ಅಮೆರಿಕದಲ್ಲಿ ಪನ್ನು ಹತ್ಯೆಗೆ ಸಂಚು ರೂಪಿಸಿದವನು ಇನ್ನುಮುಂದೆ ಭಾರತ ಸರ್ಕಾರದ ಉದ್ಯೋಗಿಯಾಗಿರುವುದಿಲ್ಲ: ಮ್ಯಾಥ್ಯೂ ಮಿಲ್ಲರ್
ಅಮೆರಿಕ ನೆಲದಲ್ಲಿ ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ್ದ ವ್ಯಕ್ತಿ ಇನ್ನುಮುಂದೆ ಭಾರತದ ಉದ್ಯೋಗಿಯಾಗಿರುವುದಿಲ್ಲ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ.
ಅಮೆರಿಕ ನೆಲದಲ್ಲಿ ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ್ದ ವ್ಯಕ್ತಿ ಇನ್ನುಮುಂದೆ ಭಾರತದ ಉದ್ಯೋಗಿಯಾಗಿರುವುದಿಲ್ಲ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ.
ಅಮೆರಿಕದ ಪ್ರಜೆಯೊಬ್ಬರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭಾರತ ಹೇಳಿದ್ದು, ಭಾರತಕ್ಕೆ ಭೇಟಿ ನೀಡಿರುವ ಅಧಿಕಾರಿಗಳ ತಂಡ ವಿದೇಶಾಂಗ ಇಲಾಖೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ ಎಂದು ಅಮೆರಿಕ ತಿಳಿಸಿದೆ.
ನಾವು ಭಾರತದ ಸಹಕಾರದಿಂದ ತೃಪ್ತರಾಗಿದ್ದೇವೆ, ನಾವು ಅವರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ನ್ಯಾಯಾಂಗ ಇಲಾಖೆಯ ದೋಷಾರೋಪಣೆಯಲ್ಲಿ ಹೆಸರಿಸಲಾದ ವ್ಯಕ್ತಿಯು ಇನ್ನು ಮುಂದೆ ಭಾರತ ಸರ್ಕಾರದ ಉದ್ಯೋಗಿಯಾಗಿರುವುದಿಲ್ಲ ಎಂದು ಹೇಳಿದ್ದಾರೆ.
ಅಮೆರಿಕದ ಪ್ರಜೆಯೊಬ್ಬರನ್ನು ಹತ್ಯೆಗೈಯಲು ವಿಫಲವಾದ ಸಂಚಿನಲ್ಲಿ ಭಾರತೀಯ ಸರ್ಕಾರಿ ಅಧಿಕಾರಿಯೊಬ್ಬರು ಭಾಗಿಯಾಗಿದ್ದಾರೆ ಎಂಬ ಅಮೆರಿಕದ ಆರೋಪಗಳನ್ನು ತನಿಖೆ ಮಾಡಲು ಸ್ಥಾಪಿಸಲಾದ ಭಾರತೀಯ ತನಿಖಾ ಸಮಿತಿಯು ಭೇಟಿ ನೀಡಿತ್ತು.
ಮತ್ತಷ್ಟು ಓದಿ: ಗುರುಪತ್ವಂತ್ ಪನ್ನುನ್ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ ನಿಷೇಧ 5 ವರ್ಷಗಳವರೆಗೆ ವಿಸ್ತರಣೆ
ಕಳೆದ ವರ್ಷ ನವೆಂಬರ್‌ನಲ್ಲಿ, ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ನಲ್ಲಿ ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನು ಕೊಲ್ಲುವ ಸಂಚಿನಲ್ಲಿ ಭಾರತೀಯ ಸರ್ಕಾರಿ ಉದ್ಯೋಗಿಯೊಬ್ಬರು ಭಾಗಿಯಾಗಿದ್ದರು.
ಕಳೆದ ವರ್ಷ ಜೂನ್‌ನಲ್ಲಿ ಜೆಕ್ ಗಣರಾಜ್ಯದಲ್ಲಿ ಬಂಧಿಸಲ್ಪಟ್ಟ ಗುಪ್ತಾ ಅವರನ್ನು ಜೂನ್ 14 ರಂದು ಯುಎಸ್‌ಗೆ ಹಸ್ತಾಂತರಿಸಲಾಯಿತು. ಭಾರತವು ಆರೋಪಗಳನ್ನು ನಿರಾಕರಿಸಿದೆ ಆದರೆ ಅದನ್ನು ಪರಿಶೀಲಿಸಲು ಆಂತರಿಕ ತನಿಖಾ ತಂಡವನ್ನು ರಚಿಸಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ