ಪೇಶಾವರ: ಪಾಕಿಸ್ತಾನದ ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಬಳಿ ಮಸೀದಿಯೊಂದರಲ್ಲಿ (Peshawar Mosque blast) ಶುಕ್ರವಾರ ಪ್ರಾರ್ಥನೆ ವೇಳೆ ಸ್ಫೋಟ (Bomb blast) ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆಯನ್ನು ಖಚಿತಪಡಿಸಿದ ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಯ ವಕ್ತಾರ ಮುಹಮ್ಮದ್ ಅಸಿಮ್ ಖಾನ್, ‘‘ನಾವು ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದೇವೆ’’ ಎಂದು ತಿಳಿಸಿದ್ದಾರೆ. ಪಾಕಿಸ್ತಾನಿ ಮಾಧ್ಯಮಗಳು ಉಲ್ಲೇಖಿಸಿದಂತೆ ಪೇಶಾವರ ನಗರ ಪೊಲೀಸ್ ಅಧಿಕಾರಿ ಇಜಾಜ್ ಅಹ್ಸಾನ್ ಈ ಕುರಿತು ಮಾತನಾಡಿ, ‘‘ಪ್ರಾಥಮಿಕ ವರದಿಗಳ ಪ್ರಕಾರ, ಇಬ್ಬರು ದಾಳಿಕೋರರು ಮಸೀದಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಜತೆಗೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದರು. ಗುಂಡಿನ ದಾಳಿಯ ನಂತರ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ’’ ಎಂದಿದ್ದಾರೆ. ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ.
ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿರುವ ಸಿಬ್ಬಂದಿಗಳು:
At least 30 killed and over 50 injured in blast at a mosque during Friday prayers in Peshawar, #Pakistan. pic.twitter.com/JIcOrswPGR
— Ahmer Khan (@ahmermkhan) March 4, 2022
ಮಸೀದಿ ಮೇಲಿನ ದಾಳಿಯನ್ನು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ತೀವ್ರವಾಗಿ ಖಂಡಿಸಿದ್ದಾರೆ ಎಂದಿರುವ ಪಾಕಿಸ್ತಾನ ಪ್ರಧಾನ ಮಂತ್ರಿಗಳ ಕಚೇರಿ, ತುರ್ತು ವೈದ್ಯಕೀಯ ಸೇವೆ ನೀಡಲು ಆದೇಶಿಸಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:
Russia Ukraine War: ರಷ್ಯಾ- ಉಕ್ರೇನ್ ಕದನ; ಉಕ್ರೇನಿಯನ್ನರ ಪ್ರಸ್ತುತ ಸ್ಥಿತಿಯನ್ನು ವಿವರಿಸುತ್ತಿವೆ ಈ ಫೋಟೋಗಳು
Published On - 3:23 pm, Fri, 4 March 22