ಕೊವಿಡ್ ಸೋಂಕಿನಿಂದ ರಕ್ಷಿಸಲು ಲಸಿಕೆಯ 3ನೇ ಡೋಸ್ ನೀಡಬೇಕು ಎಂದ ಮಾಡೆರ್ನಾ ಕಂಪನಿಯ ಸಿಇಒ

Moderna Vaccine: ಕೊವಿಡ್ ಲಸಿಕೆ ನೀಡುವುದೇ ಜನರನ್ನು ಸೋಂಕಿನಿಂದ ಕಾಪಾಡಬಹುದಾದ ಅತ್ಯುತ್ತಮ ಮಾರ್ಗ. ಈವರೆಗೆ ಲಸಿಕೆ ಹಾಕಿಸಿಕೊಳ್ಳದಿರುವವರು ಆದಷ್ಟು ಬೇಗನೆ ಲಸಿಕೆ ಪಡೆಯಬೇಕು ಎಂದಿರುವ ಅವರು, ಫ್ರಾನ್ಸ್ ದೇಶದಲ್ಲಿ ಕೊವಿಡ್​ನ 4ನೇ ಅಲೆಯ ಕುರಿತು ಎಚ್ಚರಿಕೆ ನೀಡಿದ್ದಾರೆ.

ಕೊವಿಡ್ ಸೋಂಕಿನಿಂದ ರಕ್ಷಿಸಲು ಲಸಿಕೆಯ 3ನೇ ಡೋಸ್ ನೀಡಬೇಕು ಎಂದ ಮಾಡೆರ್ನಾ ಕಂಪನಿಯ ಸಿಇಒ
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on: May 23, 2021 | 9:11 PM

ಮಾಸ್ಕೋ: ಅತ್ಯಂತ ಹೆಚ್ಚಿನ ಅಪಾಯ ತಂದೊಡ್ಡಬಹುದಾದ ಕೊವಿಡ್ ರೂಪಾಂತರಿ ತಳಿಗಳಿಂದ ರಕ್ಷಣೆ ಪಡೆಯಲು ಕೊವಿಡ್ ವಾರಿಯರ್​ಗಳಿಗೆ 3ನೇ ಡೋಸ್ ಲಸಿಕೆ ಹಾಕಬೇಕು ಎಂದು ಮೊಡೆರ್ನಾ ಲಸಿಕೆ ಉತ್ಪಾದನಾ ಕಂಪೆನಿಯ ಸಿಇಒ ಸ್ಫೀಫನ್ ಬನ್ಸೆಲ್ ಅಭಿಪ್ರಾಯಪಟ್ಟಿದ್ದಾರೆ. ಕೊವಿಡ್ ವಿರುದ್ಧ ನಾವು ಉತ್ಪಾದಿಸಿರುವ ಲಸಿಕೆಯು ಒಂದು ನಿಗದಿತ ಅವಧಿಯವರೆಗೆ ಕೊವಿಡ್ ಬರದಂತೆ ತಡೆಗಟ್ಟುತ್ತದೆ. ಆದರೆ ಕೊವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ ಸೋಂಕು ತಗಲುವ ಅಪಾಯ ಇರುತ್ತದೆ. ಹೀಗಾಗಿ ಅಂತಹ ವ್ಯಕ್ತಿಗಳಿಗೆ ಮೂರನೇ ಡೋಸ್ ಲಸಿಕೆ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಕೊವಿಡ್ ಲಸಿಕೆ ನೀಡುವುದೇ ಜನರನ್ನು ಸೋಂಕಿನಿಂದ ಕಾಪಾಡಬಹುದಾದ ಅತ್ಯುತ್ತಮ ಮಾರ್ಗ. ಈವರೆಗೆ ಲಸಿಕೆ ಹಾಕಿಸಿಕೊಳ್ಳದಿರುವವರು ಆದಷ್ಟು ಬೇಗನೆ ಲಸಿಕೆ ಪಡೆಯಬೇಕು ಎಂದಿರುವ ಅವರು, ಫ್ರಾನ್ಸ್ ದೇಶದಲ್ಲಿ ಕೊವಿಡ್​ನ 4ನೇ ಅಲೆಯ ಕುರಿತು ಎಚ್ಚರಿಕೆ ನೀಡಿದ್ದಾರೆ. ಫ್ರಾ ಲಿಸಕೆ ವಿತರಣೆ ಇನ್ನೂ ಎರಡರಿಮದ ಮೂರು ತಿಂಗಳು ತಡವಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗಬೇಕಾದ ಜನರ ಸಂಖ್ಯೆ ಹೆಚ್ಚಾಗಬಹುದು. ಅಲ್ಲದೇ, ಸಾವುನೋವುಗಳ ಸಂಖ್ಯೆಯಲ್ಲೂ ಹೆಚ್ಚಳವಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಮೊಡೆರ್ನಾ ಮೂರು ಪ್ರಯೋಗಗಳಲ್ಲಿ ನಿರತವಾಗಿದೆ. ವುಹಾನ್​ನ ಪ್ರಯೋಗಾಲಯದಿಂದ ಹೊರಬಿದ್ದ ಮೂಲ ವೈರಸ್​ನ ವಿರುದ್ಧ ಹೊರಾಡಬಲ್ಲ ಲಸಿಕೆ ಒಂದಾದರೆ, ದಕ್ಷಿಣ ಆಫ್ರಿಕಾದ ರೂಪಾಂತರಿ ಕೊವಿಡ್ ವೈರಾಣುವಿನ ವಿರುದ್ಧ ಹೋರಾಡಬಲ್ಲ ಲಸಿಕೆ ಎರಡನೇಯದು. ಮತ್ತು ಈ ಎರಡೂ ವೈರಾಣುವಿನ ವಿರುದ್ಧ ಹೋರಾಡಬಲ್ಲ ಸಮ್ಮಿಶ್ರ ಲಸಿಕೆಯ ಕುರಿತು ಮಾಡೆರ್ನಾ ಕಂಪನಿ ಸಂಶೋಧನೆ ನಡೆಸುತ್ತಿದೆ.

ಇದನ್ನೂ ಓದಿ: ಕೊವಿಡ್ 3ನೇ ಅಲೆಯಿಂದ ಮಕ್ಕಳಿಗೆ ಹೆಚ್ಚಿನ ಅಪಾಯ, ಭಾರತದಲ್ಲಿ ತಯಾರಿಸಿದ ಮೂಗಿಗೆ ಹಾಕುವ ಲಸಿಕೆ ‘ಗೇಮ್ ಚೇಂಜರ್’ ಆಗುವ ಸಾಧ್ಯತೆ: ಸೌಮ್ಯ ಸ್ವಾಮಿನಾಥನ್

Bengaluru Air: ಲಾಕ್​ಡೌನ್ ಪರಿಣಾಮ: ಬೆಂಗಳೂರು ನಗರದಲ್ಲಿ ಗಾಳಿಯ ಶುದ್ಧತೆ ಹೆಚ್ಚಳ

(3rd dose of the vaccine to protect against Covid 19 says Moderna CEO)

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?