ಪಾಕಿಸ್ತಾನದಲ್ಲಿ ಬಸ್-ತೈಲ ಟ್ಯಾಂಕರ್​​ಗೆ ಡಿಕ್ಕಿ: 20 ಮಂದಿ ಸಜೀವ ದಹನ

ಲಾಹೋರ್​​ನಿಂದ ಸರಿಸುಮಾರು 350 ಕಿಮಿ ದೂರವಿರುವ ಮುಲ್ತಾನ್​​ನಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಬಸ್-ತೈಲ ಟ್ಯಾಂಕರ್​​ಗೆ ಡಿಕ್ಕಿ: 20 ಮಂದಿ ಸಜೀವ ದಹನ
ಅಪಘಾತದ ದೃಶ್ಯImage Credit source: Twitter
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 16, 2022 | 5:25 PM

ಲಾಹೋರ್: ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದಲ್ಲಿ ಮಂಗಳವಾರ ಪ್ಯಾಸೆಂಜರ್ ಬಸ್ ಮತ್ತು ತೈಲ ಟ್ಯಾಂಕರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ(Accident) 20 ಮಂದಿ ಸಜೀವ ದಹನವಾಗಿದ್ದಾರೆ. ಮೂರು ದಿನಗಳಲ್ಲಿ ಸಂಭವಿಸಿದ ಎರಡನೇ ದೊಡ್ಡ ಅಪಘಾತ ಇದಾಗಿದೆ ಎಂದು ರಕ್ಷಣಾ ಅಧಿಕಾರಿಗಳು ಹೇಳಿದ್ದಾರೆ. ಲಾಹೋರ್​​ನಿಂದ ಸರಿಸುಮಾರು 350 ಕಿಮಿ ದೂರವಿರುವ ಮುಲ್ತಾನ್​​ನಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.ಅಪಘಾತ ಸಂಭವಿಸಿದ ರಸ್ತೆಯಲ್ಲಿ ಹಲವಾರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿದೆ. ಲಾಹೋರ್​​ ನಿಂದ ಕರಾಚಿಗೆ ಹೋಗುತ್ತಿದ್ದ ಬಸ್ ತೈಲ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ 20 ಮಂದಿ ಸುಟ್ಟು ಕರಕಲಾಗಿದ್ದಾರೆ. ಎರಡೂ ವಾಹನಗಳು ಗುದ್ದಿದ ನಂತರ ಬೆಂಕಿ ಹತ್ತಿಕೊಂಡಿದ್ದು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. 6 ಮಂದಿಗೆ ಸುಟ್ಟಗಳಾಗಿದ್ದು ಅವರನ್ನು ಮುಲ್ತಾನ್ ನಲ್ಲಿರುವ ನಿಶ್ತಾರ್ ಅಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೆಸ್ಕ್ಯೂ 1122 ವಕ್ತಾರ ಹೇಳಿದ್ದಾರೆ. ಗಾಯಗೊಂಡವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದಿದ್ದಾರೆ ಅವರು.

ಪ್ರಯಾಣಿಕರ ದೇಹ ಸುಟ್ಟು ಕರಕಲಾಗಿದ್ದು ಗುರುತು ಸಿಗುತ್ತಿಲ್ಲ. ಡಿಎನ್ಎ ಪರೀಕ್ಷೆ ನಂತರವೇ ಇವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ವಕ್ತಾರ ಹೇಳಿದ್ದಾರೆ ಅಪಘಾತದ ತಕ್ಷಣವೇ ಬೆಂಕಿ ಹತ್ತಿಕೊಂಡಿದ್ದರಿಂದ ಅಗ್ನಿಶಾಮಕ ದಳದವರಿಗೆ ರಕ್ಷಣಾ ಕಾರ್ಯ ಮಾಡುವುದೂ ಕಷ್ಟವಾಗಿತ್ತು ಎಂದು ಅವರು ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಪರ್ವೇಜ್ ಇಲಾಹಿ ಈ ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.ಅದೇ ವೇಳೆ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಕುಟುಂಬದವರಿಗೆ ಸಹಾಯ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶನಿವಾರ ಸಾಮಾಗ್ರಿ ಹೇರಿಕೊಂಡು ಬರುತ್ತಿದ್ದ ಟ್ರಕ್- ಬಸ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 13 ಮಂದಿ ಸಾವಿಗೀಡಾಗಿದ್ದರು.

Published On - 4:58 pm, Tue, 16 August 22

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ