ದಕ್ಷಿಣ ಆಫ್ರಿಕಾ: ಜೋಹಾನ್ಸ್​ಬರ್ಗ್​ನ 5 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, 52 ಮಂದಿ ಸಾವು

ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನ 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 52 ಮಂದಿ ಸುಟ್ಟು ಕರಕಲಾಗಿದ್ದಾರೆ.40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ನಗರದ ತುರ್ತು ಸೇವೆಗಳು ತಿಳಿಸಿವೆ. ಗುರುವಾರ ಮುಂಜಾನೆ ಹೊತ್ತಿಕೊಂಡ ಬೆಂಕಿಯಲ್ಲಿ ಇನ್ನೂ 43 ಜನರು ಗಾಯಗೊಂಡಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಆಫ್ರಿಕಾ: ಜೋಹಾನ್ಸ್​ಬರ್ಗ್​ನ 5 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, 52 ಮಂದಿ ಸಾವು
ಅಗ್ನಿ ಅವಘಡ
Image Credit source: NDTV

Updated on: Aug 31, 2023 | 2:06 PM

ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನ 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 52 ಮಂದಿ ಸುಟ್ಟು ಕರಕಲಾಗಿದ್ದಾರೆ.40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ನಗರದ ತುರ್ತು ಸೇವೆಗಳು ತಿಳಿಸಿವೆ. ಗುರುವಾರ ಮುಂಜಾನೆ ಹೊತ್ತಿಕೊಂಡ ಬೆಂಕಿಯಲ್ಲಿ ಇನ್ನೂ 43 ಜನರು ಗಾಯಗೊಂಡಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಗಾಯಗೊಂಡವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜೋಹಾನ್ಸ್‌ಬರ್ಗ್ ಎಮರ್ಜೆನ್ಸಿ ಮ್ಯಾನೇಜ್‌ಮೆಂಟ್ ಸರ್ವಿಸಸ್ ವಕ್ತಾರ ರಾಬರ್ಟ್ ಮುಲೌಡ್ಜಿ ಮುಲಾಡ್ಜಿ ಹೇಳಿದರು. ದಕ್ಷಿಣ ಆಫ್ರಿಕಾದ ಮಾಧ್ಯಮಗಳ ಪ್ರಕಾರ ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:08 am, Thu, 31 August 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us