Morocco Earthquake: ಮೊರಾಕೊದಲ್ಲಿ 6.8 ತೀವ್ರತೆಯ ಭೂಕಂಪ, 300ಕ್ಕೂ ಹೆಚ್ಚು ಸಾವು, ಪ್ರಧಾನಿ ಮೋದಿ ಸಂತಾಪ
ಉತ್ತರ ಆಫ್ರಿಕಾದ ಮೊರಾಕೊದಲ್ಲಿ (ಸೆ.8) ಭಾರೀ ಭೂಕಂಪ ಸಂಭವಿಸಿದ್ದು, ಸುಮಾರು 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆಫ್ರಿಕಾ ಸರ್ಕಾರದ ವರದಿ ಪ್ರಕಾರ ಮಾರಕೇಶ್ ಪ್ರದೇಶದ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಘಟನೆಗೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಉತ್ತರ ಆಫ್ರಿಕಾದ ಮೊರಾಕೊದಲ್ಲಿ (Morocco) (ಸೆ.8) ಭಾರೀ ಭೂಕಂಪ (Earthquake) ಸಂಭವಿಸಿದ್ದು, ಸುಮಾರು 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆಫ್ರಿಕಾ ಸರ್ಕಾರದ ವರದಿ ಪ್ರಕಾರ ಮಾರಕೇಶ್ ಪ್ರದೇಶದ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಪ್ರದೇಶದಲ್ಲಿ 6.8 ತೀವ್ರತೆಯ ಕಂಪನ ಉಂಟಾಗಿದೆ. ಜತೆಗೆ ಶುಕ್ರವಾರ ರಾತ್ರಿ ಜನರ ಕಿರುಚಾಟ ಶುರು ಮಾಡಿದ್ದಾರೆ. ವರದಿಗಳ ಪ್ರಕಾರ ಭೂಕಂಪದಿಂದ ಅಲ್-ಹೌಜ್, ಮರ್ರಾಕೇಶ್, ಔರ್ಜಾಜೆಟ್, ಅಜಿಲಾಲ್, ಚಿಚೌವಾ ಮತ್ತು ತಾರೌಡಾಂಟ್ ಪ್ರಾಂತ್ಯಗಳು ಮತ್ತು ಪುರಸಭೆ ಪ್ರದೇಶಗಳಲ್ಲಿ 296 ಜನರು ಸಾವನ್ನಪ್ಪಿದ್ದಾರೆ ಎಂದು ಮೊರಾಕೊದ ಆಂತರಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇನ್ನು ಈ ಘಟನೆಯಿಂದ 153 ಜನರು ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ.
ಈ ಭೂಕಂಪವು ಪ್ರವಾಸಿ ಹಾಟ್‌ಸ್ಪಾಟ್ ಮರಕೇಶ್‌ನ ನೈಋತ್ಯಕ್ಕೆ 44 ಮೈಲಿ (71 ಕಿಲೋಮೀಟರ್) 18.5 ಕಿಲೋಮೀಟರ್ ಆಳದಲ್ಲಿ ರಾತ್ರಿ 11:11 ಕ್ಕೆ (2211 ಜಿಎಂಟಿ) ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಇನ್ನು ಈ ಭೂಕಂಪದ ಕರಾಳತೆಯ ಬಗ್ಗೆ ವ್ಯಕ್ತಿಯೊಬ್ಬರು ವಿವರಿಸಿದ್ದಾರೆ. ನಾನು ಇಂತಹ ಭಯನಕ ಭೂಕಂಪ ನೋಡಿರಲಿಲ್ಲ, ತುಂಬಾ ಭಯವಾಗಿದೆ ಎಂದು ಸುದ್ದಿ ಸಂಸ್ಥೆ AFPಗೆ ತಿಳಿಸಿದರು.
ಒಂದು ಕಡೆಯಲ್ಲಿ ಕಟ್ಟಡಗಳು ನೆಲಸಮವಾಗುತ್ತಿದ್ದರೆ, ಇನ್ನೊಂದು ಕಡೆ ಜನರೆಲ್ಲ ಮನೆಯ ಹೊರಗೆ ಬಂದು ಚಿರಾಡುತ್ತಿದ್ದರು. ಮಕ್ಕಳು ಅಳುತ್ತಿದ್ದರು ಎಂದು ಹೇಳಿದ್ದಾರೆ. ಭೂಕಂಪದಿಂದ 10 ನಿಮಿಷಗಳ ಕಾಲ ವಿದ್ಯುತ್ ಸ್ಥಗಿತಗೊಂಡಿತು ಮತ್ತು (ದೂರವಾಣಿ) ನೆಟ್‌ವರ್ಕ್ ಕೂಡ ಸ್ಥಗಿತಗೊಂಡಿತು ಎಂದು ಹೇಳಿದ್ದಾರೆ.
ಭೂಕಂಪದಿಂದ ಗಾಯಗೊಂಡವರನ್ನು ಮರಕೇಶ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭೂಕಂಪದ ಕೇಂದ್ರಬಿಂದು ಅಲ್-ಹೌಜ್ ಪಟ್ಟಣದಲ್ಲಿರುವ ಮನೆಗಳು ಕುಸಿದು, ಅವಶೇಷಗಳ ಅಡಿಯಲ್ಲಿ ಅನೇಕ ಜನರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೊರಾಕೊಗೆ ನೆರವು ನೀಡಲು ಭಾರತ ಸಿದ್ಧ : ಪ್ರಧಾನಿ ಮೋದಿ
Extremely pained by the loss of lives due to an earthquake in Morocco. In this tragic hour, my thoughts are with the people of Morocco. Condolences to those who have lost their loved ones. May the injured recover at the earliest. India is ready to offer all possible assistance to…
— Narendra Modi (@narendramodi) September 9, 2023
ಮೊರಾಕೊದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಪ್ರಾಣಹಾನಿ ಉಂಟಾಗಿದೆ. ಇದರಿಂದ ತೀವ್ರ ನೋವಾಗಿದೆ. ಮೊರಾಕೊದ ಜನರೊಂದಿಗೆ ಭಾರತ ಇದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಸಂಕಷ್ಟದ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ:ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿ ಭೂಕಂಪ, 4.3 ತೀವ್ರತೆ ದಾಖಲು
ಇನ್ನು ಕರಾವಳಿ ನಗರಗಳಾದ ರಬತ್, ಕಾಸಾಬ್ಲಾಂಕಾ ಮತ್ತು ಎಸ್ಸೌಯಿರಾಗಳಲ್ಲೂ ಭೂಕಂಪನದ ಅನುಭವವಾಗಿದೆ. ಆದರೆ ಯಾವುದೇ ಹೆಚ್ಚಿನ ಹಾನಿ ಉಂಟಾಗಿಲ್ಲ. ಆದರೆ ಇದರಿಂದ ಅಲ್ಲಿನ ಜನ ತುಂಬಾ ಭಯಭೀತರಾಗಿದ್ದಾರೆ ಎಂದು ಹೇಳಲಾಗಿದೆ. ಈ ಪ್ರದೇಶದಲ್ಲಿ ವರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಲ್ಲಿ ಹೆಚ್ಚಿನ ಹಾನಿ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನೆರೆಯ ಅಲ್ಜೀರಿಯಾದಲ್ಲಿಯೂ ಭೂಕಂಪದ ಅನುಭವವಾಗಿದ್ದು, ಯಾವುದೇ ಹಾನಿ ಅಥವಾ ಸಾವುನೋವುಗಳನ್ನು ಉಂಟುಮಾಡಿಲ್ಲ ಎಂದು ಅಲ್ಜೀರಿಯನ್ ಸಿವಿಲ್ ಡಿಫೆನ್ಸ್ ಹೇಳಿದೆ. 2004 ರಲ್ಲಿ, ಈಶಾನ್ಯ ಮೊರಾಕೊದ ಅಲ್ ಹೋಸಿಮಾದಲ್ಲಿ ಭೂಕಂಪ ಸಂಭವಿಸಿದಾಗ 628 ಜನರು ಸಾವನ್ನಪ್ಪಿದರು ಮತ್ತು 926 ಜನರು ಗಾಯಗೊಂಡಿದ್ದರು.
ಮತ್ತಷ್ಟು ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ