London: ಲಂಡನ್‌ನಲ್ಲಿ ಭಾರತೀಯ ಮೂಲದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಬ್ರೆಜಿಲ್‌ನ ವ್ಯಕ್ತಿ

ಲಂಡನ್‌ನ ವೆಂಬ್ಲಿನಲ್ಲಿ ಹೈದರಾಬಾದ್‌ನ 27 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ ತೇಜಸ್ವಿನಿ ರೆಡ್ಡಿ ಎಂಬ ಯುವತಿಗೆ ಮಂಗಳವಾರ ಬ್ರೆಜಿಲ್‌ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

London: ಲಂಡನ್‌ನಲ್ಲಿ ಭಾರತೀಯ ಮೂಲದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಬ್ರೆಜಿಲ್‌ನ ವ್ಯಕ್ತಿ
ಸಾಂದರ್ಭಿಕ ಚಿತ್ರ

Updated on: Jun 14, 2023 | 4:01 PM

ಲಂಡನ್‌: ಲಂಡನ್‌ನ (London) ವೆಂಬ್ಲಿನಲ್ಲಿ ಹೈದರಾಬಾದ್‌ನ 27 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ ತೇಜಸ್ವಿನಿ ರೆಡ್ಡಿ ಎಂಬ ಯುವತಿಗೆ ಮಂಗಳವಾರ ಬ್ರೆಜಿಲ್‌ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ತೇಜಸ್ವಿನಿ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಇನ್ನೂ 28 ವರ್ಷ ವಯಸ್ಸಿನ ಇನ್ನೊಬ್ಬ ಯುವತಿಗೂ ಚಾಕುವಿನಿಂದ ಇರಿದು ಗಾಯ ಮಾಡಲಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಹೇಳಿದರು. ಇದೀಗ ಆಕೆಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದಾರೆ. ಈ ಘಟನೆ ವೆಂಬ್ಲಿಯ ನೀಲ್ಡ್ ಕ್ರೆಸೆಂಟ್​​​ನಲ್ಲಿ ನಡೆದಿದೆ.

24 ವರ್ಷದ ಯುವಕ ಮತ್ತು 23 ವರ್ಷದ ಯವತಿಯನ್ನ ಈ ಘಟನೆಗೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಬಂಧಿಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಯುವಕ ಕಸ್ಟಡಿಯಲ್ಲಿದ್ದಾನೆ. ಆದರೆ ಆತನ ಜತೆಗೆ ಇದ್ದ ಯುವತಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರ ಹೇಳಿಕೆ ತಿಳಿಸಿದೆ. ಇದೀಗ ಮತ್ತೊಬ್ಬ ಶಂಕಿತ 23 ವರ್ಷದ ಯುವಕನನ್ನೂ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ.

 

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us