ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿದ ಘರ್ಷಣೆಯಲ್ಲಿ ಓರ್ವ ಮಹಿಳೆ ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಪೊಲೀಸರು ಈವರೆಗೆ ಒಟ್ಟು 52 ಜನರನ್ನು ಬಂಧಿಸಿದ್ದು, ಘರ್ಷಣೆ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಅಮೆರಿಕಾ ಚುನಾವಣೆ ಫಲಿತಾಂಶವನ್ನು ದೃಢೀಕರಿಸುವ ವೇಳೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಏಕಾಏಕಿ ಅಮೆರಿಕ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದ್ದರು. ಜೋ ಬೈಡನ್ರನ್ನು ಮುಂದಿನ ಅಧ್ಯಕ್ಷರ ಪದವಿಗೆ ಅಧಿಕೃತವಾಗಿ ಘೋಷಣೆ ಮಾಡುವ ವೇಳೆ, ಜೋ ಬೈಡನ್ ಆಯ್ಕೆ ವಿರೋಧಿಸಿ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಕಟ್ಟಡಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Four killed as pro-Trump mob breaches Capitol Hill
Read @ANI Story | https://t.co/Ur0pjXr2YJ pic.twitter.com/hJIJzEo1A3
— ANI Digital (@ani_digital) January 7, 2021
ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಸುಮಾರು ನಾಲ್ಕು ಘಂಟೆಗೂ ಹೆಚ್ಚು ಕಾಲ ಅಶ್ರುವಾಯು ಪ್ರಯೋಗಿಸಿದ್ದು, ಉಪಾಧ್ಯಕ್ಷ ಮೈಕ್ ಪೆನ್ಸ್, ಮತ್ತು ಇತರ ಸದಸ್ಯರನ್ನು ಸುರಕ್ಷತಾ ಸ್ಥಳಕ್ಕೆ ರವಾನಿಸಲಾಗಿದೆ. ಅಮೇರಿಕ ಕ್ಯಾಪಿಟಲ್ ಕಟ್ಟಡದ ಸುತ್ತಲೂ ಕರ್ಫ್ಯೂ ವಿಧಿಸಲಾಗಿದೆ.
ಕ್ಯಾಪಿಟಲ್ ಬಿಲ್ಡಿಂಗ್ ಘರ್ಷಣೆ: ಟ್ರಂಪ್ ಟ್ವಿಟ್ಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆಗಳು ಬಂದ್
Published On - 2:16 pm, Thu, 7 January 21