Gurudwara Shooting: ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ಚಕಮಕಿ, ಇಬ್ಬರಿಗೆ ಗಂಭೀರ ಗಾಯ
ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಕೌಂಟಿಯ ಗುರುದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಯಾವುದೋ ಧ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎನ್ನಲಾಗಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಕೌಂಟಿಯ ಗುರುದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಯಾವುದೋ ಧ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎನ್ನಲಾಗಿದೆ.
ಬ್ರಾಡ್‌ಶಾ ಗುರುದ್ವಾರದಲ್ಲಿ ಕೀರ್ತನೆ ರ್ಯಕ್ರಮದ ವೇಳೆ ಪರಸ್ಪರ ಪರಿಚಿತ ವ್ಯಕ್ತಿಗಳ ನಡುವೆ ಹೊಡೆದಾಟ ಆರಂಭವಾಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಮಧ್ಯಾಹ್ನ 2:30 ರ ಸುಮಾರಿಗೆ ಗುರುದ್ವಾರದ ಮೈದಾನದಲ್ಲಿ ಜಗಳ ಪ್ರಾರಂಭವಾಯಿತು, ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯ ಸ್ನೇಹಿತನಿಗೆ ಗುಂಡು ಹಾರಿದ್ದ ಎಂದು ಅಮರ್ ಗಾಂಧಿ ತಿಳಿಸಿದ್ದಾರೆ. ನಂತರ ಮತ್ತೊಬ್ಬ ವ್ಯಕ್ತಿ ಆ ವ್ಯಕ್ತಿಗೆ ಗುಂಡು ಹಾರಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದಾರೆ, ನಂತರ ಸ್ಥಳದಿಂದ ಓಡಿಹೋಗಿದ್ದಾರೆ ಎಂದು ಗಾಂಧಿ ಹೇಳಿದ್ದಾರೆ.
ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು
ಇಬ್ಬರೂ 20-30ರ ಹರೆಯದವರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇಬ್ಬರೂ ಪರಸ್ಪರ ತಿಳಿದಿರುವಂತೆ ತೋರುತ್ತಿತ್ತು, ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ಗುಂಡಿನ ಹಿಂದಿನ ಉದ್ದೇಶ ಮತ್ತು ಶಂಕಿತರನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ