ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಓಹಿಯೋದ ಬರ್ತ್​ ಡೇ ಪಾರ್ಟಿಯಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ, ಓರ್ವ ಸಾವು
ಗುಂಡಿನ ದಾಳಿ

Updated on: Jun 02, 2024 | 2:27 PM

ಅಮೆರಿಕದ ಓಹಿಯೋದಲ್ಲಿ ನಡೆದ ಬರ್ತ್​ ಡೇ ಪಾರ್ಟಿಯೊಂದರಲ್ಲಿ 27 ಮಂದಿ ಮೇಲೆ ಸಾಮೂಹಿಕ ಗುಂಡಿನ ದಾಳಿ(Firing) ನಡೆದ ಪರಿಣಾಮ ಒಬ್ಬರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಾನುವಾರ ಬೆಳಗ್ಗೆ ಓಹಿಯೋದ ಅಕ್ರಾನ್​ನಲ್ಲಿ 27 ಮಂದಿ ಮೇಲೆ ಗುಂಡು ಹಾರಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಸ್ಥಳೀಯ ವರದಿಗಳ ಪ್ರಕಾರ ಗುಂಡಿನ ದಾಳಿಯ ನಂತರ ಹಲವು ಆಸ್ಪತ್ರೆಗಳನ್ನು ಲಾಕ್​ಡೌನ್ ಮಾಡಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಯಾವ ಕಾರಣಗಳಿಗಾಗಿ ಗುಂಡಿನ ದಾಳಿ ನಡೆಸಲಾಗಿದೆ, ಆತನಿಗೆ ಏನಾದರೂ ದ್ವೇಷವಿತ್ತೇ ಅಥವಾ ಮಾನಸಿಕ ಅಸ್ವಸ್ಥನೇ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us