ನರೇಂದ್ರ ಮೋದಿ ಬುದ್ಧಿವಂತ ವ್ಯಕ್ತಿ ಎಂದು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನರೇಂದ್ರ ಮೋದಿ(Narendra Modi)  ಓರ್ವ ಬುದ್ಧಿವಂತ ವ್ಯಕ್ತಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಅಧ್ಯಕ್ಷ ಪುಟಿನ್ ಅವರು ಎರಡೂ ದೇಶಗಳ ನಡುವಿನ ಐತಿಹಾಸಿಕ ಸೌಹಾರ್ದ ಸಂಬಂಧವನ್ನು ಶ್ಲಾಘಿಸಿದರು. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯ ವಿಷಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಪುಟಿನ್ ಹೇಳಿದರು. ಪ್ರಧಾನಿ ಮೋದಿಯವರೊಂದಿಗೆ ನಾವು ಉತ್ತಮ ರಾಜಕೀಯ ಸಂಬಂಧವನ್ನು ಹೊಂದಿದ್ದೇವೆ

ನರೇಂದ್ರ ಮೋದಿ ಬುದ್ಧಿವಂತ ವ್ಯಕ್ತಿ ಎಂದು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ನರೇಂದ್ರ ಮೋದಿ-ಪುಟಿನ್Image Credit source: Zee Business
Follow us
|

Updated on: Oct 05, 2023 | 8:25 AM

ಮಾಸ್ಕೋ, ಅಕ್ಟೋಬರ್ 05: ನರೇಂದ್ರ ಮೋದಿ(Narendra Modi)  ಓರ್ವ ಬುದ್ಧಿವಂತ ವ್ಯಕ್ತಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಅಧ್ಯಕ್ಷ ಪುಟಿನ್ ಅವರು ಎರಡೂ ದೇಶಗಳ ನಡುವಿನ ಐತಿಹಾಸಿಕ ಸೌಹಾರ್ದ ಸಂಬಂಧವನ್ನು ಶ್ಲಾಘಿಸಿದರು. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯ ವಿಷಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಪುಟಿನ್ ಹೇಳಿದರು. ಪ್ರಧಾನಿ ಮೋದಿಯವರೊಂದಿಗೆ ನಾವು ಉತ್ತಮ ರಾಜಕೀಯ ಸಂಬಂಧವನ್ನು ಹೊಂದಿದ್ದೇವೆ. ಅವರು ಬಹಳ ಬುದ್ಧಿವಂತ ವ್ಯಕ್ತಿ. ಅವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ.

ಆರ್ಥಿಕ ಭದ್ರತೆ ಮತ್ತು ಸೈಬರ್ ಅಪರಾಧದ ವಿರುದ್ಧದ ಹೋರಾಟದಲ್ಲಿ ರಷ್ಯಾ ಮತ್ತು ಭಾರತದ ನಡುವೆ ಸಹಕಾರದ ಭರವಸೆಯನ್ನು ಪುಟಿನ್ ವ್ಯಕ್ತಪಡಿಸಿದರು. ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾಗವಹಿಸದ ಇಬ್ಬರು ವಿಶ್ವ ನಾಯಕರಲ್ಲಿ ಪುಟಿನ್ ಒಬ್ಬರು.

ಭಾರತವು ಪ್ರಭಾವಿ ಗುಂಪಿನ ಶೃಂಗಸಭೆಯನ್ನು ನವದೆಹಲಿಯಲ್ಲಿ ಆಯೋಜಿಸಿತ್ತು, ಇದರಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ಉನ್ನತ ಜಾಗತಿಕ ನಾಯಕರು ಭಾಗವಹಿಸಿದ್ದರು.

ಮತ್ತಷ್ಟು ಓದಿ: ರಾಜತಾಂತ್ರಿಕ ವಿವಾದ ಬಗೆಹರಿಸಲು ಭಾರತದೊಂದಿಗೆ ಮಾತುಕತೆಗೆ ಸಿದ್ಧ: ಕೆನಡಾ

ಜೂನ್‌ನಲ್ಲಿ ಪುಟಿನ್ ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಶ್ಲಾಘಿಸಿದ್ದರು ಮತ್ತು ಪ್ರಧಾನಿ ಮೋದಿಯನ್ನು ರಷ್ಯಾದ ಸ್ನೇಹಿತ ಎಂದು ಕರೆದಿದ್ದರು. ಕಳೆದ ವರ್ಷ, ಪ್ರಧಾನಿ ಮೋದಿ ಅವರು ರಷ್ಯಾದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಮಾತುಕತೆಯ ಮೂಲಕ ಉಕ್ರೇನ್‌ನೊಂದಿಗಿನ ಸಂಘರ್ಷವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು ಮತ್ತು ಇದು ಯುದ್ಧದ ಯುಗವಲ್ಲ ಎಂದು ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ