ಪಾಕಿಸ್ತಾನದ ಸ್ಟಾಕ್ ಎಕ್ಸ್‌ಚೇಂಜ್‌ ಕಟ್ಟಡದ ಮೇಲೆ ಉಗ್ರರ ದಾಳಿ, 5 ಸಾವು

ಪಾಕಿಸ್ತಾನದ ಸ್ಟಾಕ್ ಎಕ್ಸ್‌ಚೇಂಜ್‌ ಕಟ್ಟಡದ ಮೇಲೆ ಉಗ್ರರ ದಾಳಿ, 5 ಸಾವು

ಕರಾಚಿ: ಕೊರೊನಾ ಸಂಕಷ್ಟದ ಸಮಯದಲ್ಲೂ ಉಗ್ರರು ಸಕ್ರಿಯರಾಗಿದ್ದು, ತಮ್ಮ ಕರಾಮತ್ತು ತೋರಿಸಿದ್ದಾರೆ. ಪಾಕಿಸ್ತಾನದ ಕರಾಚಿಯ ಸ್ಟಾಕ್ ಎಕ್ಸ್‌ಚೇಂಜ್‌ ಕಟ್ಟಡದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಐವರು ಸಾವಿಗೀಡಾಗಿದ್ದಾರೆ.

ಕಟ್ಟಡದ ಒಳಗೆ ನಾಲ್ವರು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಪೊಲೀಸ್ ಅಧಿಕಾರಿ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೂವರು ಉಗ್ರರೂ ಹತ್ಯೆಯಾಗಿದ್ದಾರೆ.

Published On - 12:10 pm, Mon, 29 June 20

Click on your DTH Provider to Add TV9 Kannada