Iran Terror Attack: ಇರಾನ್​ನ ಷಿಯಾ ಯಾತ್ರಾ ಸ್ಥಳದಲ್ಲಿ ಉಗ್ರರಿಂದ ಗುಂಡಿನ ದಾಳಿ; 15 ಮಂದಿ ಸಾವು

ಇರಾನ್ ಸರ್ಕಾರಿ ಪಡೆಗಳ ಗಣನೀಯ ಪ್ರಮಾಣದ ಸಿಬ್ಬಂದಿಯನ್ನು ಹಿಜಾಬ್ ವಿರೋಧಿ ಹೋರಾಟಗಳನ್ನು ಹತ್ತಿಕ್ಕಲೆಂದು ನಿಯೋಜಿಸಲಾಗಿದೆ.

Iran Terror Attack: ಇರಾನ್​ನ ಷಿಯಾ ಯಾತ್ರಾ ಸ್ಥಳದಲ್ಲಿ ಉಗ್ರರಿಂದ ಗುಂಡಿನ ದಾಳಿ; 15 ಮಂದಿ ಸಾವು
ಇರಾನ್​ನ ಶಾ ಚೆರಾಗ್ ಮಸೀದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 27, 2022 | 7:22 AM

ತೆಹರಾನ್: ಇರಾನ್​ನಲ್ಲಿ ಹಿಜಾಬ್ ವಿರೋಧಿ ಹೋರಾಟಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ ಷಿಯಾ ಮುಸ್ಲಿಂ ಸಮುದಾಯದ ಪ್ರಮುಖ ಯಾತ್ರಾ ಸ್ಥಳ ‘ಷಾ ಚೆರಾಗ್’ ಮಸೀದಿಯ ಮೇಲೆ ಭೀಕರ ಭಯೋತ್ಪಾದನಾ ದಾಳಿ  (Terrorist Attack) ನಡೆದಿದೆ. ಅಪರಿಚಿತ ಬಂದೂಕುಧಾರಿ ಅಡ್ಡಾದಿಡ್ಡಿ ಗುಂಡು ಹಾರಿಸಿದಾಗ 15 ಮಂದಿ ಸ್ಥಳದಲ್ಲಿಯೇ ಮೃತಪಟ್ಟರು. ‘ಷಾ ಚೆರಾಗ್’ ಮಸೀದಿಯಲ್ಲಿ (Shah Cheragh mausoleum in Shiraz) ಷಿಯಾ ಸಮುದಾಯದ 8ನೇ ಧರ್ಮಗುರು ಇಮಾಮ್ ರೆಜಾ ಅವರ ಸಮಾಧಿ ಇದೆ. ಇದು ದಕ್ಷಿಣ ಇರಾನ್​ನ ಪವಿತ್ರ ಯಾತ್ರಾಸ್ಥಳ (Shiite holy site in Iran) ಎಂದು ಹೆಸರುವಾಸಿಯಾಗಿದೆ.

ಇರಾನ್​ನ ಸರ್ಕಾರಿ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿ ಪ್ರಕಟಿಸಿರುವ ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆಯು, ‘15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ’ ಎಂದು ದೃಢಪಡಿಸಿದೆ. ಇರಾನ್​ನ ಸರ್ಕಾರಿ ಸುದ್ದಿಸಂಸ್ಥೆ ಐಆರ್​ಎನ್​ಎ ಸತ್ತವರ ನಿಖರ ಮಾಹಿತಿ ನೀಡಿಲ್ಲ. ಆದರೆ ಸ್ಥಳೀಯ ಮಾಧ್ಯಮಗಳು ಸುಮಾರು 40 ಮಂದಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿವೆ.

ಈ ದಾಳಿಗೆ ಸುನ್ನಿ ತೀವ್ರಗಾಮಿಗಳೇ ಕಾರಣ ಎಂದು ಶಂಕಿಸಲಾಗಿದೆ. ಸರ್ಕಾರಿ ಪಡೆಗಳ ಗಣನೀಯ ಪ್ರಮಾಣದ ಸಿಬ್ಬಂದಿಯನ್ನು ಹಿಜಾಬ್ ವಿರೋಧಿ ಹೋರಾಟಗಳನ್ನು ಹತ್ತಿಕ್ಕಲೆಂದು ನಿಯೋಜಿಸಲಾಗಿದೆ. ಹೀಗಾಗಿ ಈ ಘಟನೆಯನ್ನು ಬಗ್ಗೆ ಎಚ್ಚರವಹಿಸಲು ಭದ್ರತಾ ಪಡೆಗಳು ವಿಫಲವಾದವು ಎಂಬ ಆರೋಪಗಳು ಕೇಳಿಬಂದಿವೆ.

ಹೊಣೆ ಹೊತ್ತ ಐಸಿಸ್, ಅಧ್ಯಕ್ಷರಿಂದ ಪ್ರತೀಕಾರದ ಪ್ರತಿಜ್ಞೆ

ಮಸೀದಿಗೆ ನುಗ್ಗಿದ ಅಪರಿಚತರು ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ಏಕಾಏಕಿ ಅಡ್ಡಾದಿಡ್ಡಿ ಗುಂಡು ಹಾರಿಸಲು ಆರಂಭಿಸಿದರು. ಕೆಲ ಹೊತ್ತಿನ ನಂತರ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯ (ಐಸಿಸ್) ಭಾಗವಾಗಿ ಗುರುತಿಸಿಕೊಂಡಿರುವ ಗುಂಪೊಂದು ದಾಳಿಯ ಹೊಣೆ ಹೊತ್ತುಕೊಂಡಿತು.

ಭಯೋತ್ಪಾದಕ ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ದಾಳಿ ಮಾಡಿದವರು ಯಾರೇ ಆಗಿದ್ದರೂ ಬಿಡುವುದಿಲ್ಲ. ಅವರನ್ನು ಪತ್ತೆ ಹಚ್ಚಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ. ‘ದೇಶವನ್ನು ವಿಭಜಿಸಲು ಯತ್ನಿಸುತ್ತಿರುವ ಇರಾನ್ ವಿರೋಧಿಗಳನ್ನು ಸಹಿಸಲು ಆಗುವುದಿಲ್ಲ’ ಎಂದು ಕಟುವಾಗಿ ನುಡಿದರು.

Published On - 7:18 am, Thu, 27 October 22

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ