ರಸ್ತೆ ಬದಿ ನಿಲ್ಲಿಸಿದ್ದ ಬೈಕ್​ಗಳಿಗೆ ಕಾರು ಡಿಕ್ಕಿ; ಪವಾಡ ಸದೃಶ ರೀತಿಯಲ್ಲಿ ಪಾರಾದ ಯುವಕರು

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 06, 2023 | 10:04 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗೇಟ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್​ಗಳಿಗೆ ಕಾರು ಡಿಕ್ಕಿಯಾಗಿ, ಬೈಕ್​ ಮೇಲೆ ಕುಳಿತಿದ್ದ ಯುವಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ, ಆ.6: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್​(Bike)ಗಳಿಗೆ ಕಾರು(Car) ಡಿಕ್ಕಿಯಾಗಿ, ಬೈಕ್​ ಮೇಲೆ ಕುಳಿತಿದ್ದ ಯುವಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗೇಟ್ ಬಳಿ ನಡೆದಿದೆ. ಅತಿವೇಗವಾಗಿ ಬಂದ ಕಿಯಾ ಕಾರೊಂದು, ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕ್​ಗೆ ಡಿಕ್ಕಿ ಹೊಡೆದು ಮರಕ್ಕೆ ಗುದ್ದಿದೆ. ಈ ವೇಳೆ ಪವಾಡ ಸದೃಶ ರೀತಿಯಲ್ಲಿ ಬೈಕ್ ಸವಾರರು ಅಪಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More