ಇರಾಕ್ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರ, 6 ಮಂದಿ ಸಾವು

ಬಾಗ್ದಾದ್: ಇರಾಕ್ ದೇಶದ ರಾಜಕೀಯ ವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಕನಿಷ್ಠ 6 ಮಂದಿ ಪ್ರತಿಭಟನಾಕಾರರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಸುಮಾರು 158ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ: ಸರ್ಕಾರವನ್ನು ಉಚ್ಚಾಟಿಸಬೇಕೆಂದು ಇರಾಕ್ ರಾಜಧಾನಿ ಬಾಗ್ದಾದ್​ ಸೇರಿದಂತೆ ದಕ್ಷಿಣ ಭಾಗದ ಹಲವು ನಗರಗಳಲ್ಲಿ ಪ್ರತಿಭಟನೆಗಳು ಹೆಚ್ಚಾಗಿವೆ. ಕಳೆದ ಹಲವು ದಿನಗಳಿಂದ ನಾಸಿರಿಯಾದಲ್ಲಿ ಪ್ರತಿಭಟನೆ ತೀವ್ರಗೊಂಡಿತ್ತು. ಸೇತುವೆಗಳ ಮೇಲೆ ರಾತ್ರಿಯಿಡೀ ಪ್ರತಿಭಟನಾಕಾರರು ನೆರೆದಿದ್ದರು. ಹೀಗಾಗಿ […]

ಇರಾಕ್ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರ, 6 ಮಂದಿ ಸಾವು
Follow us
ಸಾಧು ಶ್ರೀನಾಥ್​
|

Updated on:Nov 25, 2019 | 2:48 PM

ಬಾಗ್ದಾದ್: ಇರಾಕ್ ದೇಶದ ರಾಜಕೀಯ ವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಕನಿಷ್ಠ 6 ಮಂದಿ ಪ್ರತಿಭಟನಾಕಾರರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಸುಮಾರು 158ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ: ಸರ್ಕಾರವನ್ನು ಉಚ್ಚಾಟಿಸಬೇಕೆಂದು ಇರಾಕ್ ರಾಜಧಾನಿ ಬಾಗ್ದಾದ್​ ಸೇರಿದಂತೆ ದಕ್ಷಿಣ ಭಾಗದ ಹಲವು ನಗರಗಳಲ್ಲಿ ಪ್ರತಿಭಟನೆಗಳು ಹೆಚ್ಚಾಗಿವೆ. ಕಳೆದ ಹಲವು ದಿನಗಳಿಂದ ನಾಸಿರಿಯಾದಲ್ಲಿ ಪ್ರತಿಭಟನೆ ತೀವ್ರಗೊಂಡಿತ್ತು. ಸೇತುವೆಗಳ ಮೇಲೆ ರಾತ್ರಿಯಿಡೀ ಪ್ರತಿಭಟನಾಕಾರರು ನೆರೆದಿದ್ದರು. ಹೀಗಾಗಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ಬಳಿಕವೂ ಪ್ರತಿಭಟನೆಗಳು ಮುಂದುವರೆದಿದ್ದು, ಕೆಲ ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ದೇಶದ ಆರ್ಥಿಕ ಸುಧಾರಣೆ, ಭ್ರಷ್ಟಾಚಾರ ತಡೆಗಟ್ಟುವಿಕೆ, ಉತ್ತಮ ಆರೋಗ್ಯ, ಉದ್ಯೋಗ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಕ್ಟೋಬರ್​ ತಿಂಗಳಿಂದಲೂ ಇರಾಕ್ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ.

Published On - 10:43 pm, Sun, 24 November 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್