AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ನೇಪಾಳದಲ್ಲಿ ಭಾರಿ ಭೂಕಂಪ: 5.5ರಷ್ಟು ತೀವ್ರತೆ ದಾಖಲು

ನೇಪಾಳದಲ್ಲಿ ಭಾರಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Earthquake: ನೇಪಾಳದಲ್ಲಿ ಭಾರಿ ಭೂಕಂಪ: 5.5ರಷ್ಟು ತೀವ್ರತೆ ದಾಖಲು
Earthquake
TV9 Web
| Edited By: |

Updated on: Jul 31, 2022 | 10:22 AM

Share

ನೇಪಾಳದಲ್ಲಿ ಭಾರಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾನುವಾರ ಕಠ್ಮಂಡುವಿನಿಂದ ಪೂರ್ವ-ಆಗ್ನೇಯಕ್ಕೆ 147 ಕಿಮೀ ದೂರದಲ್ಲಿರುವ ನೇಪಾಳದ ಧಿತುಂಗ್‌ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ನೇಪಾಳದ ಕಠ್ಮಂಡುವಿನಲ್ಲಿ 7:58 ಕ್ಕೆ ಕಂಪನದ ಅನುಭವವಾಯಿತು. ನೇಪಾಳದ ಧಿತುಂಗ್ ಭಾರತದ ಮುಜಾಫರ್‌ಪುರದ ಈಶಾನ್ಯಕ್ಕೆ 170 ಕಿಮೀ ದೂರದಲ್ಲಿದೆ.

ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಬಿಹಾರದ ಸೀತಾಮರ್ಹಿ, ಮುಜಾಫರ್‌ಪುರ ಮತ್ತು ಭಾಗಲ್‌ಪುರದಲ್ಲಿ ಭೂಕಂಪದ ಅನುಭವವಾಗಿತ್ತು. ಕಂಪನದಿಂದಾಗಿ ಬಿಹಾರದಲ್ಲಿ ಕೆಲವರು ಭಯಭೀತರಾಗಿದ್ದಾರೆ.

ಕೆಲವು ದಿನಗಳ ಹಿಂದೆ 4.7 ತೀವ್ರತೆಯ ಭೂಕಂಪವು ಮಧ್ಯ ನೇಪಾಳವನ್ನು ಬೆಚ್ಚಿಬೀಳಿಸಿತ್ತು, ನಿದ್ರೆಯಿಂದ ಎಚ್ಚರವಾಗಿ ಮನೆಯಿಂದ ಹೊರ ಓಡುವಂತೆ ಮಾಡಿತ್ತು. ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಪ್ರಕಾರ, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆಯ ಭೂಕಂಪವು ಬೆಳಿಗ್ಗೆ 6.07 ಕ್ಕೆ ಸಂಭವಿಸಿತ್ತು. ಭೂಕಂಪನವು ಕಠ್ಮಂಡುವಿನಿಂದ 100 ಪೂರ್ವಕ್ಕೆ ಸಿಂಧುಪಾಲ್‌ಚೌಕ್ ಜಿಲ್ಲೆಯ ಹೆಲಂಬುದಲ್ಲಿ ಸಂಭವಿಸಿತ್ತು.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ