ಗಾಜಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 73 ಮಂದಿ ಸಾವು

ಉತ್ತರ ಗಾಜಾ ಪಟ್ಟಿಯಲ್ಲಿರುವ ಬೀಟ್ ಲಾಹಿಯಾ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 73 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 73 ಪ್ಯಾಲೆಸ್ತೇನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಹಮಾಸ್ ಮಾಧ್ಯಮ ವರದಿ ಮಾಡಿದೆ.

ಗಾಜಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 73 ಮಂದಿ ಸಾವು
ಗಾಜಾImage Credit source: The Economist
Follow us
ನಯನಾ ರಾಜೀವ್
|

Updated on:Oct 20, 2024 | 9:20 AM

ಉತ್ತರ ಗಾಜಾ ಪಟ್ಟಿಯಲ್ಲಿರುವ ಬೀಟ್ ಲಾಹಿಯಾ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 73 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 73 ಪ್ಯಾಲೆಸ್ತೇನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಹಮಾಸ್ ಮಾಧ್ಯಮ ವರದಿ ಮಾಡಿದೆ.

ಬಹುಮಹಡಿ ಕಟ್ಟಡವನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲಾಗಿದ್ದು ಸಮೀಪದ ಹಲವು ಮನೆಗಳಿಗೆ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಮಾಸ್​ನ ಲೀಡರ್​ ಸಿನ್ವರ್ ಹತ್ಯೆ ಬೆನ್ನಲ್ಲೇ ಯುದ್ಧ ತೀವ್ರ ಸ್ವರೂಪಕ್ಕೆ ತಿರುಗಿದೆ. ಇದೀಗ ಇಸ್ರೇಲ್ ಪ್ರಧಾನಿ ನೆತನ್ಯಾಹು ಮನೆಯ ಮೇಲೆ ಡ್ರೋನ್ ಅಟ್ಯಾಕ್ ನಡೆದಿದೆ. ಇದ್ರಿಂದ ಸಿಡಿದೆದ್ದ ನೆತನ್ಯಾಹು, ನಮ್ಮನ್ನ ತಡೆಯೋಕೆ ಯಾರಿಂದ್ಲೂ ಸಾಧ್ಯವಿಲ್ಲ ಅಂತಾ ಸಮರ ಸಂದೇಶ ರವಾನಿಸಿದ್ದಾರೆ.

ಹೈಫಾ ನಗರದಲ್ಲಿರೋ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಖಾಸಗಿ ನಿವಾಸದ ಸಮೀಪ ಡ್ರೋನ್ ಸ್ಫೋಟಗೊಂಡಿದೆ. ಈ ದಾಳಿ ನಡೆದಾಗ ನೆತನ್ಯಾಹು ಹಾಗೂ ಅವರ ಪತ್ನಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮತ್ತಷ್ಟು ಓದಿ: ಹಮಾಸ್ ಮುಖ್ಯಸ್ಥನ ಹತ್ಯೆ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಮನೆ ಮೇಲೆ ಡ್ರೋನ್ ದಾಳಿ

ಇಸ್ರೇಲ್‌ನ ಉತ್ತರ ಭಾಗದ ಪ್ರದೇಶಗಳಲ್ಲಿ ಬೆಳಗ್ಗೆಯಿಂದಲೂ ಸೈರನ್‌ ಶಬ್ದ ಕೇಳಿಸುತ್ತಲೇ ಇತ್ತು. ಈ ನಡುವೆ ಲೆಬನಾನ್‌ನಿಂದ ಒಟ್ಟು ಮೂರು ಡ್ರೋನ್‌ಗಳು ಹಾರಿ ಬಂದಿದ್ದವು. ಅವುಗಳಲ್ಲಿ ಎರಡು ಡ್ರೋನ್‌ಗಳನ್ನ ಇಸ್ರೇಲ್ ಸೇನೆ ಹೊಡೆದುರುಳಿಸಿದೆ.

ಉಳಿದ ಒಂದು ಡ್ರೋನ್‌, ನೆತನ್ಯಾಹು ನಿವಾಸದ ಸಮೀಪ ಕಟ್ಟಡವೊಂದಕ್ಕೆ ಅಪ್ಪಳಿಸಿದೆ. ಲೆಬನಾನ್‌ನ ಹಿಜ್ಬುಲ್ಲಾ ಪಡೆಗಳು ಈ ದಾಳಿ ಮಾಡಿದೆ ಎನ್ನಲಾಗ್ತಿದ್ದು, ಅಧಿಕೃತವಾಗಿ ಹೊಣೆ ಹೊತ್ತುಕೊಂಡಿಲ್ಲ.

ಮೊನ್ನೆ ಮೊನ್ನೆಯಷ್ಟೇ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವರ್​ನನ್ನ ಹತ್ಯೆಗೈದ ಬೆನ್ನಲ್ಲೇ ಇದಕ್ಕೆ ಪ್ರತಿಯಾಗಿ ಇಸ್ರೇಲ್ ಪ್ರಧಾನಿಯನ್ನೇ ಟಾರ್ಗೆಟ್ ಮಾಡಲಾಗಿದೆ. ಬೆಂಜಮಿನ್ ನೆತನ್ಯಾಹು ನಿವಾಸವನ್ನೇ ಗುರಿಯಾಗಿಸಿ ಮೂರು ಡ್ರೋನ್​​ಗಳ ಮೂಲಕ ದಾಳಿ ನಡೆದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:20 am, Sun, 20 October 24

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್