AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಫ್ಗಾನಿಸ್ತಾನ | ಮಕ್ಕಳನ್ನು ಗುರಿಯಾಗಿಸಿ ಬಾಂಬ್​ ದಾಳಿ; 11 ಚಿಣ್ಣರು ಬಲಿ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 18, 2020 | 7:33 PM

Share

ಕಾಬೂಲ್​: ಆಫ್ಘಾನಿಸ್ತಾನದಲ್ಲಿ ಬಾಂಬ್​ ದಾಳಿ, ಸಾವು ಹೊಸದಲ್ಲ. ಆದರೆ ಈ ಬಾರಿ ಘಜನಿ ಪ್ರಾಂತ್ಯದ ಗಿಲಾನ್ ಜಿಲ್ಲೆಯಲ್ಲಿ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್​ ದಾಳಿಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಹೊತ್ತಲ್ಲಿ ಆಟೊರಿಕ್ಷಾವೊಂದರ ಮೇಲೆ ಬಾಂಬ್​ ದಾಳಿ ನಡೆದಿದೆ. ಮಕ್ಕಳಿಗೆ ಅಗತ್ಯ ಇರುವ ಕೆಲವು ವಸ್ತುಗಳಿದ್ದ ಆಟೊರಿಕ್ಷಾವನ್ನು ಮಕ್ಕಳು ಸುತ್ತುವರಿದಿದ್ದರು. ಆ ಹೊತ್ತಲ್ಲೇ ಬಾಂಬ್​ ದಾಳಿಯಾಗಿದ್ದು, 11 ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಘಜನಿ ಪ್ರಾಂತ್ಯದ ರಾಜ್ಯಪಾಲರ ಕಚೇರಿ ಕಚೇರಿ ವಕ್ತಾರ ವಾಹಿದುಲ್ಲಾ ಜುಮಾಝಾಡಾ ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಇನ್ನಷ್ಟು ಏರಬಹುದು. ಸದ್ಯಕ್ಕೆ ಯಾವ ಉಗ್ರಸಂಘಟನೆಗಳೂ ದಾಳಿ ಹೊಣೆಯನ್ನು ಹೊತ್ತುಕೊಂಡಿಲ್ಲ. ಮಕ್ಕಳನ್ನೇ ಗುರಿಯಾಗಿಸಿಕೊಂಡು ಯಾಕೆ ಬಾಂಬ್​ ದಾಳಿ ನಡೆಸಲಾಯಿತು ಎಂಬ ಬಗ್ಗೆ ತನಿಖೆ ಪ್ರಾರಂಭವಾಗಿದೆ ಎಂದು ವಾಹಿದುಲ್ಲಾ ತಿಳಿಸಿದ್ದಾರೆ.

ಶಾಂತಿಸ್ಥಾಪನೆಗಾಗಿ ತಾಲಿಬಾನಿಗಳು​ ಮತ್ತ ಅಫ್ಗಾನಿಸ್ತಾನ ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದೆ. ಹಿಂಸಾಚಾರ ಕಡಿಮೆ ಮಾಡಲು ಎಲ್ಲ ಪ್ರಯತ್ನಗಳು ನಡೆಯುತ್ತಿದ್ದರೂ ಇತ್ತೀಚಿನ ದಿನಗಳಲ್ಲಿ ಬಾಂಬ್ ದಾಳಿ, ಹಿಂಸೆ ಮತ್ತಷ್ಟು ಹೆಚ್ಚಾಗಿದೆ.

ಅಮೆರಿಕ ರಕ್ಷಣಾ ಕಾಯ್ದೆಗೇ ಕೊಕ್ಕೆ ಹಾಕಿ ಕುಳಿತ ಟ್ರಂಪ್: ಭಾರತದ ಮೇಲೇನು ಪರಿಣಾಮ?

Follow Us
Lakshmi Hegde
Lakshmi Hegde
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ