ಹಜ್ ಯಾತ್ರೆ(Hajj Pilgrimage)ಗೆಂದು ಸೌದಿ ಅರೇಬಿಯಾಗೆ ತೆರಳಿದ್ದ ಭಾರತೀಯರ ಪೈಕಿ 68 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೆಕ್ಕಾದಲ್ಲಿ ಗರಿಷ್ಠ ಉಷ್ಣಾಂಶ 50 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿರುವ ಪರಿಣಾಮ ಇದುವರೆಗೆ ಒಟ್ಟು 600ಕ್ಕೂ ಅಧಿಕ ಮಂದಿ ಯಾತ್ರಿಗಳು ಮೃತಪಟ್ಟಿದ್ದಾರೆ. ಅದರಲ್ಲಿ 68 ಮಂದಿ ಭಾರತದವರಾಗಿದ್ದಾರೆ.
ಕೆಲವರು ವೃದ್ಧರಿದ್ದರು, ಇನ್ನೂ ಕೆಲವರಿಗೆ ಅನೇಕ ಆರೋಗ್ಯ ಸಮಸ್ಯೆಗಳಿದ್ದವು, ಇನ್ನೂ ಕೆಲವು ಮಂದಿ ಶಾಖದಿಂದಲೇ ಮೃತಪಟ್ಟಿದ್ದಾರೆ. ಇಂಡೋನೇಷ್ಯಾ, ಇರಾನ್, ಸೆನೆಗಲ್, ಟುನೀಶಿಯಾ ಮತ್ತು ಇರಾಕ್‌ನ ಸ್ವಾಯತ್ತ ಕುರ್ದಿಸ್ತಾನ್ ಪ್ರದೇಶಗಳು ಸಹ ಸಾವುನೋವುಗಳನ್ನು ದೃಢಪಡಿಸಿವೆ, ಆದರೂ ಅನೇಕ ಸಂದರ್ಭಗಳಲ್ಲಿ ಅಧಿಕಾರಿಗಳು ಕಾರಣವನ್ನು ಸ್ಪಷ್ಟಪಡಿಸಿಲ್ಲ.
ಎಎಫ್‌ಪಿ ಲೆಕ್ಕಾಚಾರದ ಪ್ರಕಾರ ಇದುವರೆಗೆ ಒಟ್ಟು 645 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವರ್ಷ 200 ಕ್ಕೂ ಹೆಚ್ಚು ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ, ಅವರಲ್ಲಿ ಹೆಚ್ಚಿನವರು ಇಂಡೋನೇಷ್ಯಾದಿಂದ ಬಂದವರು.
ಮತ್ತಷ್ಟು ಓದಿ: Hajj Yatra: ಮೆಕ್ಕಾದಲ್ಲಿ 50 ಡಿಗ್ರಿ ಸೆಲ್ಸಿಯಸ್ ದಾಟಿದ ತಾಪಮಾನ, ಹಜ್ ಯಾತ್ರೆಗೆ ತೆರಳಿದ್ದ 550 ಮಂದಿ ಯಾತ್ರಿಕರು ಸಾವು
ಏಕೆಂದರೆ ವಿಶ್ವದ ಅತಿದೊಡ್ಡ ಧಾರ್ಮಿಕ ಕ್ಷೇತ್ರಗಳಲ್ಲಿ ಮೆಕ್ಕಾವೂ ಒಂದು. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಮೃತಪಟ್ಟವರಲ್ಲಿ ಸಾಕಷ್ಟು ಮಂದಿ ಈಜಿಪ್ಟ್ ನಾಗರಿಕರು ಎನ್ನಲಾಗಿದೆ. 1920 ರ ದಶಕದಲ್ಲಿ ಮೆಕ್ಕಾವನ್ನು ಸೌದಿ ರಾಜಮನೆತನ ತಮ್ಮ ವಶಕ್ಕೆ ತೆಗೆದುಕೊಂಡಿತು.
ಆ ಬಳಿಕ ತೀರ್ಥಯಾತ್ರೆ ಆಯೋಜಿಸುವುದು ಹೆಮ್ಮೆ ಎಂದು ಅದು ಪರಿಗಣಿಸಿದೆ. ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಶತಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡಲಾಗಿದೆ. ಯಾತ್ರಾರ್ಥಿಗಳ ಯೋಗಕ್ಷೇಮಕ್ಕಾಗಿ ಸೌದಿ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಆದರೂ 2015 ರಲ್ಲಿ ಇಲ್ಲಿ ಉಂಟಾದ ಕಾಲ್ತುಳಿತಕ್ಕೆ ಸುಮಾರು 2,400 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ