ಅಫ್ಘಾನಿಸ್ತಾನದ ಮಹಿಳೆಗೆ ಅಮೆರಿಕಾ ಮಿಲಿಟರಿ ವಿಮಾನದಲ್ಲಿ ಹೆರಿಗೆ; ತಾಯಿ, ಮಗು ಇಬ್ಬರೂ ಕ್ಷೇಮ
ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಬರುತ್ತಿದ್ದಂತೆಯೇ, ಅಮೆರಿಕದ ವೈದ್ಯಕೀಯ ಸಿಬ್ಬಂದಿ ಗರ್ಭಿಣಿ ಸ್ತ್ರೀಗೆ ವಿಮಾನದಲ್ಲೇ ಚಿಕಿತ್ಸೆ ಆರಂಭಿಸಿದರು. ಹೆರಿಗೆ ನೋವು ಅದಾಗಲೇ ಕಾಣಿಸಿಕೊಂಡಿತ್ತಾದ್ದರಿಂದ ಹೆರಿಗೆ ಮಾಡಿಸಿ ಬಿಟ್ಟರು. ಅದೃಷ್ಟವಶಾತ್ ಯಾವುದೇ ತೊಂದರೆ ಇಲ್ಲದೇ ಹೆರಿಗೆ ಆಗಿದ್ದು, ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ತಾಲಿಬಾನಿಯರ ಕೈವಶವಾಗಿರುವ ಅಫ್ಘಾನಿಸ್ತಾನದ ಕಾಬೂಲ್‌ನಿಂದ ಜರ್ಮನಿಯ ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಹಾರಿದ ವಾಯುಪಡೆಯ ಸಿ-17 ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿರುವುದಾಗಿ ಅಮೆರಿಕ ಮಿಲಿಟರಿ ಭಾನುವಾರ ಮಾಹಿತಿ ನೀಡಿದೆ. ತಾಲಿಬಾನ್ ಹಿಡಿತಕ್ಕೆ ಸಿಲುಕಿ ನಲುಗುತ್ತಿರುವ ಅಫ್ಘಾನಿಸ್ತಾನದಿಂದ ಜನರನ್ನು ಸ್ಥಳಾಂತರ ಮಾಡಲೆಂದು ಅಮೆರಿಕ ದೇಶವು ರ್‍ಯಾಮ್‌ಸ್ಟೈನ್ ವಾಯುನೆಲೆಯನ್ನು ತಾತ್ಕಾಲಿಕವಾಗಿ ಉಪಯೋಗಿಸಿಕೊಳ್ಳುತ್ತಿದೆ. ಈ ರಕ್ಷಣಾ ಕಾರ್ಯಾಚರಣೆ ವೇಳೆ ವಿಮಾನವೇರಿದ್ದ ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ವಿಮಾನದಲ್ಲೇ ಹೆರಿಗೆಯೂ ಆಗಿದೆ.
ರ್‍ಯಾಮ್‌ಸ್ಟೈನ್ ವಾಯುನೆಲೆಯ ಸಹಕಾರದೊಂದಿಗೆ ಅಫ್ಘಾನಿಸ್ತಾನದಲ್ಲಿ ಸಿಲುಕಿರುವವರನ್ನು ರಕ್ಷಿಸುವ ವೇಳೆ ಈ ಘಟನೆಗೆ ಸಿ-17 ವಿಮಾನ ಸಾಕ್ಷಿಯಾಗಿದೆ. ಇದೇ ವಿಚಾರದ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ಕಾಬೂಲ್‌ನಿಂದ ಜರ್ಮನಿಗೆ ಹೊರಟಿದ್ದ ವಿಮಾನದಲ್ಲಿ ಶನಿವಾರದಂದು ಮಹಿಳಾ ಪ್ರಯಾಣಿಕರೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ವಾಯು ಒತ್ತಡವನ್ನು ಮತ್ತಷ್ಟು ಹೆಚ್ಚು ಮಾಡುವ ಸಲುವಾಗಿ ವಿಮಾನ ಹಾರಾಟದ ಎತ್ತರವನ್ನು ಇನ್ನೂ ಹೆಚ್ಚಿಸಲು ವಿಮಾನದ ಕಮಾಂಡರ್ ತೀರ್ಮಾನಿಸಿದ್ದರು. ಆ ರೀತಿ ಮಾಡುವುದರಿಂದ ಗರ್ಭಿಣಿಯ ದೇಹದ ಆರೋಗ್ಯದಲ್ಲಿ ಸ್ಥಿರತೆ ಕಾಪಾಡಿಕೊಳ್ಳುವುದು ಸಾಧ್ಯವಾಗುತ್ತದೆ ಹಾಗೂ ಜೀವಕ್ಕೆ ಅಪಾಯವಾಗದಂತೆ ನೋಡಿಕೊಳ್ಳಲು ಸಹಕಾರವಾಗುತ್ತದೆ ಎನ್ನುವುದು ಅವರಿಗೆ ತಿಳಿದಿತ್ತು ಎಂದು ಹೇಳಿದೆ.
Medical support personnel from the 86th Medical Group help an Afghan mother and family off a U.S. Air Force C-17, call sign Reach 828, moments after she delivered a child aboard the aircraft upon landing at Ramstein Air Base, Germany, Aug. 21. (cont..) pic.twitter.com/wqR9dFlW1o
— Air Mobility Command (@AirMobilityCmd) August 21, 2021
ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಬರುತ್ತಿದ್ದಂತೆಯೇ, ಅಮೆರಿಕದ ವೈದ್ಯಕೀಯ ಸಿಬ್ಬಂದಿ ಗರ್ಭಿಣಿ ಸ್ತ್ರೀಗೆ ವಿಮಾನದಲ್ಲೇ ಚಿಕಿತ್ಸೆ ಆರಂಭಿಸಿದರು. ಹೆರಿಗೆ ನೋವು ಅದಾಗಲೇ ಕಾಣಿಸಿಕೊಂಡಿತ್ತಾದ್ದರಿಂದ ಹೆರಿಗೆ ಮಾಡಿಸಿ ಬಿಟ್ಟರು. ಅದೃಷ್ಟವಶಾತ್ ಯಾವುದೇ ತೊಂದರೆ ಇಲ್ಲದೇ ಹೆರಿಗೆ ಆಗಿದ್ದು, ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಕ್ಷಣವೇ ತಾಯಿ ಮತ್ತು ಮಗುವನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು ಇದೀಗ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಅಮೆರಿಕ ವಾಯುಪಡೆ ಮಾಹಿತಿ ನೀಡಿದೆ.
(Afghan woman gives birth to girl child in US Military aircraft)
ಇದನ್ನೂ ಓದಿ: ಭಾರತದ ಸಹೋದರ ಸಹೋದರಿಯರು ನಮ್ಮನ್ನು ಕಾಪಾಡಿದರು: ಅಫ್ಘಾನ್ ಮಹಿಳೆ