ಪಾಕಿಸ್ತಾನದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು 6 ಪಾಕ್ ಯೋಧರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪ್ರಮುಖ ಶ್ರೇಣಿಯ ಅಧಿಕಾರಿಗಳು ಮತ್ತು ಕನಿಷ್ಠ ಮೂವರು ಕಮಾಂಡೋಗಳು ಇದ್ದರು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ.
ಸೆ.25ರ ತಡರಾತ್ರಿ ಹರ್ನೈ ಬಲೂಚಿಸ್ತಾನದ ಖೋಸ್ಟ್ ಬಳಿ ಹಾರಾಟದ ಕಾರ್ಯಾಚರಣೆಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ಕಳೆದ ತಡರಾತ್ರಿ ಹರ್ನೈ ಬಲೂಚಿಸ್ತಾನದ ಖೋಸ್ಟ್ ಬಳಿ ಹಾರುವ ಕಾರ್ಯಾಚರಣೆಯ ಸಮಯದಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್ಪ ತನಗೊಂಡಿದೆ. 2 ಪೈಲಟ್‌ಗಳು ಸೇರಿದಂತೆ ಎಲ್ಲಾ 6 ಸಿಬ್ಬಂದಿ ಶಹಾದತ್ ಅನ್ನು ಸ್ವೀಕರಿಸಿದ್ದಾರೆ ಎಂದು ಸೇನೆಯ ಹೇಳಿಕೆ ಸೋಮವಾರ ತಿಳಿಸಿದೆ.
ಕಳೆದ ತಿಂಗಳ ಆರಂಭದಲ್ಲಿ, ಪಾಕಿಸ್ತಾನದ ಮತ್ತೊಂದು ಮಿಲಿಟರಿ ಹೆಲಿಕಾಪ್ಟರ್ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪತನಗೊಂಡಿತು ಮತ್ತು ಅಪಘಾತದಲ್ಲಿ ಆರು ಮಂದಿ ಉನ್ನತ ಸೇನಾ ಕಮಾಂಡರ್ ಮೃತಪಟ್ಟಿದ್ದರು.
ಪಾಕಿಸ್ತಾನ ಸೇನೆಯ ಏವಿಯೇಷನ್ ಹೆಲಿಕಾಪ್ಟರ್ ಕಳೆದ ತಿಂಗಳು ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿದ್ದಾಗ ಎಟಿಸಿಯೊಂದಿಗಿನ ಸಂಪರ್ಕವನ್ನು ಕಳೆದುಕೊಂಡಿತ್ತು. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.