತೆ ಆದೇಶವನ್ನು ನೀಡಿದೆ. ಈ ಕಂಪನಿಯು 17.3 ಮಿಲಿಯನ್ ಟನ್‌ಗಳಷ್ಟು ಒಟ್ಟು ಸಾಮರ್ಥ್ಯವನ್ನು ಹೊಂದಿದ್ದು, ಇಂತಹ ಏಳು ಕಲ್ಲಿದ್ದಲು ಗಣಿಗಳನ್ನು ನಿರ್ವಹಿಸುತ್ತಿದೆ.

ಇದನ್ನೂ ಓದಿ: ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ

ಚೀನಾದ ಕಲ್ಲಿದ್ದಲು ಗಣಿ ಪ್ರದೇಶಗಳಲ್ಲಿ ಆಗ್ಗಾಗ್ಗೆ ಇಂತಹ ಅಪಘಾತಗಳು ನಡೆಯುತ್ತದೆ. ಫೆಬ್ರವರಿಯಲ್ಲಿ ಇನ್ನರ್ ಮಂಗೋಲಿಯಾ ಪ್ರದೇಶದಲ್ಲಿ ತೆರೆದ ಪಿಟ್ ಗಣಿಯಲ್ಲಿ ಕುಸಿದು 53 ಜನರು ಸಾವನ್ನಪ್ಪಿದರು. ಅಧಿಕಾರಿಗಳು ಇಂತಹ ಪ್ರದೇಶಗಳಲ್ಲಿ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಅಧಿಕಾರಿಗಳು ನೋಟಿಸ್​​​ ಜಾರಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾ

Published On - 3:10 pm, Mon, 25 September 23

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?