AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ಭೀಕರ ದಾಳಿ; 4 ಭಾರತೀಯರ ಸಾವು

ರಷ್ಯಾ ಮತ್ತು ಉಕ್ರೇನ್ ನಡುವೆ ಭೀಕರ ಪರಸ್ಪರ ದಾಳಿಗಳು ಮುಂದುವರಿದಿರುವ ಬೆನ್ನಲ್ಲೇ, ಉಕ್ರೇನ್‌ನ ಒಡೆಸ್ಸಾ ಬಂದರಿನ ಸಮೀಪ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯ ಪ್ರಜೆಗಳು ದುರಂತವಾಗಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಭಾರತ ಸರ್ಕಾರ ಖಂಡಿಸಿದೆ. ದಾಳಿಗೊಳಗಾದ ಹಡಗನ್ನು 'ಎಮ್.ವಿ. ಗೋಲ್ಡನ್ ಲಿಯೋ' ಎಂದು ಗುರುತಿಸಲಾಗಿದೆ. ಈ ಘಟನೆಯ ಸಮಯದಲ್ಲಿ ಹಡಗಿನಲ್ಲಿ ಒಟ್ಟು 17 ಸಿಬ್ಬಂದಿ ಇದ್ದರು. ಅವರಲ್ಲಿ ಐವರು ಭಾರತೀಯರಾಗಿದ್ದರು.

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ಭೀಕರ ದಾಳಿ; 4 ಭಾರತೀಯರ ಸಾವು
Attack On Vessel Near Ukraines OdesaImage Credit source: x
ಸುಷ್ಮಾ ಚಕ್ರೆ
|

Updated on: Jul 20, 2026 | 9:52 PM

Share

ಮುಖ್ಯಾಂಶಗಳು

  • ಉಕ್ರೇನ್​ನ ಒಡಿಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ದಾಳಿ
  • ಹಡಗಿನಲ್ಲಿದ್ದ ನಾಲ್ವರು ಭಾರತೀಯ ನಾವಿಕರು ಸಾವು
  • ಹಡಗಿನ ಮೇಲಿನ ದಾಳಿಗೆ ಭಾರತ ಖಂಡನೆ

ಕೈವ್, ಜುಲೈ 20: ರಷ್ಯಾ-ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಉಕ್ರೇನ್‌ನ (Russia-Ukraine War) ಒಡೆಸ್ಸಾ ಬಂದರಿನಲ್ಲಿ ಭೀಕರ ದಾಳಿಯೊಂದು ನಡೆದಿದೆ. ಈ ದಾಳಿಯಲ್ಲಿ ಕಮರ್ಷಿಯಲ್ ಸರಕು ಸಾಗಣೆ ಹಡಗಿನಲ್ಲಿದ್ದ 4 ಮಂದಿ ಭಾರತೀಯ ನಾವಿಕರು ಕೂಡ ಸಾವನ್ನಪ್ಪಿದ್ದಾರೆ. ಅದೇ ಹಡಗಿನಲ್ಲಿದ್ದ ಮತ್ತೊಬ್ಬ ಭಾರತೀಯ ನಾವಿಕ ತೀವ್ರವಾಗಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾನುವಾರ ಸಂಜೆ ಒಡೆಸ್ಸಾ ಬಂದರಿನಿಂದ ಹೊರಡುತ್ತಿದ್ದ ವೇಳೆ ಈ ಹಡಗಿನ ಮೇಲೆ ಭೀಕರ ದಾಳಿ ನಡೆದಿದೆ ಎಂದು ಸಚಿವಾಲಯ ಅಧಿಕೃತ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ದಾಳಿಗೊಳಗಾದ ‘ಎಮ್.ವಿ. ಗೋಲ್ಡನ್ ಲಿಯೋ’ ವಾಣಿಜ್ಯ ಹಡಗಿನಲ್ಲಿ ಒಟ್ಟು 17 ಜನ ಸಿಬ್ಬಂದಿ ಇದ್ದರು. ಇವರಲ್ಲಿ 5 ಜನ ಭಾರತೀಯ ಪ್ರಜೆಗಳಾಗಿದ್ದರು. ದಾಳಿಯ ತೀವ್ರತೆಗೆ ನಾಲ್ವರು ಭಾರತೀಯರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಐದನೇ ಭಾರತೀಯ ನಾವಿಕ ತೀವ್ರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೊಳಗಾದ ಹಡಗಿನಲ್ಲಿ ಬೆಂಕಿ ಅವಘಡ; ಸಿಬ್ಬಂದಿ ರಕ್ಷಣೆ

ಭಾರತದ ಅಧಿಕೃತ ಮಾಹಿತಿ:

“ಉಕ್ರೇನ್‌ನಲ್ಲಿರುವ ನಮ್ಮ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ದಾಳಿಯಿಂದ ತೊಂದರೆಗೆ ಒಳಗಾದವರಿಗೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ಹಾಗೂ ಆಡಳಿತಾತ್ಮಕ ಸಹಾಯವನ್ನು ಒದಗಿಸಲು ನಿರಂತರ ಶ್ರಮಿಸುತ್ತಿದೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಹಾಗೇ, ವಿದೇಶಾಂಗ ಸಚಿವಾಲಯವು ಮೃತರ ಕುಟುಂಬಗಳಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಗಾಯಗೊಂಡಿರುವ ನಾವಿಕ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.

ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ:

ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ಈ ಹಿಂಸಾಚಾರವನ್ನು ಭಾರತ ಸರ್ಕಾರವು ತೀವ್ರವಾಗಿ ಖಂಡಿಸಿದೆ. ನಾಗರಿಕ ಸಿಬ್ಬಂದಿ ಇರುವ ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸುವುದು ಮತ್ತು ಅವರ ಜೀವಕ್ಕೆ ಆಪತ್ತು ತರುವುದು ತೀವ್ರ ಖಂಡನೀಯ ಎಂದು ಭಾರತ ಹೇಳಿದೆ. ಮುಕ್ತ ಸಮುದ್ರಯಾನದ ಸ್ವಾತಂತ್ರ್ಯ ಮತ್ತು ಅಂತಾರಾಷ್ಟ್ರೀಯ ವ್ಯಾಪಾರ ವ್ಯವಸ್ಥೆಗೆ ಅಡ್ಡಿಪಡಿಸುವ ಇಂತಹ ಕೃತ್ಯಗಳು ಅತ್ಯಂತ ವಿಷಾದಕರವಾಗಿದ್ದು, ಇಂತಹ ದಾಳಿಗಳನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಇಂತಹ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸಚಿವಾಲಯವು ತನ್ನ ಅಧಿಕೃತ ಹೇಳಿಕೆಯಲ್ಲಿ ಹೇಳಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ