ಅಬುಧಾಬಿ, ದುಬೈ ರೆಸ್ಟೋರೆಂಟ್‌ಗಳಲ್ಲಿ ಸ್ಫೋಟ: ಮೂವರ ಸಾವು

| Updated By: ಸಾಧು ಶ್ರೀನಾಥ್​

Updated on: Sep 01, 2020 | 2:38 PM

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿ ಮತ್ತು ಅದರ ಪ್ರವಾಸೋದ್ಯಮ ಕೇಂದ್ರವಾದ ದುಬೈನಲ್ಲಿ ಎರಡು ಪ್ರತ್ಯೇಕ ಸ್ಫೋಟಗಳು ಸಂಭವಿಸಿವೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಅನೇಕರಿಗೆ ಗಂಭೀರ ಗಾಯಗಳಾಗಿವೆ. ಆಗಸ್ಟ್ 31ರಂದು ಅಬುಧಾಬಿಯ ರಶೀದ್ ಬಿನ್ ಸಯೀದ್ ಸ್ಟ್ರೀಟ್‌ನಲ್ಲಿರುವ ಕೆಎಫ್‌ಸಿ ಮತ್ತು ಹಾರ್ಡೀಸ್ ರೆಸ್ಟೋರೆಂಟ್‌ಗಳಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಥಳೀಯ ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಘಟನೆಯಿಂದಾಗಿ ಸ್ಥಳದಲ್ಲಿ ಬಿಳಿ ಹೊಗೆ ಆವರಿಸಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ […]

ಅಬುಧಾಬಿ, ದುಬೈ ರೆಸ್ಟೋರೆಂಟ್‌ಗಳಲ್ಲಿ ಸ್ಫೋಟ: ಮೂವರ ಸಾವು
Follow us on

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿ ಮತ್ತು ಅದರ ಪ್ರವಾಸೋದ್ಯಮ ಕೇಂದ್ರವಾದ ದುಬೈನಲ್ಲಿ ಎರಡು ಪ್ರತ್ಯೇಕ ಸ್ಫೋಟಗಳು ಸಂಭವಿಸಿವೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಅನೇಕರಿಗೆ ಗಂಭೀರ ಗಾಯಗಳಾಗಿವೆ.

ಆಗಸ್ಟ್ 31ರಂದು ಅಬುಧಾಬಿಯ ರಶೀದ್ ಬಿನ್ ಸಯೀದ್ ಸ್ಟ್ರೀಟ್‌ನಲ್ಲಿರುವ ಕೆಎಫ್‌ಸಿ ಮತ್ತು ಹಾರ್ಡೀಸ್ ರೆಸ್ಟೋರೆಂಟ್‌ಗಳಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಥಳೀಯ ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಘಟನೆಯಿಂದಾಗಿ ಸ್ಥಳದಲ್ಲಿ ಬಿಳಿ ಹೊಗೆ ಆವರಿಸಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅನಿಲ ಕಂಟೇನರ್​ಗಳಿಗೆ ಇಂಧನ ತುಂಬಿಸಿದ ಬಳಿಕ ಅದರ ಜೋಡಣೆ ವೇಳೆ ಆದ ವ್ಯತ್ಯಾಸದಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.  ಈ ಮಧ್ಯೆ,  ಬೆಂಕಿಯನ್ನು 33 ನಿಮಿಷಗಳಲ್ಲಿ ನಿಯಂತ್ರಿಸಲಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.