ಆಫ್ರಿಕಾದಲ್ಲಿ ವಲಸಿಗರು ಪ್ರಯಾಣಿಸುತ್ತಿದ್ದ ಹಡಗು ಮುಳುಗಿ 57 ಮಂದಿ ಸಾವು; ಒಂದೇ ತಿಂಗಳಲ್ಲಿ ಇದು ಎರಡನೇ ದುರಂತ

ಹಡಗಿನಲ್ಲಿ ಮಕ್ಕಳು, ಮಹಿಳೆಯರೆಲ್ಲ ಸೇರಿ ಸುಮಾರು 75 ವಲಸಿಗರು ಇದ್ದರು. ಈಗ 57 ಜನರು ಮೃತಪಟ್ಟಿದ್ದು, ಅದರಲ್ಲಿ 20 ಮಹಿಳೆಯರು, ಇಬ್ಬರು ಮಕ್ಕಳು ಸೇರಿದ್ದಾರೆಂದು ಮೆಸೆಲಿ ಹೇಳಿದ್ದಾರೆ.

ಆಫ್ರಿಕಾದಲ್ಲಿ ವಲಸಿಗರು ಪ್ರಯಾಣಿಸುತ್ತಿದ್ದ ಹಡಗು ಮುಳುಗಿ 57 ಮಂದಿ ಸಾವು; ಒಂದೇ ತಿಂಗಳಲ್ಲಿ ಇದು ಎರಡನೇ ದುರಂತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jul 27, 2021 | 9:50 AM

ಆಫ್ರಿಕನ್​​ ವಲಸಿಗರಿದ್ದ ಹಡಗು ಲಿಬಿಯಾ(Libya)ದ ಕರಾವಳಿ ತೀರ (Coast)ದಲ್ಲಿ ಮುಳುಗಿದ ಪರಿಣಾಮ ಸುಮಾರು 57 ಮಂದಿ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. ಯುರೋಪ್​​​ನಲ್ಲಿ ವಲಸಿಗರು ಉತ್ತಮವಾಗಿ ಜೀವನ ನಡೆಸಲು ಪ್ರಯತ್ನಿಸುತ್ತಿರುವ ಮಧ್ಯೆಯೇ, ಮೆಡಿಟೇರಿಯನ್​ ಸಮುದ್ರದಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ದುರಂತವಾಗಿದೆ. ಈ ಹಡಗು ಪಶ್ಚಿಮ ಕರಾವಳಿ ಪಟ್ಟಣ ಖುಮ್ಸ್​​ನಿಂದ ಭಾನುವಾರ ಹೊರಟಿತ್ತು ಎಂದು ಅಂತಾರಾಷ್ಟ್ರೀಯ ವಲಸೆ ಆರ್ಗನೈಸೇಶನ್​​ನ ವಕ್ತಾರೆ ಸಫಾ ಮೆಸೆಲಿ ತಿಳಿಸಿದ್ದಾರೆ.

ಹಡಗಿನಲ್ಲಿ ಮಕ್ಕಳು, ಮಹಿಳೆಯರೆಲ್ಲ ಸೇರಿ ಸುಮಾರು 75 ವಲಸಿಗರು ಇದ್ದರು. ಈಗ 57 ಜನರು ಮೃತಪಟ್ಟಿದ್ದು, ಅದರಲ್ಲಿ 20 ಮಹಿಳೆಯರು, ಇಬ್ಬರು ಮಕ್ಕಳು ಸೇರಿದ್ದಾರೆಂದು ಮೆಸೆಲಿ ಹೇಳಿದ್ದಾರೆ. ಅಲ್ಲದೆ, ಉಳಿದ 18 ಜನರನ್ನು ಮೀನುಗಾರರು ರಕ್ಷಿಸಿದ್ದಾರೆಂದೂ ಮಾಹಿತಿ ನೀಡಿದ್ದಾರೆ.

ಹಡಗು ಮೊದಲು ಇಂಜಿನ್​ ಸಮಸ್ಯೆಯಿಂದ ನಿಂತಿತ್ತು. ಆದರೆ ನಂತರ ಕೆಟ್ಟ ಹವಾಮಾನದ ಕಾರಣದಿಂದ ಮುಳುಗಿ ದುರಂತ ಸಂಭವಿಸಿದೆ. ಹೀಗೆ ಪ್ರಾಣಾಪಾಯದಿಂದ ಪಾರಾದವರಲ್ಲಿ ನೈಜೀರಿಯಾ, ಘಾನಾ, ಗಾಂಬಿಯಾದವರು ಇದ್ದಾರೆ ಎಂದು ಹೇಳಲಾಗಿದೆ. ಇದು ಲಿಬಿಯಾ ಕರಾವಳಿ ತೀರದಲ್ಲಿ, ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ಎರಡನೇ ಹಡಗು ದುರಂತವಾಗಿದೆ. ಕೆಲವೇ ದಿನಗಳ ಹಿಂದೆ ಹಡಗು ಮುಳುಗಿ 20 ವಲಸಿಗರು ಮೃತಪಟ್ಟಿದ್ದರು.

ಇದನ್ನೂ ಓದಿ: ‘ಶಾರುಖ್​ ಖಾನ್​ರದ್ದು ಅತಿ ಕೆಟ್ಟ ಮತ್ತು ಸಹಿಸಲಾಗದ ನಟನೆ’; ಪತ್ನಿ ಗೌರಿ ಹೀಗೆ ಹೇಳಿದ್ದು ಯಾಕೆ?

57 dead as boat carrying African migrants capsizes off In Libya

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು