AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಯುದ್ಧದ ನಡುವೆ ದುಬೈನ ಜೆಬೆಲ್ ಅಲಿ ಕೈಗಾರಿಕಾ ಪ್ರದೇಶದಲ್ಲಿ 7 ಸ್ಫೋಟ

ದುಬೈನ 'ಜೆಬೆಲ್ ಅಲಿ' ಕೈಗಾರಿಕಾ ವಲಯದಲ್ಲಿ ಇಂದು ಮುಂಜಾನೆ ಸರಣಿ ಸ್ಫೋಟಗಳು ಸಂಭವಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ಆಕಾಶಕ್ಕೆ ದಟ್ಟವಾದ ಕಪ್ಪು ಹೊಗೆ ಚಿಮ್ಮುತ್ತಿರುವುದನ್ನು ನೋಡಬಹುದು. ಕೇವಲ 20 ನಿಮಿಷಗಳ ಅವಧಿಯಲ್ಲಿ 7 ಸ್ಫೋಟಗಳು ಸಂಭವಿಸಿವೆ ಎಂದು ಎಮಿರೇಟಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ಘಟನೆಗೆ ಸೂಕ್ತ ಕಾರಣ ಇನ್ನೂ ತಿಳಿದುಬಂದಿಲ್ಲ. ಯುಎಇಯ ಅತ್ಯಂತ ಪ್ರಮುಖ ಲಾಜಿಸ್ಟಿಕ್ಸ್ ಮತ್ತು ಇಂಧನ ಸಂಗ್ರಹಣಾ ಕೇಂದ್ರವಾಗಿರುವ ದಕ್ಷಿಣ ದುಬೈನ ಜೆಬೆಲ್ ಅಲಿ ಬಂದರು ಮತ್ತು ಕೈಗಾರಿಕಾ ಪ್ರದೇಶದ ಬಳಿ ಈ ಸ್ಫೋಟಗಳು ನಡೆದಿವೆ.

ಇರಾನ್ ಯುದ್ಧದ ನಡುವೆ ದುಬೈನ ಜೆಬೆಲ್ ಅಲಿ ಕೈಗಾರಿಕಾ ಪ್ರದೇಶದಲ್ಲಿ 7 ಸ್ಫೋಟ
Explosion In Jebel Ali Industrial AreaImage Credit source: x
ಸುಷ್ಮಾ ಚಕ್ರೆ
|

Updated on: Aug 05, 2026 | 4:28 PM

Share

ದುಬೈ ಆಗಸ್ಟ್ : ಯುಎಇಯ ದುಬೈನ ಜೆಬೆಲ್ ಅಲಿ ಕೈಗಾರಿಕಾ ಪ್ರದೇಶದಲ್ಲಿ ಇಂದು ಮುಂಜಾನೆ ಕೇವಲ 20 ನಿಮಿಷಗಳ ಅಂತರದಲ್ಲಿ ಕನಿಷ್ಠ 7 ಭಾರಿ ಸ್ಫೋಟಗಳು ಸಂಭವಿಸಿವೆ ಎಂದು ಇರಾನ್ (Iran) ಮಾಧ್ಯಮಗಳು ವರದಿ ಮಾಡಿವೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಮುಗಿಲೆತ್ತರಕ್ಕೆ ಭಾರಿ ಪ್ರಮಾಣದ ಕಪ್ಪು ಹೊಗೆ ಚಿಮ್ಮುತ್ತಿರುವುದು ಕಂಡುಬಂದಿದೆ. ಇರಾನ್‌ನ ಮೆಹ್ರ್ ಸುದ್ಧಿ ಸಂಸ್ಥೆಯು ಎಮಿರೇಟಿ ಅಧಿಕಾರಿಗಳನ್ನು ಉಲ್ಲೇಖಿಸಿ ಈ ಘಟನೆಯನ್ನು ವರದಿ ಮಾಡಿದೆ.

ಈ ಘಟನೆಯಲ್ಲಿ ಆಗಿರುವ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯ ಕುರಿತು ಅಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸ್ಫೋಟ ಮತ್ತು ಅದರಿಂದ ಉಂಟಾದ ಭಾರಿ ಬೆಂಕಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಘಟನೆಯನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ ಇಬ್ಬರನ್ನು ಯುಎಇ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ‘ಒಪ್ಪಂದ ಮಾಡಿಕೊಳ್ಳಿ ಅಥವಾ ಸಂಪೂರ್ಣ ಶರಣಾಗಿ’; ಇರಾನ್‌ ವಿರುದ್ಧ ಗುಡುಗಿದ ಟ್ರಂಪ್

ಯೆಮೆನ್‌ನಿಂದ ನಡೆಸಲಾದ ಕ್ಷಿಪಣಿ ದಾಳಿಯೇ ಈ ಸ್ಫೋಟಗಳಿಗೆ ಕಾರಣ ಎನ್ನಲಾಗಿದೆ. ಆದರೆ, ಈ ಘಟನೆಗೆ ಸೂಕ್ತ ಕಾರಣವೇನೆಂಬುದರ ಬಗ್ಗೆ ಯಾವುದೇ ಖಚಿತ ಮಾಹಿತಿ ಹೊರಬಿದ್ದಿಲ್ಲ. ಇದೇ ವೇಳೆ, ಜೆಬೆಲ್ ಅಲಿ ಬಂದರಿನ ಪಕ್ಕದಲ್ಲಿರುವ ಇಂಧನ ಸಂಗ್ರಹಣೆ ಮತ್ತು ಸಾಗಣೆಗೆ ಬಳಸಲಾಗುವ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿರುವುದನ್ನು ನಾಸಾ (NASA) ತಾಪಮಾನ ಇಮೇಜಿಂಗ್ ಪತ್ತೆ ಮಾಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಫೋಟ ನಡೆದ ಸಮಯದಲ್ಲೇ ಯೆಮೆನ್ ರಾಜಧಾನಿ ಸನಾದಲ್ಲೂ ಭಾರಿ ಸ್ಫೋಟಗಳ ಸದ್ದು ಕೇಳಿಬಂದಿದೆ. ಇವು ವೈಮಾನಿಕ ದಾಳಿಯ ಸದ್ದು ಎಂದು ಕೆಲವು ವರದಿಗಳು ಹೇಳಿದ್ದರೆ, ಇನ್ನು ಕೆಲವು ಮೂಲಗಳು ಯೆಮೆನ್ ಭೂಪ್ರದೇಶದಿಂದ ಕ್ಷಿಪಣಿಗಳನ್ನು ಉಡಾವಣೆ ಮಾಡಲಾಗಿತ್ತು ಎಂದು ತಿಳಿಸಿವೆ.

ಇದನ್ನೂ ಓದಿ: ಇರಾನ್ ಜತೆ ಮತ್ತೆ ಶಾಂತಿ ಮಾತುಕತೆ, ದಾಳಿ ರದ್ದು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು

ಪ್ರಸ್ತುತ ನಡೆಯುತ್ತಿರುವ ಇರಾನ್-ಅಮೆರಿಕ ನಡುವಿನ ಸಂಘರ್ಷದಿಂದಾಗಿ ಉದ್ವಿಗ್ನತೆ ಹೆಚ್ಚಿರುವ ಬೆನ್ನಲ್ಲೇ ಈ ಬೆಳವಣಿಗೆಗಳು ಸಂಭವಿಸಿದ್ದು, ಗಲ್ಫ್ ಪ್ರದೇಶದಲ್ಲಿ ತೀವ್ರ ಆತಂಕ ಮನೆಮಾಡಿದೆ. ಈ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಯುಎಇ ಅಧಿಕಾರಿಗಳು ವಿವರವಾದ ಹೇಳಿಕೆಯನ್ನು ಬಿಡುಗಡೆ ಮಾಡಬೇಕಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ