AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ; 47 ಜನ ಸಾವು

ಪಶ್ಚಿಮ ಕೊಲಂಬಿಯಾದಲ್ಲಿ ಇಂದು ಸಂಭವಿಸಿದ 7.4 ತೀವ್ರತೆಯ ಭಾರಿ ಭೂಕಂಪಕ್ಕೆ ಕನಿಷ್ಠ 47 ಜನರು ಬಲಿಯಾಗಿದ್ದು, ಹಲವಾರು ನಗರಗಳಲ್ಲಿ 20ಕ್ಕೂ ಹೆಚ್ಚು ಕಟ್ಟಡಗಳು ನೆಲಸಮಗೊಂಡಿವೆ. ಪ್ರಬಲ ಕಂಪನದಿಂದಾಗಿ ಜನರು ರಕ್ಷಣೆಗೆ ಪರದಾಡುವಂತಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. ರಾಜಧಾನಿ ಬೊಗೋಟಾದವರೆಗೂ ಭೂಕಂಪನದ ಅನುಭವವಾಗಿದ್ದರಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಕೊಲಂಬಿಯಾದ ಅನೇಕ ಪ್ರದೇಶಗಳಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ.

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ; 47 ಜನ ಸಾವು
Colambia Earthquake Image Credit source: TV9
ಸುಷ್ಮಾ ಚಕ್ರೆ
|

Updated on:Aug 10, 2026 | 11:06 PM

Share

ಕೊಲಂಬಿಯಾ, ಆಗಸ್ಟ್ 10: ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ (Earthquake) 47 ಜನರು ಮೃತಪಟ್ಟಿದ್ದಾರೆ. ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಸ್ಥಿತಿ ತೀವ್ರ ಆತಂಕಕಾರಿಯಾಗಿದೆ. ಭೂಕಂಪದ ಕೇಂದ್ರಬಿಂದು ಕೊಲಂಬಿಯಾದ ಚೊಕೊ ಪ್ರದೇಶದ ‘ಸ್ಯಾನ್ ಜೋಸ್ ಡೆಲ್ ಪಾಲ್ಮಾರ್’ ಬಳಿ ದಾಖಲಾಗಿದೆ. ಇದರ ತೀವ್ರತೆ ರಾಜಧಾನಿ ಬೊಗೋಟಾ ಹಾಗೂ ನೆರೆರಾಷ್ಟ್ರಗಳಿಗೂ ಹಬ್ಬಿದೆ.

ಅಮೆರಿಕದ ಸ್ಥಳೀಯ ಸಮಯ ಬೆಳಿಗ್ಗೆ 7.34ಕ್ಕೆ ಸಂಭವಿಸಿದ ಈ ಭೂಕಂಪದ ಕೇಂದ್ರಬಿಂದು ಸ್ಯಾನ್ ಜೋಸ್ ಡೆಲ್ ಪಾಲ್ಮಾರ್‌ನಿಂದ ಪೂರ್ವಕ್ಕೆ ಸುಮಾರು 3 ಮೈಲಿ ದೂರದಲ್ಲಿದೆ. ಈ ಪ್ರಬಲ ಭೂಕಂಪಕ್ಕೆ ಕನಿಷ್ಠ 47 ಜನರು ಪ್ರಾಣ ಕಳೆದುಕೊಂಡಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ಹತ್ತಾರು ಕಟ್ಟಡಗಳು ನೆಲಸಮಗೊಂಡಿದ್ದು, ಸಿಲುಕಿರುವವರನ್ನು ಹೊರತೆಗೆಯಲು ರಕ್ಷಣಾ ಕಾರ್ಯಪಡೆಗಳು ಶ್ರಮಿಸುತ್ತಿವೆ.

ಇದನ್ನೂ ಓದಿ: Japan Earthquake: ಜಪಾನ್‌ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ, ಕಟ್ಟಡಗಳು ನೆಲಸಮ

ಈ ಭೂಕಂಪವು ಕೊಲಂಬಿಯಾದ ಚೊಕೊ ಪ್ರದೇಶದ ಸ್ಯಾನ್ ಜೋಸ್ ಡೆಲ್ ಪಾಲ್ಮಾರ್ ಎಂಬ ಸಣ್ಣ ಪಟ್ಟಣದಲ್ಲಿ ಸಂಭವಿಸಿದೆ. ಇದು ರಾಜಧಾನಿ ಬೊಗೋಟಾದಿಂದ ಪಶ್ಚಿಮಕ್ಕೆ ಸುಮಾರು 400 ಕಿಲೋಮೀಟರ್ ದೂರದಲ್ಲಿದೆ. ಇದು ಸುಮಾರು 4,800 ಜನಸಂಖ್ಯೆಯನ್ನು ಹೊಂದಿದೆ. ಯುಎಸ್ ಜಿಯೋಲಾಜಿಕಲ್ ಸರ್ವೇ (USGS) ಮತ್ತು ಕೊಲಂಬಿಯಾದ ಭೂಕಂಪಶಾಸ್ತ್ರ ಸಂಸ್ಥೆಯ ಪ್ರಕಾರ, ಭೂಕಂಪವು ಭೂಮಿಯ ಅಡಿಯಲ್ಲಿ ಸುಮಾರು 107 ಕಿಲೋಮೀಟರ್ (66 ಮೈಲಿ) ಆಳದಲ್ಲಿ ಸಂಭವಿಸಿದೆ. ಈ ಭಾರಿ ಕಂಪನ ನೆರೆಯ ರಾಷ್ಟ್ರ ಎಕ್ವಡಾರ್‌ನಲ್ಲೂ ವರದಿಯಾಗಿದೆ.

ವಿಮಾನ ನಿಲ್ದಾಣಗಳ ಸ್ಥಗಿತ:

ಕಟ್ಟಡಗಳು ಮತ್ತು ಮೂಲಸೌಕರ್ಯಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ಪಶ್ಚಿಮ ಕೊಲಂಬಿಯಾದ 6 ಪ್ರಮುಖ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: Peru Earthquake: ಪೆರುವಿನಲ್ಲಿ ಅವಳಿ ಭೂಕಂಪ: 6 ಮಂದಿ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ,ಐತಿಹಾಸಿಕ ಚರ್ಚ್ ನೆಲಸಮ

ತುರ್ತು ರಕ್ಷಣಾ ಕಾರ್ಯಾಚರಣೆ:

‘ಕಾಲಿ’ ಸೇರಿದಂತೆ ವಿವಿಧ ನಗರಗಳಲ್ಲಿ ಕಟ್ಟಡಗಳ ಅಡಿಯಲ್ಲಿ ಜನರು ಸಿಲುಕಿರುವ ಶಂಕೆಯಿದ್ದು, ಸೇನೆ ಹಾಗೂ ದುರಂತ ನಿರ್ವಹಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪರಿಸ್ಥಿತಿ ತೀವ್ರ ಗಂಭೀರವಾಗಿದ್ದು, ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:32 pm, Mon, 10 August 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ