AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಪಾಕಿಸ್ತಾನದ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ; ತಾಲಿಬಾನ್ ಸೂಚನೆ

Afghanistan Crisis: ಭಾರತ ಮತ್ತು ಪಾಕಿಸ್ತಾನದ ಆಂತರಿಕ ಜಗಳವನ್ನು ಆ ಎರಡು ದೇಶಗಳೇ ಬಗೆಹರಿಸಿಕೊಳ್ಳಲಿ. ಈ ವಿಷಯಕ್ಕೆ ಅಫ್ಘಾನಿಸ್ತಾವನ್ನು ಎಳೆದು ತರಬೇಡಿ. ನಾವು ಅಫ್ಘಾನಿಸ್ತಾನದ ನೆರೆಯ ದೇಶಗಳೊಂದಿಗೆ ಉತ್ತಮ ಸಂಬಂಧ ಹೊಂದಲು ಇಚ್ಛಿಸುತ್ತೇವೆ ಎಂದು ತಾಲಿಬಾನ್ ಹೇಳಿದೆ.

ಭಾರತ- ಪಾಕಿಸ್ತಾನದ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ; ತಾಲಿಬಾನ್ ಸೂಚನೆ
ತಾಲಿಬಾನ್ ನಾಯಕ ಶೇರ್ ಮೊಹಮ್ಮದ್ ಅಬ್ಬಾಸ್ ಸ್ತಾನಿಕ್​ಜಾಯ್​
TV9 Web
| Edited By: |

Updated on:Aug 30, 2021 | 4:22 PM

Share

ಕಾಬೂಲ್: ಭಾರತ ಮತ್ತು ಪಾಕಿಸ್ತಾನದ ಗಡಿ ವಿವಾದ ಇಂದು- ನಿನ್ನೆಯದಲ್ಲ. ಆ ಎರಡೂ ರಾಷ್ಟ್ರಗಳು ತಮ್ಮ ಗಡಿಯಲ್ಲೇ ಕಿತ್ತಾಡಿಕೊಳ್ಳಲಿ. ಆದರೆ, ಆ ಎರಡು ದೇಶಗಳ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರುವುದು ಸರಿಯಲ್ಲ. ಭಾರತ ಮತ್ತು ಪಾಕಿಸ್ತಾನದ ಆಂತರಿಕ ಜಗಳವನ್ನು ಆ ಎರಡು ದೇಶಗಳೇ ಬಗೆಹರಿಸಿಕೊಳ್ಳಲಿ. ಈ ವಿಷಯಕ್ಕೆ ಅಫ್ಘಾನಿಸ್ತಾವನ್ನು ಎಳೆದು ತರುವುದನ್ನು ನಾವು ಒಪ್ಪುವುದಿಲ್ಲ, ಹಾಗೇ ಯಾವ ದೇಶಕ್ಕೂ ನಮ್ಮ ಅಫ್ಘಾನಿಸ್ತಾನದ ಭೂಮಿಯನ್ನು ಬಳಸಲು ನಾವು ಅವಕಾಶ ನೀಡುವುದಿಲ್ಲ ಎಂದು ಅಫ್ಘಾನಿಸ್ತಾನದ ಮುಂದಿನ ವಿದೇಶಾಂಗ ಸಚಿವ ಹಾಗೂ ತಾಲಿಬಾನ್ ನಾಯಕ ಶೇರ್ ಮೊಹಮ್ಮದ್ ಅಬ್ಬಾಸ್ ಸ್ತಾನಿಕ್​ಜಾಯ್​ ಎಚ್ಚರಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನದ ನೆರೆಹೊರೆಯ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಲು ತಾಲಿಬಾನ್ ಇಷ್ಟಪಡುತ್ತದೆ. ವಿನಾಕಾರಣ ಬೇರೆ ದೇಶಗಳ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ. ಭಾರತದ ಮೇಲೆ ತಾಲಿಬಾನ್ ದಾಳಿ ನಡೆಸುವ ಬಗ್ಗೆ ಮಾಧ್ಯಮಗಳು ಸುಳ್ಳು ಸುದ್ದಿ ಹರಡಿವೆ. ನಮಗೆ ಆ ರೀತಿಯ ಯಾವ ಉದ್ದೇಶವೂ ಇಲ್ಲ ಎಂದು ತಾಲಿಬಾನ್ ನಾಯಕ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಉದ್ದವಾದ ಗಡಿ ಇದೆ. ಆ ಎರಡೂ ದೇಶಗಳು ತಮ್ಮ ಗಡಿಯಲ್ಲಿ ಹೋರಾಡಲಿ. ಆದರೆ, ಅವರು ಇದಕ್ಕಾಗಿ ಅಫ್ಘಾನಿಸ್ತಾನವನ್ನು ಬಳಸಬಾರದು. ಇದರಲ್ಲಿ ಅಫ್ಘಾನಿಸ್ತಾನ ಅಥವಾ ತಾಲಿಬಾನ್ ಪಾತ್ರ ಇರುವುದಿದಲ್ಲ ಎಂದು ತಾಲಿಬಾನ್ ನಯಕ ಘೋಷಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಜಬಿವುಲ್ಲಾ ಮುಜಾಹಿದ್ ಕೂಡ, ಕಾಶ್ಮೀರ ಗಡಿ ವಿಚಾರವಾಗಿ ಭಾರತ ಮತ್ತು ಪಾಕಿಸ್ತಾನವೇ ಪರಿಹಾರ ಕಂಡುಕೊಳ್ಳಬೇಕು. ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ. ಪಾಕಿಸ್ತಾನದ ಜೊತೆಗೆ ನಮಗೆ ಆಪ್ತ ಸಂಬಂಧವಿದ್ದರೂ ಭಾರತ ಮತ್ತು ಪಾಕಿಸ್ತಾನದ ಗಡಿ ವಿಚಾರಕ್ಕೆ ಅಫ್ಘಾನಿಸ್ತಾನದಲ್ಲಿ ರಚನೆಯಾಗಲಿರುವ ನಮ್ಮ ಸರ್ಕಾರ ತಲೆ ಹಾಕುವುದಿಲ್ಲ. ಕಾಶ್ಮೀರದಲ್ಲಿರುವ ವಿವಾದಿತ ಪ್ರದೇಶದ ಬಗ್ಗೆ ಭಾರತ ಉತ್ತಮ ನಿರ್ಧಾರಕ್ಕೆ ಬರುವುದು ಒಳ್ಳೆಯದು ಎಂದು ಹೇಳಿದ್ದರು.

ಕೆಲವು ದಿನಗಳ ಹಿಂದೆ, ಭಾರತಕ್ಕೆ ಎದಿರೇಟು ನೀಡಲೆಂದೇ ಪಾಕಿಸ್ತಾನ ತಾಲಿಬಾನ್‌ ಸಂಘಟನೆಗೆ ಬೆಂಬಲ ನೀಡುತ್ತಿದೆ ಎಂದು ಪರ್ವೇಜ್ ಮುಷರಫ್ ಹೇಳಿದ್ದರು ಎಂದು ಅಫ್ಘಾನಿಸ್ತಾನದ ಮಾಜಿ ಉಪ ವಿದೇಶಾಂಗ ಸಚಿವ ಮೊಹಮ್ಮದ್ ಸಾಯ್ಕಲ್ ಟ್ವೀಟ್ ಮಾಡಿದ್ದರು.

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಲ್ಲಿದ್ದ 170 ನಾಯಿ, ಬೆಕ್ಕುಗಳ ಏರ್‌ಲಿಫ್ಟ್‌ ಮಾಡಲಾಗಿದೆ. ಚಾರಿಟಿ ಮೂಲಕ ಹಣ ಸಂಗ್ರಹಿಸಿ ಬ್ರಿಟನ್‌ಗೆ ಏರ್‌ಲಿಫ್ಟ್‌ ಮಾಡಲಾಗಿದೆ. ಜೊತೆಗೆ, ಸುಮಾರು 200 ವಿಮಾನ, ಹೆಲಿಕಾಪ್ಟರ್​ಗಳನ್ನು ತಾಲಿಬಾನ್ ವಶಕ್ಕೆ ಪಡೆದಿದೆ. ಅಮೆರಿಕ ಬಿಟ್ಟುಹೋದ ಕಾಬೂಲ್ ಏರ್​ಪೋರ್ಟ್​ನಲ್ಲಿರುವ ವಿಮಾನ, ಹೆಲಿಕಾಪ್ಟರ್‌ಗಳನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದಿದೆ.

ಇದನ್ನೂ ಓದಿ: Afghanistan Crisis: 6 ವರ್ಷ ಅಮೆರಿಕ ಸೇನೆಯ ಬಂಧಿಯಾಗಿದ್ದಾತ ಅಫ್ಘಾನಿಸ್ತಾನದ ಮುಂದಿನ ರಕ್ಷಣಾ ಸಚಿವ!

ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಿಟ್ಟುಹೋದ 200ಕ್ಕೂ ಹೆಚ್ಚು ವಿಮಾನ, ಹೆಲಿಕಾಪ್ಟರ್​ಗಳು ತಾಲಿಬಾನ್ ವಶಕ್ಕೆ

(Dont drag Afghanistan in your Border fight Taliban Foreign Affairs Chief to India and Pakistan)

Published On - 4:12 pm, Mon, 30 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ