AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ 18 ವರ್ಷದ ಯುವಕನಿಂದ ಫೈರಿಂಗ್: ಮೂವರ ಸಾವು

ಅಮೆರಿಕದ ನ್ಯೂ ಮೆಕ್ಸಿಕೋದ ಫಾರ್ಮಿಂಗ್ಟನ್​ನಲ್ಲಿ 18 ವರ್ಷದ ಯುವಕ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

ಅಮೆರಿಕದಲ್ಲಿ 18 ವರ್ಷದ ಯುವಕನಿಂದ ಫೈರಿಂಗ್: ಮೂವರ ಸಾವು
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 16, 2023 | 6:54 AM

Share

ವಾಷಿಂಗ್ಟನ್​ ಡಿಸಿ: ಅಮೆರಿಕದಲ್ಲಿ (America) ಶೂಟೌಟ್ (Shootout) ಪ್ರಕರಣಗಳು ಮುಂದುವರೆದಿವೆ. 18 ವರ್ಷದ ಯುವಕ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿರುವ ಘಟನೆ ನ್ಯೂ ಮೆಕ್ಸಿಕೋದ (New Mexico) ಫಾರ್ಮಿಂಗ್ಟನ್‌ನಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 50,000 ಜನಸಂಖ್ಯೆ ಇರುವ ಪುಟ್ಟ ಪಟ್ಟಣವಾದ ಫಾರ್ಮಿಂಗ್ಟನ್​​ನಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ದುರಂತ ಸಂಭವಿಸಿದೆ.

ಇನ್ನು ಪೊಲೀಸರು ಆರೋಪಿಯನ್ನು ಎನ್​ಕೌಂಟರ್​ ಮಾಡಿದ್ದಾರೆ. ಘಟನೆಯಲ್ಲಿ “ಅನೇಕ ನಾಗರಿಕ ಸಾವನ್ನಪ್ಪಿದ್ದಾರೆ” ಎಂದು ಫಾರ್ಮಿಂಗ್ಟನ್ ಪೊಲೀಸರು ಫೇಸ್‌ಬುಕ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಗುಂಡಿನ ದಾಳಿಯ ನಂತರ, ನಗರದಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದ ಟೆಕ್ಸಾಸ್​ನ ಶಾಪಿಂಗ್​ ಮಾಲ್​ನಲ್ಲಿ ಗುಂಡಿನ ದಾಳಿ, 9 ಮಂದಿ ಸಾವು, 7 ಜನರಿಗೆ ಗಾಯ

ಬೆಳಿಗ್ಗೆ 11 ಗಂಟೆಯ ನಂತರ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಬ್ರೂಕ್ಸೈಡ್ ಪಾರ್ಕ್ ಪ್ರದೇಶದಲ್ಲಿನ, ಮತ್ತು ನಗರದ ಎಲ್ಲಾ ಶಾಲೆಗಳನ್ನು ಅಧಿಕಾರಿಗಳು ತಾತ್ಕಾಲಿಕವಾಗಿ ಬಂದ್​ ಮಾಡಿಸಿದ್ದಾರೆ.  ಅಮೆರಿಕಾದಲ್ಲಿ ಈ ವರ್ಷ 215 ಕ್ಕೂ ಹೆಚ್ಚು ಸಾಮೂಹಿಕ ಗುಂಡಿನ ದಾಳಿಗಳು ಸಂಭವಿಸಿವೆ ಎಂದು ಗನ್ ವಯಲೆನ್ಸ್ ಆರ್ಕೈವ್ ವರದಿ ಹೇಳಿದೆ.

ಗೆಳತಿ ಗರ್ಭಪಾತ ಮಾಡಿಸಿಕೊಂಡಿದ್ದಕ್ಕೆ ಹತ್ಯೆ ಮಾಡಿದ ಪ್ರಿಯಕರ

ಗೆಳತಿ ಗರ್ಭಪಾತ ಮಾಡಿಸಿಕೊಂಡಿದ್ದಕ್ಕೆ ಕೋಪಗೊಂಡ ಪ್ರಿಯಕರನೊಬ್ಬ ಆಕೆಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿತ್ತು. 22 ವರ್ಷದ ಹೆರಾಲ್ಡ್​ ಥಾಂಪ್ಸನ್, 26 ವರ್ಷದ ಗೇಬ್ರಿಯೆಲಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ, ಆಕೆಯನ್ನು ಸ್ಟ್ರಿಪ್ ಮಾಲ್ ಪಾರ್ಕಿಂಗ್ ಸ್ಥಳದಲ್ಲಿ ಗುಂಡಿಕ್ಕಿ ಕೊಲೆ ಮಾಡಿದ್ದಾನೆ ಎಂದು ಡಲ್ಲಾಸ್ ಪೊಲೀಸರು ತಿಳಿಸಿದ್ದರು. ಕೊಲೊರಾಡೊಗೆ ಸುಮಾರು 800 ಕಿ.ಮೀ ಪ್ರಯಾಣ ಬೆಳೆಸಿ ಹಿಂದಿನ ದಿನ ರಾತ್ರಿ ಬಂದಿದ್ದರು, ಅಲ್ಲಿ ಗರ್ಭಾವಸ್ಥೆಯ ಯಾವ ಹಂತದಲ್ಲಾದರೂ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿಸಲಾಗಿತ್ತು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 am, Tue, 16 May 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ