Taiwan Earthquake: ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದೆ.

Taiwan Earthquake: ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ಭೂಕಂಪImage Credit source: Hindustan Times
Follow us
ನಯನಾ ರಾಜೀವ್
|

Updated on:Apr 03, 2024 | 8:01 AM

ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದೆ. ತೈವಾನ್‌ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೆಯನ್ನು ನಡುಗಿಸಿದೆ. ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಪೂರ್ವ ತೈವಾನ್‌ನಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ,  ಸಾವುನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ತೈವಾನ್ ಮತ್ತು ಓಕಿನಾವಾ, ಜಪಾನ್ ಮತ್ತು ಫಿಲಿಪೈನ್ಸ್‌ನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ತೈವಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ತೈವಾನ್ ದೂರದರ್ಶನ ಕೇಂದ್ರಗಳು ಭೂಕಂಪದ ಕೇಂದ್ರದ ಸಮೀಪವಿರುವ ಹುವಾಲಿಯನ್‌ನಲ್ಲಿ ಕೆಲವು ಕುಸಿದ ಕಟ್ಟಡಗಳ ಚಿತ್ರಗಳನ್ನು ತೋರಿಸಿವೆ. ಶಾಂಘೈ ವರೆಗೂ ಭೂಕಂಪನದ ಅನುಭವವಾಗಿದೆ.

ಚೀನಾದ ಫುಜಿಯಾನ್ ಪ್ರಾಂತ್ಯದ ಫುಝೌ, ಕ್ಸಿಯಾಮೆನ್, ಕ್ವಾನ್‌ಝೌ ಮತ್ತು ನಿಂಗ್ಡೆಯಲ್ಲೂ ಭೂಕಂಪದ ಅನುಭವವಾಗಿದೆ. ತೈವಾನ್‌ನ ಅಧಿಕೃತ ಸೆಂಟ್ರಲ್ ನ್ಯೂಸ್ ಏಜೆನ್ಸಿ ಈ ಭೂಕಂಪವು 1999 ರ ನಂತರ ದ್ವೀಪವನ್ನು ಅಪ್ಪಳಿಸಿದ ಅತಿದೊಡ್ಡ ಭೂಕಂಪವಾಗಿದೆ. 7.6 ತೀವ್ರತೆಯ ಭೂಕಂಪವು ಸುಮಾರು 2,400 ಜನರ ಸಾವಿಗೆ ಕಾರಣವಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:31 am, Wed, 3 April 24

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು