Afghanistan: ಅಫ್ಘಾನಿಸ್ತಾನ ಶಾಲೆಯ 80 ಬಾಲಕಿಯರಿಗೆ ವಿಷ ಪ್ರಾಶನ, ಆಸ್ಪತ್ರೆಗೆ ದಾಖಲು

ಅಫ್ಘಾನಿಸ್ತಾನದ ಶಾಲೆಯೊಂದರ 80 ಬಾಲಕಿಯರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಈ ವಿದ್ಯಾರ್ಥಿನಿಯರಿಗೆ ವಿಷ ಪ್ರಾಶನ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಈ ಘಟನೆ ಸಂಭವಿಸಿವೆ.

Afghanistan: ಅಫ್ಘಾನಿಸ್ತಾನ ಶಾಲೆಯ 80 ಬಾಲಕಿಯರಿಗೆ ವಿಷ ಪ್ರಾಶನ, ಆಸ್ಪತ್ರೆಗೆ ದಾಖಲು
ಅಫ್ಘಾನಿಸ್ತಾನ ಬಾಲಕಿಯರು, ಸಾಂದರ್ಭಿಕ ಚಿತ್ರImage Credit source: BBC
Follow us
ನಯನಾ ರಾಜೀವ್
|

Updated on: Jun 05, 2023 | 8:38 AM

ಅಫ್ಘಾನಿಸ್ತಾನದ ಶಾಲೆಯೊಂದರ 80 ಬಾಲಕಿಯರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಈ ವಿದ್ಯಾರ್ಥಿನಿಯರಿಗೆ ವಿಷ ಪ್ರಾಶನ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಈ ಘಟನೆ ಸಂಭವಿಸಿವೆ. ಪ್ರಾಂತೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಮೊಹಮ್ಮದ್ ರಹಮಾನಿ ಮಾತನಾಡಿ, ಸಂಚರಕ್ ಜಿಲ್ಲೆಯಲ್ಲಿ 1 ರಿಂದ 6 ನೇ ತರಗತಿಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಿದ್ದಾರೆ. ನಸ್ವಾನ್-ಎ-ಕಬೋದ್ ಆಬ್ ಶಾಲೆಯಲ್ಲಿ 60 ಮತ್ತು ನಸ್ವಾನ್-ಎ-ಫೈಜಾಬಾದ್ ಶಾಲೆಯಲ್ಲಿ 17 ಮಕ್ಕಳು ವಿಷ ಸೇವಿಸಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ. ಎಲ್ಲಾ ವಿದ್ಯಾರ್ಥಿನಿಯರ ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ವಿಷ ಸೇವಿಸಲು ಕಾರಣವೇನು, ಅವರ ಊಟದಲ್ಲಿ ಯಾರಾದರೂ ವಿಷ ಹಾಕಿದ್ದರೇ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ಅಫ್ಘಾನಿಸ್ತಾನದಲ್ಲಿ ಕಾಲೇಜುಗಳ ತರಗತಿ ಆರಂಭ; ಗಂಡು- ಹೆಣ್ಣು ಮಕ್ಕಳ ನಡುವೆ ಪರದೆ ಹಾಕಿ ಪಾಠ

2021ರ ಆಗಸ್ಟ್​ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ, ಅಫ್ಘಾನ್ ಮಹಿಳೆಯರ ಸ್ವಾತಂತ್ರ್ಯವನ್ನೇ ಗುರಿಯಾಗಿಸಿದರು. ಹೆಣ್ಣುಮಕ್ಕಳು 6 ನೇ ತರಗತಿಗಿಂತ ಹೆಚ್ಚು ಓದುವಂತಿಲ್ಲ, ಕೆಲಸ ಮಾಡುವಂತಿಲ್ಲ ಎನ್ನುವ ಹೊಸ ಕಾನೂನನ್ನು ಜಾರಿಗೆ ತಂದರು.

ಈ ಘಟನೆಯಲ್ಲಿ ವಿಷಕಾರಿ ಹೊಗೆಯಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ, ಈ ಘಟನೆಯ ಹಿಂದೆ ಯಾರಿರಬಹುದು ಯಾವ ರಾಸಾಯನಿಕಗಳನ್ನು ಬಳಸಿದ್ದಾರೆ, ಕಾರಣವೇನು ಎಂಬುದರ ಕುರಿತು ಮಾಹಿತಿ ಲಭ್ಯವಾಗಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ