ಚೀನಾದ ಆಕ್ರಮಣಕಾರಿ ಧೋರಣೆಗೆ ತಕ್ಕ ತಿರುಗೇಟು ನೀಡುವ ಸಾಮರ್ಥ್ಯ ಭಾರತಕ್ಕಿದೆ: ಅಮೆರಿಕ
ಹಿಂದೂ ಮಹಾಸಾಗರ ಮತ್ತು ಫೆಸಿಫಿಕ್ ಸಮುದ್ರ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಸ್ಥಾಪನೆಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲು ಎಲ್ಲ ಅವಕಾಶಗಳಿವೆ ಎಂದು ಅಮೆರಿಕಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಓಬ್ರಿಯಾನ್ ಅಭಿಪ್ರಾಯಪಟ್ಟಿದ್ದಾರೆ. ಅವರು ಸಲ್ಲಿಸಿದ 10 ಪುಟಗಳ ದಾಖಲೆಯನ್ನು ಶ್ವೇತಭವನದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ವಾಷಿಂಗ್ಟನ್: ಸಮಾನ ಮನಸ್ಕರೊಂದಿಗೆ ಮೈತ್ರಿ ಹೊಂದುವ ಮೂಲಕ ಭಾರತ ಚೀನಾಕ್ಕೆ ಪ್ರಬಲ ಸ್ಪರ್ಧೆ ನೀಡಬಲ್ಲದು ಎಂದು ಅಮೆರಿಕದ ಶ್ವೇತಭವನ ಅಭಿಪ್ರಾಯಪಟ್ಟಿದೆ.
ಹಿಂದೂ ಮಹಾಸಾಗರ ಮತ್ತು ಫೆಸಿಫಿಕ್ ಸಮುದ್ರ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಸ್ಥಾಪನೆಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲು ಎಲ್ಲ ಅವಕಾಶಗಳಿವೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಓಬ್ರಿಯಾನ್ ಅಭಿಪ್ರಾಯಪಟ್ಟಿದ್ದಾರೆ. ಅವರು ಸಲ್ಲಿಸಿದ 10 ಪುಟಗಳ ದಾಖಲೆಯನ್ನು ಶ್ವೇತಭವನದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಅಮೆರಿಕ ಮತ್ತು ಭಾರತಗಳು ಭದ್ರತೆಯ ವಿಷಯದಲ್ಲಿ ಸ್ಥಿರ ಬಾಂಧವ್ಯ ಹೊಂದಿವೆ. ಚೀನಾದ ಆಕ್ರಮಣಕಾರಿ ಧೋರಣೆಗೆ ತಕ್ಕ ತಿರುಗೇಟು ನೀಡುವ ಸಾಮರ್ಥ್ಯ ಹೊಂದಿರುವ ಭಾರತ ಏಷ್ಯಾದ ಬೃಹತ್ ಶಕ್ತಿಯಾಗಿ ಬೆಳೆಯುತ್ತಿದೆ. ಅಮೆರಿಕ ಮತ್ತು ಭಾರತ ಜಂಟಿಯಾಗಿ ಕೆಲಸ ನಿರ್ವಹಿಸುವ ಮೂಲಕ ಚೀನಾವನ್ನು ಮಟ್ಟಹಾಕಬಹುದು ಎಂದು ಈ ದಾಖಲೆಗಳಲ್ಲಿ ಅಭಿಪ್ರಾಯಪಡಲಾಗಿದೆ.
ಮಹಿಳೆಯರಿಗೆ ಸಂವಹನದ ಹೊಣೆ ಒಪ್ಪಿಸಿದ ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬಿಡೆನ್