ಅಗತ್ಯವಿದ್ದಾಗ ಅಫ್ಘಾನಿಸ್ತಾನದಲ್ಲಿ ನಾವು ಡ್ರೋನ್ ದಾಳಿ ಮುಂದುವರೆಸುತ್ತೇವೆ; ಅಮೆರಿಕ ಎಚ್ಚರಿಕೆ

ನಾವು ಅಫ್ಘಾನಿಸ್ತಾನದಿಂದ ನಮ್ಮ ಸೇನೆಯನ್ನು ಹಿಂಪಡೆದಿದ್ದೇವೆ ಎಂದ ಮಾತ್ರಕ್ಕೆ ಅಫ್ಘಾನಿಸ್ತಾನದಲ್ಲಿರುವ ಐಸಿಸ್​-ಕೆ (ISIS-K) ಮತ್ತು ಇತರೆ ಸಂಘಟನೆಯ ವಿರುದ್ಧ ವಾಯು ದಾಳಿ ನಡೆಸುವುದಿಲ್ಲ ಎಂದು ಅರ್ಥವಲ್ಲ ಎಂದು ಅಮೆರಿಕ ಸರ್ಕಾರ ಸ್ಪಷ್ಟಪಡಿಸಿದೆ.

ಅಗತ್ಯವಿದ್ದಾಗ ಅಫ್ಘಾನಿಸ್ತಾನದಲ್ಲಿ ನಾವು ಡ್ರೋನ್ ದಾಳಿ ಮುಂದುವರೆಸುತ್ತೇವೆ; ಅಮೆರಿಕ ಎಚ್ಚರಿಕೆ
ಅಮೆರಿಕ ಅಧ್ಯಕ್ಷ ಜೊ ಬೈಡೆನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 01, 2021 | 1:43 PM

ಕಾಬೂಲ್: ಅಫ್ಘಾನಿಸ್ತಾನದಿಂದ ಸಂಪೂರ್ಣವಾಗಿ ತನ್ನ ಸೈನ್ಯವನ್ನು ವಾಪಾಸ್ ಪಡೆದಿರುವ ಅಮೆರಿಕ ಅಗತ್ಯವಿದ್ದರೆ ಅಫ್ಘಾನಿಸ್ತಾನದಲ್ಲಿ ವಾಯು ದಾಳಿಯನ್ನು ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದೆ. ನಾವು ಅಫ್ಘಾನಿಸ್ತಾನದಿಂದ ನಮ್ಮ ಸೇನೆಯನ್ನು ಹಿಂಪಡೆದಿದ್ದೇವೆ ಎಂದ ಮಾತ್ರಕ್ಕೆ ಅಫ್ಘಾನಿಸ್ತಾನದಲ್ಲಿರುವ ಐಸಿಸ್​-ಕೆ (ISIS-K) ಮತ್ತು ಇತರೆ ಸಂಘಟನೆಯ ವಿರುದ್ಧ ವಾಯು ದಾಳಿ (Drone Strike) ನಡೆಸುವುದಿಲ್ಲ ಎಂದು ಅರ್ಥವಲ್ಲ ಎಂದು ಅಮೆರಿಕ ಸರ್ಕಾರ ಘೋಷಿಸಿದೆ.

ಈ ಹಿಂದೆ ಅಮೆರಿಕ ಹಲವು ಬಾರಿ ಅಫ್ಘಾನ್​ನಲ್ಲಿರುವ ಐಸಿಸ್-ಎ ಸಂಘಟನೆಯ ವಿರುದ್ಧ ಡ್ರೋನ್ ದಾಳಿಗಳನ್ನು ನಡೆಸಿತ್ತು. ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಕಾರು ಸ್ಫೋಟದ ಆತ್ಮಾಹುತಿ ದಾಳಿಯಲ್ಲಿ ಅಮೆರಿಕದ 13 ಸೇವಾ ಸಿಬ್ಬಂದಿಯನ್ನು ಕೊಂದಿದ್ದು ನಾವೇ ಎಂದು ಐಸಿಸ್ ಘೋಷಿಸಿಕೊಂಡಿತ್ತು. ಇದಾದ ಬಳಿಕ ಐಸಿಸ್ ಸಂಘಟನೆ ವಿರುದ್ಧ ಅಮೆರಿಕ ವಾಯು ದಾಳಿ ನಡೆಸಿತ್ತು.

ತಾಲಿಬಾನ್​ ವಶವಾಗಿರುವ ಅಫ್ಘಾನಿಸ್ತಾನದಿಂದ ಸೋಮವಾರ ರಾತ್ರಿ ಅಮೆರಿಕ ತನ್ನ ಸೇನಾಪಡೆಯನ್ನು ಹಿಂಪಡೆದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅಮೆರಿಕ ಅಧ್ಯಕ್ಷ ಜೋ ಬಿಡೆನ್​, ಅಫ್ಘಾನಿಸ್ತಾನದಿಂದ ನಮ್ಮ ಸೇನೆ ವಾಪಾಸ್‌ ಕರೆಸಿಕೊಂಡಿರುವ ಹೊಣೆಯನ್ನು ನಾನೇ ಹೊರುತ್ತೇನೆ. 2 ದಶಕಗಳಲ್ಲಿ ಅಫ್ಘಾನಿಸ್ತಾನದಲ್ಲಿ ಸಾಕಷ್ಟು ಘಟನೆಗಳು ನಡೆದಿವೆ. 1,400 ಅಮೆರಿಕದ ಯೋಧರು ಹುತಾತ್ಮರಾಗಿದ್ದಾರೆ, 44 ಸಾವಿರಕ್ಕೂ ಹೆಚ್ಚು ಸೈನಿಕರು ಗಾಯಗೊಂಡಿದ್ದಾರೆ. ನಾವು ಅಫ್ಘಾನಿಸ್ತಾನಕ್ಕಾಗಿಯೇ ಕೋಟ್ಯಂತರ ರೂ. ಖರ್ಚು ಮಾಡಿದ್ದೇವೆ. ಇನ್ನು ನಾವು ಅಮೆರಿಕದ ಸುರಕ್ಷತೆ ಬಗ್ಗೆ ಗಮನಹರಿಸಬೇಕಿದೆ. ಆ ಕಾರಣದಿಂದಾಗಿಯೇ ಸೇನೆಯನ್ನು ವಾಪಾಸ್ ಪಡೆಯುವ ನಿರ್ಧಾರ ತೆಗೆದುಕೊಂಡೆ ಎಂದಿದ್ದರು.

2001ರಿಂದಲೂ ತಾಲಿಬಾನ್ ಸಂಘಟನೆ ಬಲಿಷ್ಠಗೊಳ್ಳುತ್ತಿತ್ತು. ತಾಲಿಬಾನ್ ಸಂಘಟನೆಯ ಸೈನ್ಯದ ಬಲ ಸಾಕಷ್ಟಿದೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ಭಯೋತ್ಪಾದನೆಗೆ ಬಳಸಿಕೊಳ್ಳದಿರಲಿ ಎಂದು ನಾನು ಬಯಸುತ್ತೇನೆ. ನಾವು ಅಫ್ಘಾನಿಸ್ತಾನದಿಂದ ಹೊರೆಬಂದಿದ್ದೇವೆ ಎಂಬ ಮಾತ್ರಕ್ಕೆ ಐಸಿಸ್​ ಮತ್ತು ನಮ್ಮ ನಡುವಿನ ವೈರತ್ವ ಕೊನೆಯಾಯಿತು ಎಂದು ಅರ್ಥವಲ್ಲ. ಐಸಿಸ್​ಗೆ ನಾವು ಇನ್ನೂ ಬುದ್ಧಿ ಕಲಿಸುವುದು ಬಾಕಿಯಿದೆ. ಅಮೆರಿಕಕ್ಕೆ ತೊಂದರೆ ಕೊಡಲು ಬರುವವರನ್ನು ಹುಡುಕಿ ನಾವು ಕೊಲ್ಲುತ್ತೇವೆ, ನಮ್ಮನ್ನು ಕೆಣಕಿದರೆ ಅದಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಜೋ ಬಿಡೆನ್ ಎಚ್ಚರಿಕೆ ನೀಡಿದ್ದರು.

20 ವರ್ಷಗಳ ಕಾಲ ಅಫ್ಘಾನಿಸ್ತಾನದಲ್ಲಿ ಬೀಡು ಬಿಟ್ಟಿದ್ದ ಅಮೆರಿಕ ಸೇನೆ ಅಫ್ಘಾನಿಸ್ತಾನದಿಂದ ತಾಯ್ನಾಡಿಗೆ ವಾಪಾಸಾಗಿದೆ. ಹಲವು ತಿಂಗಳಿನಿಂದ ಅಫ್ಘಾನಿಸ್ತಾನದಿಂದ ಅಮೆರಿಕ ತನ್ನ ಸೈನಿಕರನ್ನು ಸ್ಥಳಾಂತರ ಮಾಡುತ್ತಿತ್ತು. ಕಾಬೂಲನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಆ. 31ರೊಳಗೆ ಅಮೆರಿಕದ ಸೈನಿಕರು ಅಫ್ಘಾನಿಸ್ತಾನವನ್ನು ತೊರೆಯಬೇಕೆಂದು ತಾಲಿಬಾನ್ ಗಡುವು ನೀಡಿತ್ತು. ಆ ಗಡುವು ಮುಗಿಯುವುದರೊಳಗೆ ಅಮೆರಿಕ ಸೈನಿಕ ಪಡೆ ಅಫ್ಘಾನಿಸ್ತಾನದಿಂದ ಕಾಲ್ಕಿತ್ತಿದೆ.

2001ರಲ್ಲಿ ಅಮೆರಿಕದ ಅವಳಿ ಕಟ್ಟಡದ ಮೇಲೆ ಅಲ್​ಖೈದಾ ಉಗ್ರರು ದಾಳಿ ನಡೆಸಿದಾಗ ಒಸಾಮಾ ಬಿನ್ ಲಾಡೆನ್ ಹಾಗೂ ಉಗ್ರ ಸಂಘಟನೆಗಳ ಮೇಲೆ ತಿರುಗಿ ಬಿದ್ದಿದ್ದ ಅಮೆರಿಕ ಅಫ್ಘಾನಿಸ್ತಾನದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಿತ್ತು. ಅಲ್ಲದೆ, ತಾಲಿಬಾನ್ ಉಗ್ರರ ವಿರುದ್ಧ ಸಮರ ಸಾರಿತ್ತು. ತಾಲಿಬಾನ್ ಉಗ್ರರನ್ನು ಅಫ್ಘಾನಿಸ್ತಾನದಿಂದ ಹೊಡೆದೋಡಿಸಿ, ಅವರು ಮತ್ತೆ ಅಫ್ಘಾನ್ ಪ್ರವೇಶ ಮಾಡದಂತೆ 2 ದಶಕಗಳ ಕಾಲ ಕಾವಲು ಕಾದಿತ್ತು. ಆದರೆ, ಇಂಚಿಂಚಾಗಿ ಅಫ್ಘಾನಿಸ್ತಾನವನ್ನು ಆವರಿಸಿಕೊಳ್ಳತೊಡಗಿದ ತಾಲಿಬಾನ್ ಉಗ್ರರು ಅಫ್ಘಾನ್ ರಾಜಧಾನಿ ಕಾಬೂಲ್ ಅನ್ನು ವಶಕ್ಕೆ ಪಡೆದ ಬಳಿಕ ಅಫ್ಘಾನ್ ಸರ್ಕಾರ ತಾಲಿಬಾನ್​ಗೆ ಶರಣಾಗಿತ್ತು. ಬಳಿಕ, ಅಮೆರಿಕ ಸೇನೆಗೆ ವಾಪಾಸ್ ಹೋಗಲು ಆ. 31ರವರೆಗೆ ತಾಲಿಬಾನ್ ಗಡುವು ನೀಡಿತ್ತು. ಕೊನೆಗೂ ಗಡುವಿಗೂ ಮೊದಲೇ ಅಮೆರಿಕ ಸೇನೆ ಅಫ್ಘಾನಿಸ್ತಾನದಿಂದ ಹೊರ ನಡೆದಿದೆ.

ಇದನ್ನೂ ಓದಿ: ಮೊದಲು ಅಮೆರಿಕಾವನ್ನು ಸುರಕ್ಷಿತವಾಗಿಡುತ್ತೇವೆ, ಆಫ್ಘನ್​ಗೆ ಈಗಾಗಲೇ ಕೋಟಿಗಟ್ಟಲೆ ಹಣ ಸುರಿದಾಗಿದೆ: ಜೋ ಬೈಡನ್​

Panjshir: ಅಮೆರಿಕ ಸೇನೆ ಅಫ್ಘಾನ್​ ತೊರೆದ ಬೆನ್ನಲ್ಲೇ ಪಂಜ್​ಶೀರ್​​ ಮೇಲೆ ದಾಳಿ; 7-8 ತಾಲಿಬಾನ್ ಉಗ್ರರ ಹತ್ಯೆ

(Afghanistan Crisis: America will continue to conduct drone strikes in Afghanistan when needed US Government Warn)

Published On - 1:42 pm, Wed, 1 September 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್