AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್​ ಸಿಟಿಯಲ್ಲಿ ಭೀಕರ ಅಗ್ನಿ ದುರಂತ; 9 ಮಕ್ಕಳು ಸೇರಿ 19 ಮಂದಿ ದಾರುಣ ಸಾವು

ಬೆಂಕಿ ದುರಂತದಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅದರಲ್ಲೂ ಸುಮಾರು 13 ಜನರು ಗಂಭೀರಸ್ವರೂಪದ ಗಾಯದಿಂದ ನರಳುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರಲ್ಲಿ ಬಹುತೇಕ ಜನರು ಹೊಗೆಯಿಂದ ಉಸಿರುಕಟ್ಟಿ ಸತ್ತವರೇ ಆಗಿದ್ದಾರೆ.

ನ್ಯೂಯಾರ್ಕ್​ ಸಿಟಿಯಲ್ಲಿ ಭೀಕರ ಅಗ್ನಿ ದುರಂತ; 9 ಮಕ್ಕಳು ಸೇರಿ 19 ಮಂದಿ ದಾರುಣ ಸಾವು
ಅಗ್ನಿ ಅವಘಡ ಉಂಟಾದ ಅಪಾರ್ಟ್​ಮೆಂಟ್​
TV9 Web
| Edited By: |

Updated on:Jan 10, 2022 | 9:42 AM

Share

ನ್ಯೂಯಾರ್ಕ್​ ನಗರದಲ್ಲಿ ಅಪಾರ್ಟ್​ಮೆಂಟ್​​ವೊಂದಕ್ಕೆ ಬೆಂಕಿಬಿದ್ದ ಪರಿಣಾಮ 9 ಮಕ್ಕಳು ಸೇರಿ 19 ಜನರು ಮೃತಪಟ್ಟ ದುರ್ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಇದೊಂದು ಅತ್ಯಂತ ಕೆಟ್ಟ ಸ್ವರೂಪದ ಬೆಂಕಿ ಅವಘಡ ಎಂದು ನ್ಯೂಯಾರ್ಕ್​​ನ ಕಮಿಷನರ್​​ ಹೇಳಿದ್ದಾರೆ.  ಬೆಂಕಿ ಅನಾಹುತದಲ್ಲಿ ಮೃತಪಟ್ಟವರ ಸಂಖ್ಯೆಯನ್ನು ನ್ಯೂಯಾರ್ಕ್​​ ಸಿಟಿಯ ಮೇಯರ್​ ಎರಿಕ್​ ಆಡಮ್ಸ್​​ರ ಹಿರಿಯ ಸಲಹೆಗಾರ ಸ್ಟೆಫನ್​ ರಿಂಜೆಲ್​​ ದೃಢಪಡಿಸಿದ್ದಾರೆ. ಆದರೆ ಅದರಲ್ಲಿ ಮಕ್ಕಳೆಷ್ಟು ಎಂಬುದನ್ನು ಹೆಸರು ಹೇಳಲು ಇಚ್ಛಿಸಿದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಅಧಿಕಾರಿಗೆ ಸಾರ್ವಜನಿಕವಾಗಿ ಮಾಧ್ಯಮಗಳೊಂದಿಗೆ ಮಾತನಾಡಲು ಅಧಿಕಾರವಿಲ್ಲ. ಹೀಗಾಗಿ ತಮ್ಮ ಹೆಸರು ಹೇಳದೆ, ಗುಪ್ತವಾಗಿ ಮಾಹಿತಿ ನೀಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.  

ಬೆಂಕಿ ದುರಂತದಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅದರಲ್ಲೂ ಸುಮಾರು 13 ಜನರು ಗಂಭೀರಸ್ವರೂಪದ ಗಾಯದಿಂದ ನರಳುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರಲ್ಲಿ ಬಹುತೇಕ ಜನರು ಹೊಗೆಯಿಂದ ಉಸಿರುಕಟ್ಟಿ ಸತ್ತವರೇ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಂದಹಾಗೆ ಬೆಂಕಿ ಬಿದ್ದಿದ್ದು, ಬ್ರಾಂಕ್ಸ್ ಟ್ವಿನ್ ಪಾರ್ಕ್ ಅಪಾರ್ಟ್‌ಮೆಂಟ್‌ ಪ್ರದೇಶದಲ್ಲಿರುವ ಒಂದು 19 ಅಂತಸ್ತಿನ ಅಪಾರ್ಟ್​ಮೆಂಟ್​ಗೆ. ಬೆಂಕಿ ಬೀಳುತ್ತಿದ್ದಂತೆ ಅಗ್ನಿಶಾಮಕದಳ, ಪೊಲೀಸರು, ರಕ್ಷಣಾ ಅಧಿಕಾರಿಗಳಿಗೆ ಕರೆ ಮಾಡಲಾಗಿತ್ತು. ಅಗ್ನಿಶಾಮಕದಳದ ಸುಮಾರು 200 ಮಂದಿ ಇಲ್ಲಿಗೆ ಧಾವಿಸಿ, ಕಾರ್ಯಾಚರಣೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಜೀವ ಸಹಿತ ಇದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರನ್ನು ಮೊದಲು ಅಲ್ಲಿಂದ ಕರೆದೊಯ್ಯಲಾಯಿತು. ಅಂಥವರನ್ನೆಲ್ಲ ಮೊದಲು ಆಸ್ಪತ್ರೆಗೆ ದಾಖಲು ಮಾಡಿ ನಂತರ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಹೇಳಿದ್ದಾರೆ.

ನ್ಯೂಯಾರ್ಕ್ ಸಿಟಿಯ ಅಗ್ನಿ ಶಾಮಕ ಇಲಾಖೆ ಆಯುಕ್ತ ನಿಗ್ರೋ ಪ್ರತಿಕ್ರಿಯಿಸಿ, ನಮ್ಮಲ್ಲಿ ಇತ್ತೀಚೆಗೆ ಇಂಥದ್ದೊಂದು ಅಗ್ನಿ ದುರಂತ ನಡೆದಿರಲಿಲ್ಲ. ಊಹಿಸಲೂ ಸಾಧ್ಯವಾಗದಷ್ಟು ಭೀಕರವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ತುಂಬ ಹೆಚ್ಚಾಗಿದೆ ಎಂದು ಹೇಳಿದ್ದಾರೆ. 1990ರಲ್ಲಿ ಹ್ಯಾಪಿ ಲ್ಯಾಂಡ್ ಸೋಷಿಯಲ್​ ಕ್ಲಬ್​​ನಲ್ಲಿ ಇಂಥದ್ದೇ ಒಂದು ಅಗ್ನಿ ದುರಂತ ನಡೆದಿತ್ತು. ಅದರಲ್ಲಿ 87 ಮಂದಿ ಮೃತಪಟ್ಟಿದ್ದರು.  ಅದು ಬಿಟ್ಟರೆ ಈ ಅವಘಡವೇ ಬಹುದೊಡ್ಡ ಪ್ರಮಾಣದಲ್ಲಿ ಆಗಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Gold Rate: ಏರಿಕೆಯಾದ ಚಿನ್ನದ ಬೆಲೆ, ಬೆಳ್ಳಿ ದರ ಸ್ಥಿರ; ಇಂದು ಆಭರಣದ ದರ ಎಷ್ಟಿದೆ?

Published On - 9:38 am, Mon, 10 January 22

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್