AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hajj Pilgrimage: ಹಜ್​ ಯಾತ್ರೆಗೆ ತೆರಳಿದ್ದ 68 ಮಂದಿ ಭಾರತೀಯರು ಸಾವು

ಹಜ್​ ಯಾತ್ರೆಗೆ ತೆರಳಿದ್ದ ಭಾರತೀಯ ಪ್ರಯಾಣಿಕರ ಪೈಕಿ 68 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ, ಇದುವರೆಗೆ 600ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

Hajj Pilgrimage: ಹಜ್​ ಯಾತ್ರೆಗೆ ತೆರಳಿದ್ದ 68 ಮಂದಿ ಭಾರತೀಯರು ಸಾವು
ಮೆಕ್ಕಾImage Credit source: Sky News
ನಯನಾ ರಾಜೀವ್
|

Updated on: Jun 20, 2024 | 9:19 AM

Share

ಹಜ್​ ಯಾತ್ರೆ(Hajj Pilgrimage)ಗೆಂದು ಸೌದಿ ಅರೇಬಿಯಾಗೆ ತೆರಳಿದ್ದ ಭಾರತೀಯರ ಪೈಕಿ 68 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೆಕ್ಕಾದಲ್ಲಿ ಗರಿಷ್ಠ ಉಷ್ಣಾಂಶ 50 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಿರುವ ಪರಿಣಾಮ ಇದುವರೆಗೆ ಒಟ್ಟು 600ಕ್ಕೂ ಅಧಿಕ ಮಂದಿ ಯಾತ್ರಿಗಳು ಮೃತಪಟ್ಟಿದ್ದಾರೆ. ಅದರಲ್ಲಿ 68 ಮಂದಿ ಭಾರತದವರಾಗಿದ್ದಾರೆ.

ಕೆಲವರು ವೃದ್ಧರಿದ್ದರು, ಇನ್ನೂ ಕೆಲವರಿಗೆ ಅನೇಕ ಆರೋಗ್ಯ ಸಮಸ್ಯೆಗಳಿದ್ದವು, ಇನ್ನೂ ಕೆಲವು ಮಂದಿ ಶಾಖದಿಂದಲೇ ಮೃತಪಟ್ಟಿದ್ದಾರೆ. ಇಂಡೋನೇಷ್ಯಾ, ಇರಾನ್, ಸೆನೆಗಲ್, ಟುನೀಶಿಯಾ ಮತ್ತು ಇರಾಕ್‌ನ ಸ್ವಾಯತ್ತ ಕುರ್ದಿಸ್ತಾನ್ ಪ್ರದೇಶಗಳು ಸಹ ಸಾವುನೋವುಗಳನ್ನು ದೃಢಪಡಿಸಿವೆ, ಆದರೂ ಅನೇಕ ಸಂದರ್ಭಗಳಲ್ಲಿ ಅಧಿಕಾರಿಗಳು ಕಾರಣವನ್ನು ಸ್ಪಷ್ಟಪಡಿಸಿಲ್ಲ.

ಎಎಫ್‌ಪಿ ಲೆಕ್ಕಾಚಾರದ ಪ್ರಕಾರ ಇದುವರೆಗೆ ಒಟ್ಟು 645 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವರ್ಷ 200 ಕ್ಕೂ ಹೆಚ್ಚು ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ, ಅವರಲ್ಲಿ ಹೆಚ್ಚಿನವರು ಇಂಡೋನೇಷ್ಯಾದಿಂದ ಬಂದವರು.

ಮತ್ತಷ್ಟು ಓದಿ: Hajj Yatra: ಮೆಕ್ಕಾದಲ್ಲಿ 50 ಡಿಗ್ರಿ ಸೆಲ್ಸಿಯಸ್​ ದಾಟಿದ ತಾಪಮಾನ, ಹಜ್​ ಯಾತ್ರೆಗೆ ತೆರಳಿದ್ದ 550 ಮಂದಿ ಯಾತ್ರಿಕರು ಸಾವು

ಏಕೆಂದರೆ ವಿಶ್ವದ ಅತಿದೊಡ್ಡ ಧಾರ್ಮಿಕ ಕ್ಷೇತ್ರಗಳಲ್ಲಿ ಮೆಕ್ಕಾವೂ ಒಂದು. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಮೃತಪಟ್ಟವರಲ್ಲಿ ಸಾಕಷ್ಟು ಮಂದಿ ಈಜಿಪ್ಟ್​ ನಾಗರಿಕರು ಎನ್ನಲಾಗಿದೆ. 1920 ರ ದಶಕದಲ್ಲಿ ಮೆಕ್ಕಾವನ್ನು ಸೌದಿ ರಾಜಮನೆತನ ತಮ್ಮ ವಶಕ್ಕೆ ತೆಗೆದುಕೊಂಡಿತು.

ಆ ಬಳಿಕ ತೀರ್ಥಯಾತ್ರೆ ಆಯೋಜಿಸುವುದು ಹೆಮ್ಮೆ ಎಂದು ಅದು ಪರಿಗಣಿಸಿದೆ. ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಶತಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡಲಾಗಿದೆ. ಯಾತ್ರಾರ್ಥಿಗಳ ಯೋಗಕ್ಷೇಮಕ್ಕಾಗಿ ಸೌದಿ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಆದರೂ 2015 ರಲ್ಲಿ ಇಲ್ಲಿ ಉಂಟಾದ ಕಾಲ್ತುಳಿತಕ್ಕೆ ಸುಮಾರು 2,400 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್