ಕೆನಡಾದ ಬ್ಯಾಂಕ್​​ನಲ್ಲಿ ಶೂಟೌಟ್; ಇಬ್ಬರು ಗನ್​ಮ್ಯಾನ್​​ಗಳು ಸಾವು, 6 ಪೊಲೀಸರಿಗೆ ಗಾಯ

ಗುಂಡೇಟಿನಿಂದ ಗಾಯಗೊಂಡ ಆರು ಪೊಲೀಸ್ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರಿಗೆ ಆಪರೇಷನ್ ಮಾಡಲಾಗಿದೆ.

ಕೆನಡಾದ ಬ್ಯಾಂಕ್​​ನಲ್ಲಿ ಶೂಟೌಟ್; ಇಬ್ಬರು ಗನ್​ಮ್ಯಾನ್​​ಗಳು ಸಾವು, 6 ಪೊಲೀಸರಿಗೆ ಗಾಯ
ಕೆನಡಾದಲ್ಲಿ ಶೂಟೌಟ್Image Credit source: Reuters
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 29, 2022 | 9:33 AM

ನವದೆಹಲಿ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಬ್ಯಾಂಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸರು ಇಬ್ಬರು ಗನ್​ಮ್ಯಾನ್​ಗಳನ್ನು ಶೂಟ್ ಮಾಡಿ ಕೊಂದಿದ್ದಾರೆ. ಈ ಶೂಟೌಟ್​ನಲ್ಲಿ 6 ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಸಂಭಾವ್ಯ ಸ್ಫೋಟಕ ಸಾಧನವನ್ನು ಪತ್ತೆಹಚ್ಚಿದ ನಂತರ ಹತ್ತಿರದ ಮನೆಗಳಲ್ಲಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮಂಗಳವಾರ ಸುಮಾರು 11 ಗಂಟೆಗೆ ಕೆನಡಾದ ವಾಷಿಂಗ್ಟನ್‌ನ ಗಡಿಯ ಸಮೀಪ ಇರುವ ವ್ಯಾಂಕೋವರ್ ದ್ವೀಪದಲ್ಲಿರುವ ಸಾನಿಚ್‌ನಲ್ಲಿರುವ ಬ್ಯಾಂಕ್ ಆಫ್ ಮಾಂಟ್ರಿಯಲ್‌ಗೆ ಆಗಮಿಸಿದರು. ಶಂಕಿತರಿಗೆ ಸಂಬಂಧಿಸಿದ ವಾಹನದಲ್ಲಿ ಸಂಭಾವ್ಯ ಸ್ಫೋಟಕ ಇರುವ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಆ ಸ್ಥಳದ ಸಮೀಪದಲ್ಲಿರುವ ಮನೆಗಳು ಮತ್ತು ಅಂಗಡಿಗಳನ್ನು ಸ್ಥಳಾಂತರಿಸಲಾಯಿತು.

ಇದನ್ನೂ ಓದಿ: ವಾಷಿಂಗ್ಟನ್ ಡಿಸಿಯಲ್ಲಿ ಶೂಟೌಟ್; 15 ವರ್ಷದ ಯುವಕ ಸಾವು, ಪೊಲೀಸ್ ಸೇರಿ ಮೂವರಿಗೆ ಗಾಯ

ಬಳಿಕ, ಬ್ಯಾಂಕ್​ನೊಳಗೆ ಬಾಂಬ್ ಇಡಲಾಗಿದೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಬ್ಯಾಂಕ್​ನೊಳಗೆ ನುಗ್ಗಿದ ಪೊಲೀಸರು ಅಲ್ಲಿದ್ದ ಗನ್​ಮ್ಯಾನ್​ಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಆ ಗನ್​ಮ್ಯಾನ್​ಗಳು ಶಸ್ತ್ರಸಜ್ಜಿತರಾಗಿದ್ದರು ಮತ್ತು ರಕ್ಷಾಕವಚವನ್ನು ಧರಿಸಿದ್ದರು ಎಂದು ಸಾನಿಚ್ ಪೊಲೀಸ್ ಮುಖ್ಯಸ್ಥ ಡೀನ್ ಡುಥಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ, ಅವರ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಆರು ಪೊಲೀಸ್ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರಿಗೆ ಆಪರೇಷನ್ ಮಾಡಲಾಗಿದೆ.

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ