ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ

ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ಬಾಂಗ್ಲಾದೇಶ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಈ ಘೋರ ಅಪರಾಧವನ್ನು ಖಂಡಿಸಿದ್ದಾರೆ. ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಹಿಂದೂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ. ಈ ಬಂಧನದ ಸುದ್ದಿಯನ್ನು ದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ದೃಢಪಡಿಸಿದ್ದಾರೆ. ಬಾಂಗ್ಲಾದೇಶದ ಮೈಮೆನ್ಸಿಂಗ್ ಪ್ರದೇಶದಲ್ಲಿ ಧರ್ಮನಿಂದನೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯನ್ನು ಗುಂಪು ಗುಂಪಾಗಿ ಹೊಡೆದು ಸಾಯಿಸಲಾಯಿತು.

ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ
Protest In Bangladesh

Updated on: Dec 20, 2025 | 3:38 PM

ಢಾಕಾ, ಡಿಸೆಂಬರ್ 20: ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹಿಂದೂ ವ್ಯಕ್ತಿಯನ್ನು ಥಳಿಸಿ, ಕಟ್ಟಿಹಾಕಿ, ಬೆಂಕಿ ಹಚ್ಚಲಾಗಿತ್ತು. ವಿದ್ಯಾರ್ಥಿ ರಾಜಕೀಯ ನಾಯಕನ ಸಾವಿನ ನಂತರ ಬಾಂಗ್ಲಾದೇಶಾದ್ಯಂತ (Bangladesh) ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದ ಕಾರಣದಿಂದಾಗಿ ಧರ್ಮನಿಂದನೆಯ ಆರೋಪದ ಮೇಲೆ ಬಾಂಗ್ಲಾದೇಶದ ಮೈಮೆನ್ಸಿಂಗ್ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ.

ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ನಂತರ 7 ಶಂಕಿತರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಹೇಳಿದ್ದಾರೆ. ಬಂಧಿತರನ್ನು ಎಂಡಿ ಲಿಮನ್ ಸರ್ಕಾರ್, ಎಂಡಿ ತಾರೆಕ್ ಹೊಸೈನ್, ಎಂಡಿ ಮಾಣಿಕ್ ಮಿಯಾ, ಇರ್ಷಾದ್ ಅಲಿ, ನಿಜುಮ್ ಉದ್ದೀನ್, ಅಲೋಮ್‌ಗಿರ್ ಹೊಸೈನ್ ಮತ್ತು ಎಂಡಿ ಮಿರಾಜ್ ಹೊಸೈನ್ ಅಕಾನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು

ಮೈಮೆನ್‌ಸಿಂಗ್‌ನ ಭಾಲುಕಾದಲ್ಲಿ ಧರ್ಮನಿಂದನೆಯ ಆರೋಪದ ಮೇಲೆ ಯುವ ಗಾರ್ಮೆಂಟ್ ಕಾರ್ಖಾನೆ ಕಾರ್ಮಿಕ ದೀಪು ಚಂದ್ರ ದಾಸ್‌ನನ್ನು ಉದ್ರಿಕ್ತ ಗುಂಪೊಂದು ಹೊಡೆದು ಕೊಂದಿತ್ತು. ಸಾವಿರಾರು ಜನರು ನೋಡುತ್ತಿರುವಾಗಲೇ ಆತನನ್ನು ಕಟ್ಟಿಹಾಕಿ, ಕೊಂದು ನಂತರ ಅವರ ದೇಹವನ್ನು ಸುಟ್ಟುಹಾಕಲಾಯಿತು.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ; ಯೂನಸ್ ಸರ್ಕಾರದಿಂದ ಖಡಕ್ ಎಚ್ಚರಿಕೆ

ಈ ಘಟನೆಯು ಬಾಂಗ್ಲಾದೇಶದ ಅಲ್ಪಸಂಖ್ಯಾತರು ಮತ್ತು ನೆರೆಯ ಭಾರತದ ರಾಜಕೀಯ ವಲಯಗಳಲ್ಲಿ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿತು. ಇದು ಕಳೆದ ವರ್ಷದ ವಿದ್ಯಾರ್ಥಿ ದಂಗೆಯಲ್ಲಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳು ಎದುರಿಸುತ್ತಿರುವ ಅಪಾಯವನ್ನು ಒತ್ತಿಹೇಳುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ