America Shootout: ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ, ನಾಲ್ವರ ಸಾವು
ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ. ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆ ಪಟ್ಟಣದ ಬ್ಯಾಂಕ್ವೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿವೆ.
ವಾಷಿಂಗ್ಟನ್ ಡಿಸಿ: ಅಮೆರಿಕದಲ್ಲಿ (America) ಮತ್ತೆ ಗುಂಡಿನ ದಾಳಿ (Shootout) ನಡೆದಿದೆ. ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆ (Louisville) ಪಟ್ಟಣದ ಬ್ಯಾಂಕ್ವೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿವೆ. 24 ವರ್ಷದ ಬ್ಯಾಂಕ್ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ನಂತರ ಆರೋಪಿ ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಹೊಡೆದುರುಳಿಸಿದ್ದಾರೆ.
ಶಾಲೆಯ ಮೇಲೆ ಗುಂಡಿನ ದಾಳಿ, ಮೂವರು ವಿದ್ಯಾರ್ಥಿಗಳು ಸೇರಿ 6 ಮಂದಿ ಸಾವು
2023ರ ಮಾರ್ಚ್ 28 ರಂದು ಅಮೆರಿಕದ ನ್ಯಾಶ್ವಿಲ್ಲೆ ನಗರದ ಖಾಸಗಿ ಕ್ರಿಶ್ಚಿಯನ್ ಶಾಲೆಯಲ್ಲಿ ದುಷ್ಕರ್ಮಿಗಳಿಂದ ನಡೆದ ಗುಂಡಿನ ದಾಳಿಯಲ್ಲಿ 3 ವಿದ್ಯಾರ್ಥಿಗಳು ಸೇರಿದಂತೆ 6 ಜನರು ಸಾವನ್ನಪ್ಪಿದ್ದರು. AFP ಸುದ್ದಿ ಸಂಸ್ಥೆಯ ಪ್ರಕಾರ, ದಾಳಿಕೋರ ಮಹಿಳೆಯಾಗಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಹತ್ಯೆ ಮಾಡಿದ್ದರು. ಆಸ್ಪತ್ರೆಗೆ ಕರೆದೊಯ್ದ ಬಳಿಕ ಮೃತರ ಸಾವು ದೃಢಪಟ್ಟಿತ್ತು. ಕಾನ್ವೆಂಟ್ ಶಾಲೆಯಲ್ಲಿ ಈ ದಾಳಿ ನಡೆದಿತ್ತು. ಘಟನೆಯಿಂದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಇದನ್ನೂ ಓದಿ: ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ಚಕಮಕಿ, ಇಬ್ಬರಿಗೆ ಗಂಭೀರ ಗಾಯ
ವಾಸ್ತವವಾಗಿ, ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣದ ಚಿಕಿತ್ಸೆಗಾಗಿ ಮನ್ರೋ ಕ್ಯಾರೆಲ್ ಜೂನಿಯರ್ ಮಕ್ಕಳ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:06 am, Tue, 11 April 23