Taiwan Earthquake: ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದೆ.

Taiwan Earthquake: ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ಭೂಕಂಪ
Image Credit source: Hindustan Times

Updated on: Apr 03, 2024 | 8:01 AM

ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದೆ. ತೈವಾನ್‌ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೆಯನ್ನು ನಡುಗಿಸಿದೆ.
ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಪೂರ್ವ ತೈವಾನ್‌ನಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ,  ಸಾವುನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ತೈವಾನ್ ಮತ್ತು ಓಕಿನಾವಾ, ಜಪಾನ್ ಮತ್ತು ಫಿಲಿಪೈನ್ಸ್‌ನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ತೈವಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ತೈವಾನ್ ದೂರದರ್ಶನ ಕೇಂದ್ರಗಳು ಭೂಕಂಪದ ಕೇಂದ್ರದ ಸಮೀಪವಿರುವ ಹುವಾಲಿಯನ್‌ನಲ್ಲಿ ಕೆಲವು ಕುಸಿದ ಕಟ್ಟಡಗಳ ಚಿತ್ರಗಳನ್ನು ತೋರಿಸಿವೆ. ಶಾಂಘೈ ವರೆಗೂ ಭೂಕಂಪನದ ಅನುಭವವಾಗಿದೆ.

ಚೀನಾದ ಫುಜಿಯಾನ್ ಪ್ರಾಂತ್ಯದ ಫುಝೌ, ಕ್ಸಿಯಾಮೆನ್, ಕ್ವಾನ್‌ಝೌ ಮತ್ತು ನಿಂಗ್ಡೆಯಲ್ಲೂ ಭೂಕಂಪದ ಅನುಭವವಾಗಿದೆ. ತೈವಾನ್‌ನ ಅಧಿಕೃತ ಸೆಂಟ್ರಲ್ ನ್ಯೂಸ್ ಏಜೆನ್ಸಿ ಈ ಭೂಕಂಪವು 1999 ರ ನಂತರ ದ್ವೀಪವನ್ನು ಅಪ್ಪಳಿಸಿದ ಅತಿದೊಡ್ಡ ಭೂಕಂಪವಾಗಿದೆ. 7.6 ತೀವ್ರತೆಯ ಭೂಕಂಪವು ಸುಮಾರು 2,400 ಜನರ ಸಾವಿಗೆ ಕಾರಣವಾಗಿತ್ತು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 7:31 am, Wed, 3 April 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us